ಭಾರತದ ಕಾನೂನುಬದ್ಧ ಇಂಧನ ವಹಿವಾಟನ್ನು ರಾಜಕೀಯಗೊಳಿಸಬಾರದು; ರಷ್ಯಾದಿಂದ ತೈಲ ಖರೀದಿ ಬಗ್ಗೆ ಮೂಲಗಳ ಹೇಳಿಕೆ

ರಷ್ಯಾ ತೈಲ ಮತ್ತು ಇತರ ಸರಕುಗಳನ್ನು ಭಾರೀ ರಿಯಾಯಿತಿಯಲ್ಲಿ ನೀಡುತ್ತಿದೆ. ನಾವು ಅದನ್ನು ತೆಗೆದುಕೊಳ್ಳಲು ಸಂತೋಷಪಡುತ್ತೇವೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.

ಭಾರತದ ಕಾನೂನುಬದ್ಧ ಇಂಧನ ವಹಿವಾಟನ್ನು ರಾಜಕೀಯಗೊಳಿಸಬಾರದು; ರಷ್ಯಾದಿಂದ ತೈಲ ಖರೀದಿ ಬಗ್ಗೆ ಮೂಲಗಳ ಹೇಳಿಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 18, 2022 | 6:35 PM

ನವದೆಹಲಿ: ಭಾರತದ ಕಾನೂನುಬದ್ಧ ಇಂಧನ ವಹಿವಾಟುಗಳನ್ನು ರಾಜಕೀಯಗೊಳಿಸಬಾರದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದರಿಂದ ಅಮೆರಿಕದ ನಿರ್ಬಂಧಗಳನ್ನು ಉಲ್ಲಂಘಿಸಿದಂತೆ ಆಗುವುದಿಲ್ಲ. ಆದರೆ ಅದು ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ಬೆಂಬಲಿಸಿದಂತೆ ಆಗುತ್ತದೆ ಎಂದು ಅಮೆರಿಕಾ ಇಂದು ಹೇಳಿಕೆ ನೀಡಿದೆ. ದೇಶದ ಅಗ್ರ ತೈಲ ಸಂಸ್ಥೆಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ಈಗಾಗಲೇ 3 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಖರೀದಿಸಿದೆ ಎಂದು ಮೂಲಗಳು ತಿಳಿಸಿವೆ. ರಷ್ಯಾವು ಚಾಲ್ತಿಯಲ್ಲಿರುವ ಅಂತಾರಾಷ್ಟ್ರೀಯ ದರಗಳಿಗೆ ರಿಯಾಯಿತಿ ನೀಡಿದೆ. ರಷ್ಯಾ ತೈಲ ಮತ್ತು ಇತರ ಸರಕುಗಳನ್ನು ಭಾರೀ ರಿಯಾಯಿತಿಯಲ್ಲಿ ನೀಡುತ್ತಿದೆ. ನಾವು ಅದನ್ನು ತೆಗೆದುಕೊಳ್ಳಲು ಸಂತೋಷಪಡುತ್ತೇವೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.

ರಷ್ಯಾ ಪ್ರಸ್ತಾಪಿಸಿದ ರಿಯಾಯಿತಿ ದರದ ತೈಲ ಖರೀದಿಸಲು ಭಾರತ ನಿರ್ಧರಿಸುವ ಸಾಧ್ಯತೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅಮೆರಿಕದ ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಪ್ಸಾಕಿ, ಭಾರತ ರಷ್ಯಾದಿಂದ ಅಗ್ಗದ ಬೆಲೆಗೆ ತೈಲ ಖರೀದಿಸಿದರೆ ಅದು ನಿರ್ಬಂಧಗಳನ್ನು ಉಲ್ಲಂಘಿಸಿದಂತೆ ಆಗುತ್ತದೆ ಎಂದು ನನಗನಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಪ್ಸಾಕಿ, ನಿರ್ಬಂಧಗಳ ಉಲ್ಲಂಘನೆಯಾಗದಿದ್ದರೂ ಈ ಮೂಲಕ ಭಾರತ ರಷ್ಯಾಗೆ ಬೆಂಬಲ ನೀಡಿದಂತಾಗುತ್ತದೆ ಎಂದು ಹೇಳಿದ್ದರು.

“ಈ ಸಮಯದಲ್ಲಿ ಇತಿಹಾಸದ ಪುಸ್ತಕಗಳನ್ನು ಬರೆಯುವಾಗ ನೀವು ಎಲ್ಲಿ ನಿಲ್ಲಲು ಬಯಸುತ್ತೀರಿ ಎಂಬುದರ ಕುರಿತು ಯೋಚಿಸಿ. ರಷ್ಯಾದ ನಾಯಕತ್ವಕ್ಕೆ ಬೆಂಬಲ ನೀಡುವುದು ಆಕ್ರಮಣಕ್ಕೆ ಬೆಂಬಲ ನೀಡಿದಂತೆ. ಇದರಿಂದ ಮುಂದಿನ ದಿನಗಳಲ್ಲಿ ವಿನಾಶಕ್ಕೆ ದಾರಿಯಾಗಬಹುದು” ಎಂದು ಅವರು ಹೇಳಿದ್ದರು.

ಯುಎಸ್ ಮತ್ತು ಇತರ ಪಾಶ್ಚಿಮಾತ್ಯ ರಾಷ್ಟ್ರಗಳು ಮಾಸ್ಕೋದ ಮೇಲೆ ನಿರ್ಬಂಧಗಳನ್ನು ವಿಧಿಸುತ್ತಿದ್ದಂತೆ, ರಷ್ಯಾ ತೈಲ ಮತ್ತು ಇತರ ಸರಕುಗಳನ್ನು ಭಾರತ ಮತ್ತು ಇತರ ದೊಡ್ಡ ಆಮದುದಾರರಿಗೆ ರಿಯಾಯಿತಿ ದರದಲ್ಲಿ ನೀಡಲು ಪ್ರಾರಂಭಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲವನ್ನು ಖರೀದಿಸುವ ವಿಚಾರಕ್ಕೆ ಪುಷ್ಠಿ ನೀಡುವಂತೆ ಮಾತನಾಡಿದ್ದಾರೆ. ಭಾರತವು ಎಲ್ಲಾ ಸಮಯದಲ್ಲೂ ತೈಲದ ಪ್ರಮುಖ ಆಮದುದಾರನಾಗಿ ಎಲ್ಲಾ ಆಯ್ಕೆಗಳನ್ನು ಪರಿಗಣಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಭಾರತವು ತನ್ನ ಶಕ್ತಿಯ ಅವಶ್ಯಕತೆಗಳನ್ನು ಪೂರೈಸಲು ಆಮದುಗಳ ಮೇಲೆ ಹೆಚ್ಚು ಅವಲಂಬಿತವಾಗಿದೆ. ನಮ್ಮ ಕಚ್ಚಾ ತೈಲದ ಅಗತ್ಯತೆಯ ಸುಮಾರು ಶೇ. 85ರಷ್ಟನ್ನು ನಾವು ಆಮದು ಮಾಡಿಕೊಳ್ಳಬೇಕಾಗಿದೆ. ಹೀಗಾಗಿ, ರಿಯಯಿತಿ ದರದಲ್ಲಿ ತೈಲ ಒದಗಿಸುವ ಆಯ್ಕೆಯ ಬಗ್ಗೆಯೂ ನಾವು ಯೋಚಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Ukraine Crisis: 20 ದಿನದಲ್ಲಿ 7,000 ರಷ್ಯನ್ ಸೈನಿಕರ ಸಾವು; ರಷ್ಯಾ- ಉಕ್ರೇನ್ ಬಿಕ್ಕಟ್ಟಿನ 10 ಮುಖ್ಯಾಂಶಗಳು ಇಲ್ಲಿವೆ

Russia- Ukraine Crisis: ರಷ್ಯಾದಿಂದ ಕೈಕೊಡವಿ ಎದ್ದು ಬರೋದು ಈ ಬ್ರ್ಯಾಂಡ್​ಗಳಿಗೆ ಸಲೀಸಿಲ್ಲ ಏಕೆ ಗೊತ್ತಾ?

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್