Ukraine: ಉಕ್ರೇನ್​ನಲ್ಲಿ ಸಿಲುಕಿರುವ ಬೆಂಗಳೂರು ಮೂಲದ ವಿದ್ಯಾರ್ಥಿನಿಯರು; ತುರ್ತು ನೆರವಿಗೆ ಒತ್ತಾಯಿಸಿದ ರಾಹುಲ್ ಗಾಂಧಿ

Russia Ukraine War: ಹಲವು ಭಾರತೀಯ ವಿದ್ಯಾರ್ಥಿಗಳು ಉಕ್ರೇನ್​ನಲ್ಲಿ ಸಿಲುಕಿಕೊಂಡಿದ್ದಾರೆ. ಬೆಂಗಳೂರು ಮೂಲದ ಈರ್ವರು ವಿದ್ಯಾರ್ಥಿನಿಯರು ಸಹಾಯ ಯಾಚಿಸಿರುವ ವಿಡಿಯೋವನ್ನು ಇಂದು (ಶನಿವಾರ) ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.

Ukraine: ಉಕ್ರೇನ್​ನಲ್ಲಿ ಸಿಲುಕಿರುವ ಬೆಂಗಳೂರು ಮೂಲದ ವಿದ್ಯಾರ್ಥಿನಿಯರು; ತುರ್ತು ನೆರವಿಗೆ ಒತ್ತಾಯಿಸಿದ ರಾಹುಲ್ ಗಾಂಧಿ
ಸಹಾಯ ಯಾಚಿಸುತ್ತಿರುವ ವಿದ್ಯಾರ್ಥಿನಿಯರು
Follow us
TV9 Web
| Updated By: shivaprasad.hs

Updated on: Feb 26, 2022 | 12:17 PM

Ukraine Crisis | ಉಕ್ರೇನ್​ನಲ್ಲಿ ವಾಸವಿದ್ದ ಹಲವು ಭಾರತೀಯರು, ವಿದ್ಯಾರ್ಥಿಗಳು ರಷ್ಯಾ ದಾಳಿಯಿಂದ (Russia Ukraine War) ಸಮಸ್ಯೆಗಳಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ಸುರಕ್ಷಿತ ಪ್ರದೇಶಗಳಲ್ಲಿ, ಬಂಕರ್​ಗಳಲ್ಲಿ ಆಶ್ರಯ ಪಡೆಯುತ್ತಿರುವ ಅವರು, ಸಹಾಯಕ್ಕಾಗಿ ಮನವಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಇಂದು ಯುದ್ಧ ಪೀಡಿತ ಪೂರ್ವ ಉಕ್ರೇನ್‌ನಲ್ಲಿ ಸಿಲುಕಿ, ಸಂಕಷ್ಟದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ವೀಡಿಯೊವೊಂದನ್ನು ಟ್ವೀಟ್ ಮಾಡಿದ್ದಾರೆ. ಆ ವಿದ್ಯಾರ್ಥಿಗಳನ್ನು ತಕ್ಷಣ ಭಾರತಕ್ಕೆ ಸ್ಥಳಾಂತರ ಮಾಡಲು ಸಹಾಯ ಮಾಡುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಂಕರ್​ನಲ್ಲಿ ಅಡಗಿಕೊಂಡಿರುವ ವಿದ್ಯಾರ್ಥಿಗಳು ವಿಡಿಯೋ ಸಂದೇಶದ ಮೂಲಕ ಭಾರತೀಯ ರಾಯಭಾರ ಕಚೇರಿಗೆ ಮನವಿ ಮಾಡಿದ್ದಾರೆ. ವಿಡಿಯೋದಲ್ಲಿರುವ ಈರ್ವರೂ ವಿದ್ಯಾರ್ಥಿನಿಯರು ಬೆಂಗಳೂರು ಮೂಲದವರಾಗಿದ್ದು, ತಮಗೆ ಯಾವುದೇ ಸಹಾಯ ದೊರೆಯುತ್ತಿಲ್ಲವೆಂದೂ ತಿಳಿಸಿ, ರಕ್ಷಣೆಗೆ ಮನವಿ ಮಾಡಿದ್ದಾರೆ.

ತಮ್ಮನ್ನು ಬೆಂಗಳೂರಿನ ಮೇಘನಾ ಎಂದು ಪರಿಚಯಿಸಿಕೊಂಡಿರುವ ಯುವತಿ, ದೇಶದ ವಿವಿಧ ಭಾಗಗಳ ಭಾರತೀಯರು ಆಹಾರ, ನೀರು ಇಲ್ಲದೇ, ಉಸಿರುಗಟ್ಟಿಸುವ ವಾತಾವರಣದಲ್ಲಿ ಕಳೆದ 24 ಗಂಟೆಗಳಿಂದ ಬಂಕರ್‌ನಲ್ಲಿ ಸಿಲುಕಿಕೊಂಡಿದ್ದೇವೆ ಎಂದು ಹೇಳಿದ್ದಾರೆ. ‘ನಮಗೆ ಯಾವುದೇ ವಿಶೇಷ ವಿಮಾನಗಳು ಲಭ್ಯವಾಗಿಲ್ಲ. ನಾವು ಈ ಬಂಕರ್‌ನಲ್ಲಿ ಉಳಿದುಕೊಂಡಿದ್ದೇವೆ. ಸಾಧ್ಯವಾದಷ್ಟು ಬೇಗ ಸಹಾಯ ಮಾಡಿ ಎಂದು ಅವರು ವಿನಂತಿಸಿದ್ದಾರೆ. ವಿಡಿಯೋದಲ್ಲಿ ಹಲವು ವಿದ್ಯಾರ್ಥಿಗಳು ಬಂಕರ್​ನಲ್ಲಿ ಆಶ್ರಯ ಪಡೆದಿರುವುದು ಗೋಚರಿಸುತ್ತಿದೆ. ವಿಡಿಯೋದ ಕೊನೆಗೆ ಮೇಘನಾಳ ಸಹೋದರ ಎಂದು ಪರಿಚಯಿಸಿಕೊಂಡಿರುವ ಪುಟಾಣಿ ಬಾಲಕನೋರ್ವ ಸಹೋದರಿಯ ರಕ್ಷಣೆಗೆ ಮನವಿ ಮಾಡಿದ್ದಾನೆ.

ರಾಹುಲ್ ಗಾಂಧಿ ಹಂಚಿಕೊಂಡ ವಿಡಿಯೋ ಇಲ್ಲಿದೆ:

ಸರಿಯಾಗಿ ಸಮನ್ವಯ ಮಾಡದೇ ಗಡಿಗಳಿಗೆ ತೆರಳದಂತೆ ಸೂಚಿಸಿರುವ ಭಾರತ:

ಭಾರತೀಯ ರಾಯಭಾರ ಕಚೇರಿಯು ಇಂದು ಉಕ್ರೇನ್​ನಲ್ಲಿರುವ ಭಾರತೀಯ ಪ್ರಜೆಗಳಿಗೆ ಅಧಿಕಾರಿಗಳೊಂದಿಗೆ ಸರಿಯಾದ ಸಮನ್ವಯವಿಲ್ಲದೇ ಗಡಿ ಭಾಗಕ್ಕೆ ತೆರಳದಂತೆ ಸೂಚಿಸಿದೆ. ಸಾವಿರಾರು ಭಾರತೀಯರು ಉಕ್ರೇನ್​ನಲ್ಲಿ ಸಿಲುಕಿಕೊಂಡಿದ್ದು, ರಕ್ಷಣೆಗೆ ಕಾಯುತ್ತಿದ್ದಾರೆ. ನೆರೆಹೊರೆಯ ರಾಯಭಾರ ಕಚೇರಿಗಳು ಅವಿರತ ಶ್ರಮವಹಿಸಿ, ವಿದ್ಯಾರ್ಥಿಗಳನ್ನು ಕರೆಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಭಾರತ ತಿಳಿಸಿದೆ.

ಉಕ್ರೇನ್​ನಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸಲು ಭಾರತವು ಹಂಗೇರಿ ಮತ್ತು ಪೋಲೆಂಡ್‌ನಿಂದ ಉಕ್ರೇನ್‌ನ ಗಡಿಗಳಿಗೆ ತಂಡಗಳನ್ನು ಕಳುಹಿಸಿದೆ. ರಷ್ಯಾದ ಸೇನೆಯ ದಾಳಿಯ ನಡುವೆ ಉಕ್ರೇನಿಯನ್ ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಅಧಿಕಾರಿಗಳು ಭೂ ಮಾರ್ಗದ ಮೂಲಕ ಪ್ರಯಾಣಿಸುತ್ತಿದ್ದಾರೆ.

ಕರ್ನಾಟಕ ವಿದ್ಯಾರ್ಥಿಗಳ ಮಾಹಿತಿ ಇಲ್ಲಿ ಲಭ್ಯವಿದೆ:

ಉಕ್ರೇನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳ ಹಾಗೂ ಕನ್ನಡಿಗರ ಬಗ್ಗೆ ಮಾಹಿತಿಗೆ ವೆಬ್ ಪೋರ್ಟಲ್ ಸ್ಥಾಪನೆ ಮಾಡಲಾಗಿದೆ. KSDMA ಮಾಹಿತಿಗಾಗಿ ವೆಬ್ ಪೋರ್ಟಲ್ ಸ್ಥಾಪಿಸಿದೆ. ಉಕ್ರೇನಲ್ಲಿ ಸಿಲುಕಿದವರ ವಿವರ, ವಿದೇಶಾಂಗ ಇಲಾಖೆ, ಭಾರತ ಸರ್ಕಾರದ ವೆಬ್ಸೈಟ್ನಿಂದ ಸಂಗ್ರಹಿಸಿದ ಮಾಹಿತಿ, ಹೆಲ್ಪ್ಲೈನ್, ಇ-ಮೇಲ್, ಮಾರ್ಗಸೂಚಿ ಮಾಹಿತಿ, ಎಲ್ಲಾ ಮಾಹಿತಿಗಳನ್ನು ಹೊಂದಿರುವ ವೆಬ್ ಪೋರ್ಟಲ್ ಸ್ಥಾಪಿಸಲಾಗಿದೆ.

ವೆಬ್ ಪೋರ್ಟಲ್ ಲಿಂಕ್: http://Ukraine.Karnataka.tech

ಇದನ್ನೂ ಓದಿ:

ನಾವಿರುವ ಕಟ್ಟಡದ ಬಳಿಯೇ ಬಾಂಬ್ ಹಾಕುತ್ತಿದ್ದಾರೆ; ಉಕ್ರೇನ್​ನಲ್ಲಿರುವ ಬಾಗಲಕೋಟೆ ವಿದ್ಯಾರ್ಥಿಯಿಂದ ವಾಟ್ಸಾಪ್ ಸಂದೇಶ

Russia Ukraine Crisis Live: ಉಕ್ರೇನ್​ ಮೇಲೆ ರಷ್ಯಾ ದಾಳಿ; ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ರಷ್ಯಾಕ್ಕೆ ಶರಣಾಗಲು ಸೇನೆಗೆ ಸೂಚನೆ ಕೊಟ್ಟರಾ ಅಧ್ಯಕ್ಷ ಝೆಲೆನ್ಸ್ಕಿ?

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ