ಇರಾಕ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದ ಇರಾನ್
ಇಸ್ರೇಲಿ ಬೇಹುಗಾರಿಕಾ ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಇರಾಕ್ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇರಾಕ್‌ನ ಕುರ್ದಿಸ್ತಾನ್‌ನಲ್ಲಿ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ (IRGC) ಹೇಳಿದೆ. ಇಸ್ರೇಲ್‌ನ ಬೇಹುಗಾರಿಕಾ ಸಂಸ್ಥೆ ಮೊಸಾದ್‌ನ ಪ್ರಧಾನ ಕಚೇರಿಯನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ.

ಸಿರಿಯಾದ ಅಲೆಪ್ಪೊ ಗ್ರಾಮಾಂತರ ಪ್ರದೇಶದಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ. ಮೆಡಿಟರೇನಿಯನ್ ಸಮುದ್ರದ ದಿಕ್ಕಿನಿಂದ 4 ಕ್ಷಿಪಣಿಗಳು ಬಂದಿತ್ತು ಎಂದು ಸಿರಿಯನ್ ಅಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್ಸ್ ಮಾನಿಟರ್ ಹೇಳಿದೆ.
ಈ ಪ್ರದೇಶದಲ್ಲಿ ಇರಾನ್ ವಿರೋಧಿಗಳ ಬೇಹುಗಾರಿಕೆ ಕೇಂದ್ರಗಳು ಮತ್ತು ಪಡೆಗಳನ್ನು ನಾಶಮಾಡಲು ಇಂದು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ಸುದ್ದಿವಾಹಿನಿಗಳು ವರದಿ ಮಾಡಿವೆ. ಇರಾನ್‌ನ ಕುರ್ದಿಸ್ತಾನ್‌ನ ರಾಜಧಾನಿ ಎರ್ಬಿಲ್‌ನಿಂದ ಈಶಾನ್ಯಕ್ಕೆ ಸುಮಾರು 40 ಕಿಮೀ ದೂರದಲ್ಲಿರುವ ಯುಎಸ್ ಕಾನ್ಸುಲೇಟ್ ಮತ್ತು ನಾಗರಿಕರ ನಿವಾಸಗಳ ಸಮೀಪವಿರುವ ಪ್ರದೇಶದಲ್ಲಿ ಸ್ಫೋಟದ ಸದ್ದು ಕೇಳಿಸಿತು.
ದಾಳಿಯಲ್ಲಿ ಉದ್ಯಮಿ ಸಾವು ಕ್ಷಿಪಣಿ ದಾಳಿಯಲ್ಲಿ ಉದ್ಯಮಿ ಕುರ್ದಿಶ್ ಉದ್ಯಮಿ ಪೆಶ್ರಾ ದಿಜಾಯಿ ಮತ್ತು ಅವರ ಕುಟುಂಬದ ಸದಸ್ಯರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇರಾನ್ ಈ ಹಿಂದೆ ಇರಾಕ್‌ನ ಉತ್ತರ ಕುರ್ದಿಸ್ತಾನ್ ಪ್ರದೇಶದಲ್ಲಿ ದಾಳಿ ನಡೆಸಿತ್ತು. ಕುರ್ದಿಸ್ತಾನ್ ಸೆಕ್ಯುರಿಟಿ ಕೌನ್ಸಿಲ್ ಆಫ್ ಇರಾಕ್ ಪ್ರಕಾರ, ಈ ದಾಳಿಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 6 ಜನರು ಗಾಯಗೊಂಡಿದ್ದಾರೆ.
ಮತ್ತಷ್ಟು ಓದಿ: Iran Terror Attack: ಇರಾನ್‌ನ ಷಿಯಾ ಯಾತ್ರಾ ಸ್ಥಳದಲ್ಲಿ ಉಗ್ರರಿಂದ ಗುಂಡಿನ ದಾಳಿ; 15 ಮಂದಿ ಸಾವು
ದಕ್ಷಿಣದ ನಗರಗಳಾದ ಕೆರ್ಮನ್ ಮತ್ತು ರಾಸ್ನಲ್ಲಿ ಇರಾನಿಯನ್ನರನ್ನು ಕೊಂದ ಭಯೋತ್ಪಾದಕ ಗುಂಪುಗಳು ಇತ್ತೀಚೆಗೆ ನಡೆಸಿದ ದಾಳಿಗೆ ಪ್ರತಿಕ್ರಿಯೆಯಾಗಿ ಸಿರಿಯಾ ಮೇಲಿನ ದಾಳಿ ನಡೆದಿದೆ ಎಂದು ಹೇಳಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ