AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಲಿಫೋರ್ನಿಯಾ ಪೊಲೀಸರ ಗುಂಡೇಟಿಗೆ ಭಾರತೀಯ ಟೆಕ್ಕಿ ಬಲಿ

ಈ ತಿಂಗಳ ಆರಂಭದಲ್ಲಿ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ 29 ವರ್ಷದ ಭಾರತೀಯ ಟೆಕ್ಕಿ ಮೊಹಮ್ಮದ್ ನಿಜಾಮುದ್ದೀನ್ ಅವರನ್ನು ಪೊಲೀಸರು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಸೆಪ್ಟೆಂಬರ್ 3 ರಂದು ನಿಜಾಮುದ್ದೀನ್ ಮತ್ತು ಅವರ ರೂಮ್‌ಮೇಟ್ ನಡುವೆ ನಡೆದ ವಾಗ್ವಾದದ ನಂತರ ಈ ಗುಂಡಿನ ದಾಳಿ ನಡೆದಿದೆ. ಸೆಪ್ಟೆಂಬರ್ 18 ರಂದು ಅವರ ಸಾವಿನ ಬಗ್ಗೆ ಬಹಳ ಸಮಯದ ನಂತರ ತಿಳಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.ತಮ್ಮ ಮಗನ ದೇಹವನ್ನು ಮೆಹಬೂಬ್‌ನಗರಕ್ಕೆ ಮರಳಿ ತರಲು ಸಹಾಯ ಮಾಡುವಂತೆ ಮನವಿ ಮಾಡಿದರು.

ಕ್ಯಾಲಿಫೋರ್ನಿಯಾ ಪೊಲೀಸರ ಗುಂಡೇಟಿಗೆ ಭಾರತೀಯ ಟೆಕ್ಕಿ ಬಲಿ
ನಿಜಾಮುದ್ದೀನ್
ನಯನಾ ರಾಜೀವ್
|

Updated on: Sep 19, 2025 | 9:41 AM

Share

ಕ್ಯಾಲಿಫೋರ್ನಿಯಾ, ಸೆಪ್ಟೆಂಬರ್ 19: ಅಮೆರಿಕದ ಕ್ಯಾಲಿಫೋರ್ನಿಯಾ ಪೊಲೀಸರು ಭಾರತೀಯ ಟೆಕ್ಕಿ ಮೇಲೆ ಗುಂಡು ಹಾರಿಸಿ ಹತ್ಯೆ(Murder) ಮಾಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆ ಅಮೆರಿಕದ ಟೆಕ್ಸಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಲಾಗಿತ್ತು. ಅದಾದ ಕೆಲವೇ ದಿನಗಳ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ 30 ವರ್ಷದ ಭಾರತೀಯ ಎಂಜಿನಿಯರ್‌ನನ್ನು ಹತ್ಯೆ ಮಾಡಲಾಗಿದೆ.

ಸೆಪ್ಟೆಂಬರ್ 3 ರಂದು ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಮೊಹಮ್ಮದ್ ನಿಜಾಮುದ್ದೀನ್ ತನ್ನ ರೂಮ್‌ಮೇಟ್‌ನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ತಡೆಯಲು ಬೆನ್ನಟ್ಟುತ್ತಿದ್ದಾಗ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ, ಇದರಿಂದಾಗಿ ಆತ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗನ ಮೃತದೇಹವನ್ನು ಭಾರತಕ್ಕೆ ತರುವಂತೆ ಪೋಷಕರ ಮನವಿ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ನಿವಾಸಿ ಮೊಹಮ್ಮದ್ ಅವರ ತಂದೆ ಮೊಹಮ್ಮದ್ ಹಸ್ನುದ್ದೀನ್ ಅವರು ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. ಅವರು ತಮ್ಮ ಮಗನ ಶವವನ್ನು ಭಾರತಕ್ಕೆ ತರುವಂತೆ ವಿದೇಶಾಂಗ ಸಚಿವರಿಗೆ ಮನವಿ ಮಾಡಿದ್ದಾರೆ. ತಮ್ಮ ಮಗ ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ಹೋಗಿದ್ದ ಮತ್ತು ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ವಾಸಿಸುತ್ತಿದ್ದ.

ಮತ್ತಷ್ಟು ಓದಿ: ಗೇಟ್ ಬಳಿ ಕಾದು ಗುಂಡು ಹಾರಿಸಿ ಕೊಲೆ; ಪಾಟ್ನಾದಲ್ಲಿ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಸಿಸಿಟಿವಿ ವಿಡಿಯೋದಲ್ಲಿ ಸೆರೆ

ಆದರೆ ಸ್ನೇಹಿತನಿಂದ ಅವರ ಕೊಲೆಯ ಸುದ್ದಿ ಬಂದಿತ್ತು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ. ಜನಾಂಗೀಯ ತಾರತಮ್ಯದಿಂದಾಗಿ ಈ ಜಗಳ ನಡೆದಿರಬಹುದು ಎಂದು ಅವರು ಶಂಕಿಸಿದ್ದಾರೆ, ಅದನ್ನು ಅವರು ತಮ್ಮ ಕುಟುಂಬಕ್ಕೆ ತಿಳಿಸಿದ್ದರು.

ತಮ್ಮ ಮಗನ ಶವವನ್ನು ಸಾಂತಾ ಕ್ಲಾರಾದ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಂದೆ ಹಸ್ನುದ್ದೀನ್ ಹೇಳಿದ್ದಾರೆ. ಮೊಹಮ್ಮದ್ ಯಾರ ಮೇಲೂ ದಾಳಿ ಮಾಡುವ ವ್ಯಕ್ತಿ ಅಲ್ಲ,  ವಿದೇಶಾಂಗ ಸಚಿವ ಜೈಶಂಕರ್  ಅವರ ಬಳಿ ತಮ್ಮ ಮಗನ ಹತ್ಯೆಯ ಬಗ್ಗೆ ವಿವರವಾದ ಮಾಹಿತಿಯನ್ನು ಪಡೆದುಕೊಳ್ಳುವಂತೆ ಒತ್ತಾಯಿಸಿದರು.

ನಿಜಾಮುದ್ದೀನ್ ಚಾಕು ಹಿಡಿದುಕೊಂಡು ಮತ್ತೆ ದಾಳಿ ಮಾಡಲು ಸಿದ್ಧರಿದ್ದಂತೆ ಕಂಡುಬಂದಿದ್ದು, ಅವರಿಗೆ ಗುಂಡು ಹಾರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಎರಡು ಚಾಕುಗಳು ಪತ್ತೆಯಾಗಿದ್ದು, ಗಾಯಗೊಂಡಿದ್ದ ನಿಜಾಮುದ್ದೀನ್ ಅವರ ರೂಮ್‌ಮೇಟ್ ಪ್ರಸ್ತುತ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ