Bangladesh Violence: ಮಧ್ಯಂತರ ಸರ್ಕಾರ ರಚನೆ’; ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಘೋಷಣೆ

|

Updated on: Aug 05, 2024 | 6:05 PM

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಬೇರೆ ದೇಶಕ್ಕೆ ಪಲಾಯನ ಮಾಡಿದ್ದಾರೆ. ಆದರೆ, ಅವರು ಉಸ್ತುವಾರಿ ಸರ್ಕಾರದ ನೇತೃತ್ವ ವಹಿಸುವ ಬಗ್ಗೆ ಇನ್ನೂ ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ವಕಾರ್-ಉಜ್-ಝಮಾನ್ ಸ್ಪಷ್ಟಪಡಿಸಿಲ್ಲ.

Bangladesh Violence: ಮಧ್ಯಂತರ ಸರ್ಕಾರ ರಚನೆ; ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಘೋಷಣೆ
ಬಾಂಗ್ಲಾದೇಶದ ಸೇನೆ
Follow us on

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಪಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮತ್ತು ಭಾರೀ ಪ್ರತಿಭಟನೆಗಳ ಬಳಿಕ ಢಾಕಾದಿಂದ ಪಲಾಯನ ಮಾಡಿದ್ದಾರೆ. ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಜಮಾನ್ ಅವರು ಮಧ್ಯಂತರ ಸರ್ಕಾರವನ್ನು ರಚಿಸುವುದಾಗಿ ಹೇಳಿದ್ದಾರೆ. ನಾನು ಸಂಪೂರ್ಣವಾಗಿ ಬಾಂಗ್ಲಾದೇಶದ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಿದ್ದೇನೆ. ನಾವು ಮಧ್ಯಂತರ ಸರ್ಕಾರವನ್ನು ರಚಿಸುತ್ತೇವೆ ಎಂದು ವಕಾರ್ ಹೇಳಿದ್ದಾರೆ.

ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಜಮಾನ್ ಮಿಲಿಟರಿ ಡ್ರೆಸ್ ಮತ್ತು ಕ್ಯಾಪ್ ಧರಿಸಿದ್ದರು. ಆದರೆ, ಅವರು ಉಸ್ತುವಾರಿ ಸರ್ಕಾರವನ್ನು ಮುನ್ನಡೆಸುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೊದಲ ಬಾರಿಗೆ ಬಾಂಗ್ಲಾದೇಶದ ದೂರದರ್ಶನದಲ್ಲಿ ಮಾತನಾಡಿರುವ ಅವರು, ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದ್ದಾರೆ. “ದೇಶವು ಬಹಳಷ್ಟು ಸಂಕಷ್ಟಗಳನ್ನು ಅನುಭವಿಸಿದೆ, ಆರ್ಥಿಕತೆಗೆ ಹೊಡೆತ ಬಿದ್ದಿದೆ, ಅನೇಕ ಜನರು ಕೊಲ್ಲಲ್ಪಟ್ಟಿದ್ದಾರೆ. ಇದು ಹಿಂಸಾಚಾರವನ್ನು ನಿಲ್ಲಿಸುವ ಸಮಯ. ನನ್ನ ಭಾಷಣದ ನಂತರ ಪರಿಸ್ಥಿತಿ ಸುಧಾರಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಪ್ರತಿಭಟನೆಗಳಿಂದಾಗಿ ನಾವು ಏನನ್ನೂ ಪರಿಹರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಬಾಂಗ್ಲಾದೇಶದ ಸೇನೆಯು ಬಾಂಗ್ಲಾದೇಶದ ಆಡಳಿತವನ್ನು ವಶಪಡಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ.

ಇದನ್ನೂ ಓದಿ: Sheikh Hasina: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಪ್ರತಿಭಟನೆ; ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ, ಭಾರತಕ್ಕೆ ಪಲಾಯನ

ಮಧ್ಯಂತರ ಸರ್ಕಾರವನ್ನು ರಚಿಸಲು ಅಧ್ಯಕ್ಷರೊಂದಿಗೆ ಮಾತನಾಡುವುದಾಗಿ ಜನರಲ್ ಹೇಳಿದ್ದಾರೆ. ಪ್ರಮುಖ ವಿರೋಧ ಪಕ್ಷಗಳು ಮತ್ತು ನಾಗರಿಕ ಸಮಾಜದ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವರ್ಷದ ಆರಂಭದಲ್ಲಿ ಸೇನೆಯ ಉನ್ನತ ಹುದ್ದೆಗೆ ನೇಮಕಗೊಂಡ ವಕಾರ್ ಅವರು ವೃತ್ತಿಜೀವನದ ಪದಾತಿ ದಳದ ಅಧಿಕಾರಿಯಾಗಿದ್ದು, ಸುಮಾರು 4 ದಶಕಗಳನ್ನು ಮಿಲಿಟರಿಯಲ್ಲಿ ಕಳೆದಿದ್ದಾರೆ. “ಪರಿಸ್ಥಿತಿ ಉತ್ತಮಗೊಂಡರೆ, ತುರ್ತು ಪರಿಸ್ಥಿತಿಯ ಅಗತ್ಯವಿಲ್ಲ” ಎಂದು ಅವರು ಹೇಳಿದ್ದಾರೆ.


ಯಾವುದೇ ಗುಂಡು ಹಾರಿಸದಂತೆ ಸೇನೆ ಮತ್ತು ಪೊಲೀಸರಿಗೆ ಸೂಚಿಸಿರುವುದಾಗಿ ವಕಾರ್ ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ ಶೇಖ್ ಹಸೀನಾ ನೇತೃತ್ವದ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ