Fire Accident: ಇಂಡೋನೇಷ್ಯಾ ಜೈಲಿನಲ್ಲಿ ಬೆಂಕಿ ಅವಘಡ; 41 ಕೈದಿಗಳು ಸಾವು, 72 ಜನರಿಗೆ ಗಾಯ
ಇಂದು ಮುಂಜಾನೆ 3 ಗಂಟೆ ವೇಳೆಗೆ ಇಂಡೋನೇಷ್ಯಾದ ಜೈಲಿನೊಳಗೆ ಬೆಂಕಿ ಹೊತ್ತಿಕೊಂಡಿದ್ದು, 41 ಕೈದಿಗಳು ಸಾವನ್ನಪ್ಪಿದ್ದು, 72 ಕೈದಿಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ.
ಜಕಾರ್ತ: ಇಂಡೋನೇಷ್ಯಾದ ಜೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, 41 ಕೈದಿಗಳು ಸಾವನ್ನಪ್ಪಿದ್ದಾರೆ. ಸಾಕಷ್ಟು ಕೈದಿಗಳು ಗಾಯಗೊಂಡಿದ್ದಾರೆ. ಬುಧವಾರ ನಸುಕಿನ ಜಾವ ಈ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ ಕೈದಿಗಳೆಲ್ಲ ಗಾಢ ನಿದ್ರೆಯಲ್ಲಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ, ಬೆಂಕಿ ಆರಿಸಲು ಪ್ರಯತ್ನಿಸಿವೆ. ಆದರೆ, ಅಷ್ಟರಲ್ಲಾಗಲೇ ಜೈಲಿನ ಬಹುತೇಕ ಭಾಗ ಸುಟ್ಟುಹೋಗಿತ್ತು.
ಇಂದು ಮುಂಜಾನೆ 3 ಗಂಟೆ ವೇಳೆಗೆ ಇಂಡೋನೇಷ್ಯಾದ ಜೈಲಿನೊಳಗೆ ಬೆಂಕಿ ಹೊತ್ತಿಕೊಂಡಿದ್ದು, ಅಕ್ಕಪಕ್ಕದ ಕಟ್ಟಡದಲ್ಲಿದ್ದವರು ಬೆಂಕಿ ಹೊತ್ತಿಕೊಂಡಿರುವುದನ್ನು ವಿಡಿಯೋ ಮಾಡಿದ್ದಾರೆ. ಆ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಬೆಂಕಿ ದುರಂತದಲ್ಲಿ 41 ಕೈದಿಗಳು ಸಾವನ್ನಪ್ಪಿದ್ದು, 72 ಕೈದಿಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ.
ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಈ ದುರಂತ ಸಂಭವಿಸಿರುವ ಸಾಧ್ಯತೆಯೂ ಇದೆ. ಈ ವೇಳೆ ಜೈಲಿನಲ್ಲಿ ಸುಮಾರು 2,000 ಕೈದಿಗಳು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2019ರಲ್ಲಿ ಕೂಡ ಇದೇ ರೀತಿಯ ಘಟನೆ ಸಂಭವಿಸಿತ್ತು. ಆ ಬೆಂಕಿ ದುರಂತದಲ್ಲಿ 100 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದರು. 2019ರಲ್ಲಿ ಇಂಡೋನೇಷ್ಯಾದ ಬೆಂಕಿ ಪೊಟ್ಟಣದ ಕಾರ್ಖಾನೆಯಲ್ಲಿ ಬೆಂಕಿ ದುರಂತ ಸಂಭವಿಸಿ 7 ಮಕ್ಕಳು ಸೇರಿದಂತೆ 30 ಜನರು ಸಾವನ್ನಪ್ಪಿದ್ದರು.
ಇದನ್ನೂ ಓದಿ: Crime News: ದರೋಡೆ ಬಳಿಕ ಮನೆಯವರ ಕಾಲಿಗೆ ಬಿದ್ದ ಕಳ್ಳರು; 6 ತಿಂಗಳಲ್ಲಿ ಕದ್ದ ಹಣ ವಾಪಾಸ್ ಕೊಡುತ್ತೇವೆಂದು ಪರಾರಿ!
Crime News: ಬಾಯ್ಫ್ರೆಂಡ್ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್ಫ್ರೆಂಡ್ ಮಾಡಿದ್ದೇನು ಗೊತ್ತಾ?
(Indonesia Prison Fire Accident Kills At Least 41 Prisoners Dozens Injured)