AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indonesia Volcano: ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟ; 13 ಮಂದಿ ಸಾವು

ಜ್ವಾಲಾಮುಖಿ ಸ್ಫೋಟದ ಪರಿಣಾಮ ಜಾವಾ ಪ್ರಾಂತ್ಯದ ಹತ್ತಿರದ ನಗರಗಳಾದ ಲಮಾಂಗ್ ಮತ್ತು ಮಲಂಗ್ ನಡುವಿನ ಸೇತುವೆ ಕುಸಿತಗೊಂಡಿದೆ. ದುರಂತದಲ್ಲಿ ಸಾವನ್ನಪ್ಪಿದ 13 ಜನರಲ್ಲಿ ಇಬ್ಬರನ್ನು ಮಾತ್ರ ಗುರುತಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ತಂಡದ ಅಧಿಕಾರಿ ಅಬ್ದುಲ್ ಮುಹಾರಿ ತಿಳಿಸಿದ್ದಾರೆ.

Indonesia Volcano: ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟ; 13 ಮಂದಿ ಸಾವು
ಇಂಡೋನೇಷ್ಯಾ ಜ್ವಾಲಾಮುಖಿ (ಪಿಟಿಐ ಚಿತ್ರ)
TV9 Web
| Edited By: |

Updated on:Dec 05, 2021 | 11:36 AM

Share

 ಇಂಡೋನೇಷ್ಯಾದ ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದೆ. ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಜ್ವಾಲಾಮುಖಿ ಸ್ಪೋಟಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ವಿಪತ್ತು ನಿರ್ವಹಣಾ ತಂಡ 900ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದಾರೆ. ಶನಿವಾರ ಈ ಘಟನೆ ನಡೆದಿದೆ.  ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಜಾವಾ ದ್ವೀಪದ ಅತೀ ಎತ್ತರದ ಪರ್ವತವಾದ ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದೆ. ಇದರಿಂದ ಲಾವಾರಸವು ಹತ್ತಿರದಲ್ಲಿದ್ದ ಪೂರ್ವ ಜಾವಾ ಪ್ರಾಂತ್ಯದ ಹಳ್ಳಿಗಳನ್ನು ಆವರಿಸಿದ್ದು ಜನರು ಭಯಭೀತರಾಗಿ ಓಡಿಹೋಗಿದ್ದಾರೆ.

ಜ್ವಾಲಾಮುಖಿ ಸ್ಫೋಟದ ಪರಿಣಾಮ ಜಾವಾ ಪ್ರಾಂತ್ಯದ ಹತ್ತಿರದ ನಗರಗಳಾದ ಲಮಾಂಗ್ ಮತ್ತು ಮಲಂಗ್ ನಡುವಿನ ಸೇತುವೆ ಕುಸಿತಗೊಂಡಿದೆ. ದುರಂತದಲ್ಲಿ ಸಾವನ್ನಪ್ಪಿದ 13 ಜನರಲ್ಲಿ ಇಬ್ಬರನ್ನು ಮಾತ್ರ ಗುರುತಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ತಂಡದ ಅಧಿಕಾರಿ ಅಬ್ದುಲ್ ಮುಹಾರಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದುರಂತದಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ 902 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸೆಮೇರು ಸುಮಾರು 3,600 ಮೀ ಎತ್ತರದ ಪರ್ವತವಾಗಿದೆ. ಇದು ಇಂಡೋನೇಷ್ಯಾದ 130 ಸಕ್ರಿಯ ಜ್ವಾಲಾಮುಖಿಗಳಲ್ಲಿ ಒಂದಾಗಿದೆ. ಕಳೆದ ಜನವರಿಯಲ್ಲಿಯೂ ಈ ಜ್ವಾಲಾಮುಖಿ ಸ್ಫೋಟಗೊಂಡಿತ್ತು. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಆದರೆ ಈ ಬಾರಿ 13 ಜನ ಸಾವನ್ನಪ್ಪಿದ್ದು 35ಕ್ಕೂ ಅಧಿಕ ಮಂದಿ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಇಂಡೋನೇಷ್ಯಾ ಅತೀ ಹೆಚ್ಚು ಜ್ವಾಲಾಮುಖಿಗಳು ಸಕ್ರಿಯವಾಗಿರುವ ದೇಶವಾಗಿದೆ.

ಮಧ್ಯ ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ಸೆಮೇರು ಪರ್ವತದಲ್ಲಿ ಜವಾಲಾಮುಖಿ ಸ್ಪೋಟಗೊಂಡ ಒಂದು ದಿನದ ನಂತರ ಅಂದರೆ ಇಂದು (ಭಾನುವಾರ ಡಿ.5)  ಮಧ್ಯ ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದೆ. ಮಧ್ಯ ಇಂಡೋನೇಷ್ಯಾದ ಉತ್ತರ ಸುಲವೇಸಿ ಪ್ರಾಂತ್ಯದಲ್ಲಿ 6.2ರಷ್ಟು ತೀವ್ರವಾಗಿ ಭೂಮಿ ಕಂಪಿಸಿದೆ. ಆದರೆ ಪ್ರಾಣ ಹಾನಿ ಸಂಭವಿಸಿಲ್ಲ. ಜತೆಗೆ ಯಾವುದೇ ಸುನಾಮಿ ಮುನ್ಸೂಚನೆ ಇಲ್ಲ ಎಂದು ಹವಾಮಾನ ಮತ್ತು ಭೂಶಾಸ್ತ್ರ ವಿಭಾಗದ ಮುಖ್ಯಸ್ಥ ಡಾರಿಯೊನೋ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Mohammed Siraj: ನ್ಯೂಜಿಲೆಂಡ್ 62 ರನ್​ಗೆ ಆಲೌಟ್ ಮಾಡಲು ಮಾಸ್ಟರ್ ಪ್ಲಾನ್ ರೂಪಿಸಿದ್ದ ಮೊಹಮ್ಮದ್ ಸಿರಾಜ್: ಏನಂದ್ರು ಕೇಳಿ

Published On - 11:14 am, Sun, 5 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ