AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್​ಪಿಜಿ ಕೊರತೆ ಇನ್ನಿಲ್ಲ; ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್

ಹಾರ್ಮುಜ್ ಜಲಸಂಧಿಯ ಮೂಲಕ ಭಾರತಕ್ಕೆ ತೈಲ ಮತ್ತು ಗ್ಯಾಸ್ ಟ್ಯಾಂಕರ್​​ಗಳನ್ನು ಸಾಗಿಸಲು ಅನುಮತಿ ನೀಡಲು ಭಾರತದ ವಿದೇಶಾಂಗ ಸಚಿವ ಇರಾನ್ ಸಚಿವರ ಬಳಿ ಮನವಿ ಮಾಡಿದ್ದರು. ಆ ಮನವಿಗೆ ಸ್ಪಂದಿಸಿದ್ದ ಇರಾನ್ ತನ್ನ ಒಪ್ಪಿಗೆಯನ್ನು ನೀಡಿತ್ತು. ಅದರ ಬೆನ್ನಲ್ಲೇ 40,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊಂದಿರುವ ಭಾರತದ 2 ಗ್ಯಾಸ್ ಟ್ಯಾಂಕರ್​ ಹಡಗುಗಳಿಗೆ ಇರಾನ್ ಸುರಕ್ಷಿತ ಮಾರ್ಗವನ್ನು ಒದಗಿಸಿದೆ. ಹೀಗಾಗಿ, 2 ಟ್ಯಾಂಕರ್​ಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಬಂದಿದೆ.

ಎಲ್​ಪಿಜಿ ಕೊರತೆ ಇನ್ನಿಲ್ಲ; ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್
Indian Gas Tankers
ಸುಷ್ಮಾ ಚಕ್ರೆ
|

Updated on:Mar 13, 2026 | 10:24 PM

Share

ನವದೆಹಲಿ, ಮಾರ್ಚ್ 13: ಇರಾನ್ ಹಾಗೂ ಇಸ್ರೇಲ್-ಅಮೆರಿಕದ ನಡುವೆ ಸಂಘರ್ಷ ಆರಂಭವಾದ ನಂತರ ಜಗತ್ತಿನಾದ್ಯಂತ ಹಲವೆಡೆ ಇಂಧನ, ಎಲ್​ಪಿಜಿ ಬಿಕ್ಕಟ್ಟು (LPG Crisis) ತಲೆದೋರಿತ್ತು. ಅದಕ್ಕೆ ಭಾರತವೂ ಹೊರತಾಗಿರಲಿಲ್ಲ. ಆದರೆ, ಕೊನೆಗೂ ಭಾರತದಲ್ಲಿ ಉದ್ಭವವಾಗಿದ್ದ ಎಲ್​ಪಿಜಿ ಕೊರತೆಗೆ ಪರಿಹಾರ ಸಿಕ್ಕಂತಾಗಿದೆ. ಭಾರತ ಮತ್ತು ಇರಾನ್ ಹಾರ್ಮುಜ್ ಜಲಸಂಧಿಯಿಂದ ಹಡಗುಗಳ ಸಾಗಣೆಗೆ ಒಪ್ಪಂದ ಮಾಡಿಕೊಂಡಿವೆ. ಈಗಾಗಲೇ 40,000 ಮೆಟ್ರಿಕ್ ಟನ್ ಬೃಹತ್ ಎಲ್‌ಪಿಜಿಯನ್ನು ಹೊತ್ತ ಶಿವಾಲಿಕ್ ಎಂಬ ಹಡಗು ಹಾರ್ಮುಜ್ ಜಲಸಂಧಿಯನ್ನು ದಾಟಿ ಬಂದಿದೆ. ಮತ್ತೊಂದು ಹಡಗು ಕೂಡ ಈ ಜಲಸಂಧಿಯನ್ನು ದಾಟಿ ಮುಂದಿನ ವಾರದೊಳಗೆ ಭಾರತದಲ್ಲಿ ಡಾಕ್ ಮಾಡಲಿದೆ ಎಂದು ವರದಿಗಳು ತಿಳಿಸಿವೆ.

ಇರಾನ್ ಮತ್ತು ಭಾರತದ ನಡುವೆ ನಡೆದ ಹಲವಾರು ಸುತ್ತಿನ ಮಾತುಕತೆಗಳ ನಂತರ ಇರಾನ್ ಭಾರತೀಯ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯನ್ನು ದಾಟಲು ಅವಕಾಶ ನೀಡಿತ್ತು. ಇದರ ಬೆನ್ನಲ್ಲೇ ಈ ದೊಡ್ಡ ಬೆಳವಣಿಗೆ ಸಂಭವಿಸಿದೆ. ಶಿವಾಲಿಕ್ ಹಡಗು ಇರಾನ್‌ನ ಬಂದರ್ ಅಬ್ಬಾಸ್ ಬಂದರಿನಿಂದ ಹೊರಟು ಕೆಲವು ಗಂಟೆಗಳ ಹಿಂದೆ ಹಾರ್ಮುಜ್ ಜಲಸಂಧಿಯನ್ನು ದಾಟಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳಿಗೆ ಸುರಕ್ಷಿತ ಮಾರ್ಗಕ್ಕೆ ಅವಕಾಶ; ಇರಾನ್ ರಾಯಭಾರಿ ಮಾಹಿತಿ

ಇಂದು ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಅವರು ಭಾರತಕ್ಕೆ ಸುರಕ್ಷಿತ ಮಾರ್ಗದ ಬಗ್ಗೆ ಪಾಸಿಟಿವ್ ಹೇಳಿಕೆಗಳನ್ನು ನೀಡಿದ್ದರು. “ಭಾರತ ನಮ್ಮ ಸ್ನೇಹಿತನಾಗಿರುವುದರಿಂದ ನೀವು ಎರಡು ಅಥವಾ ಮೂರು ಗಂಟೆಗಳಲ್ಲಿ ಅದರ ಪರಿಣಾಮವನ್ನು ನೋಡುತ್ತೀರಿ. ಇರಾನ್ ಮತ್ತು ಭಾರತ ಈ ಪ್ರದೇಶದಲ್ಲಿ ಸಾಮಾನ್ಯ ಹಿತಾಸಕ್ತಿಗಳನ್ನು ಹಂಚಿಕೊಳ್ಳುತ್ತವೆ” ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಭಾರತದ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯನ್ನು ಹಾದುಹೋಗಲು ಅನುಮತಿ ಸಿಕ್ಕಿದೆ. ಇಂದು ಮಧ್ಯಾಹ್ನ ಯಾವುದೇ ತೊಂದರೆಯಿಲ್ಲದೆ ಭಾರತೀಯ ಹಡಗು ಜಲಸಂಧಿಯನ್ನು ದಾಟಿದೆ.

ಎರಡು ವಾರಗಳ ಹಿಂದೆ ಅಮೆರಿಕ-ಇರಾನ್ ಯುದ್ಧ ಪ್ರಾರಂಭವಾದಾಗಿನಿಂದ, ಇರಾನ್ ಜಲಸಂಧಿಯನ್ನು ದಿಗ್ಬಂಧನಗೊಳಿಸುವುದಾಗಿ ಘೋಷಿಸಿತ್ತು. ಹೀಗಾಗಿ, ಭಾರತದ ದೊಡ್ಡ ಟ್ಯಾಂಕರ್‌ಗಳು ಅಲ್ಲೇ ಸಿಕ್ಕಿಹಾಕಿಕೊಂಡಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:22 pm, Fri, 13 March 26

Follow Us
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ