AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೂಚಿಸ್ತಾನದಲ್ಲಿ ವೈಮಾನಿಕ ದಾಳಿ, ಇರಾನ್​ಗೆ ಬೆದರಿಕೆ ಹಾಕಿದ ಪಾಕಿಸ್ತಾನ

ಭಾರತದ ನಂತರ ಇದೀಗ ಇರಾನ್ ಕೂಡ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿದೆ. ಇರಾನ್ ಮಂಗಳವಾರ ಬಲೂಚಿಸ್ತಾನದಲ್ಲಿ ವೈಮಾನಿಕ ದಾಳಿ ನಡೆಸಿತು ಮತ್ತು ಹಲವಾರು ಭಯೋತ್ಪಾದಕ ಗುಂಪುಗಳ ನೆಲೆಗಳನ್ನು ಧ್ವಂಸಗೊಳಿಸಿದೆ, ಇದು ಪಾಕಿಸ್ತಾನವನ್ನು ಬೆಚ್ಚಿಬೀಳಿಸಿದೆ. ಈ ಕ್ರಮಕ್ಕೆ ಸಂಬಂಧಿಸಿದಂತೆ, ಗಂಭೀರ ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ಪಾಕಿಸ್ತಾನವು ಇರಾನ್‌ಗೆ ಬೆದರಿಕೆ ಹಾಕಿದೆ.

ಬಲೂಚಿಸ್ತಾನದಲ್ಲಿ ವೈಮಾನಿಕ ದಾಳಿ, ಇರಾನ್​ಗೆ ಬೆದರಿಕೆ ಹಾಕಿದ ಪಾಕಿಸ್ತಾನ
ವೈಮಾನಿಕ ದಾಳಿ
ನಯನಾ ರಾಜೀವ್
|

Updated on: Jan 17, 2024 | 8:22 AM

Share

ಭಾರತದ ನಂತರ ಇದೀಗ ಇರಾನ್(Iran) ಕೂಡ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿದೆ. ಇರಾನ್ ಮಂಗಳವಾರ ಬಲೂಚಿಸ್ತಾನದಲ್ಲಿ ವೈಮಾನಿಕ ದಾಳಿ ನಡೆಸಿತು ಮತ್ತು ಹಲವಾರು ಭಯೋತ್ಪಾದಕ ಗುಂಪುಗಳ ನೆಲೆಗಳನ್ನು ಧ್ವಂಸಗೊಳಿಸಿದೆ, ಇದು ಪಾಕಿಸ್ತಾನವನ್ನು ಬೆಚ್ಚಿಬೀಳಿಸಿದೆ. ಈ ಕ್ರಮಕ್ಕೆ ಸಂಬಂಧಿಸಿದಂತೆ, ಗಂಭೀರ ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ಪಾಕಿಸ್ತಾನ Pakistan)ವು ಇರಾನ್‌ಗೆ ಬೆದರಿಕೆ ಹಾಕಿದೆ.

ಬಲೂಚಿಸ್ತಾನದಲ್ಲಿರುವ ಭಯೋತ್ಪಾದಕ ಗುಂಪುಗಳ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ಇರಾನ್ ಹೇಳಿಕೊಂಡಿದೆ. ಈ ಘಟನೆಯನ್ನು ಪಾಕಿಸ್ತಾನವೇ ದೃಢಪಡಿಸಿದೆ. ಇರಾನ್‌ನ ವೈಮಾನಿಕ ದಾಳಿಯಲ್ಲಿ ಇಬ್ಬರು ಮುಗ್ಧ ಮಕ್ಕಳು ಸಾವನ್ನಪ್ಪಿದ್ದರೆ, ಮೂವರು ಹುಡುಗಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಹೇಳುತ್ತದೆ. ಈ ಘಟನೆಯನ್ನು ಪಾಕಿಸ್ತಾನ ಖಂಡಿಸಿದೆ.

ಭಯೋತ್ಪಾದಕ ಸಂಘಟನೆ ಜೈಶ್ ಅಲ್-ಅದಲ್ ನೆಲೆಗಳ ಮೇಲೆ ದಾಳಿ ಮಾಡಿದೆ ಎಂದು ಇರಾನ್ ಹೇಳಿದೆ. ಇರಾನ್‌ನ ರೆವಲ್ಯೂಷನರಿ ಗಾರ್ಡ್‌ಗಳು ಇರಾಕ್ ಮತ್ತು ಸಿರಿಯಾದಲ್ಲಿ ಕ್ಷಿಪಣಿ ದಾಳಿ ನಡೆಸಿದ ಒಂದು ದಿನದ ನಂತರ ಇಲ್ಲಿ ದಾಳಿ ನಡೆಸಿದೆ.

ಈ ಭಯೋತ್ಪಾದಕ ಗುಂಪು ಪಾಕಿಸ್ತಾನದ ಗಡಿ ಪ್ರದೇಶಗಳಲ್ಲಿ ಇರಾನ್ ಭದ್ರತಾ ಸಿಬ್ಬಂದಿಯ ಮೇಲೆ ದಾಳಿ ಮಾಡಿದೆ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ದಾಳಿಯನ್ನು ಬಲವಾಗಿ ಖಂಡಿಸಿದೆ, ಪಾಕಿಸ್ತಾನವು ತನ್ನ ವಾಯುಪ್ರದೇಶವನ್ನು ಇರಾನ್ ಉಲ್ಲಂಘಿಸಿರುವುದನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ, ಇದರಲ್ಲಿ ಇಬ್ಬರು ಮುಗ್ಧ ಮಕ್ಕಳು ಸಾವನ್ನಪ್ಪಿದರು ಮತ್ತು ಮೂವರು ಹೆಣ್ಣುಮಕ್ಕಳು ಗಾಯಗೊಂಡಿದ್ದಾರೆ.

ಇದು ಪಾಕಿಸ್ತಾನದ ಸಾರ್ವಭೌಮತ್ವದ ಉಲ್ಲಂಘನೆಯಾಗಿದ್ದು, ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಪಾಕ್ ಎಚ್ಚರಿಸಿದೆ.

ವರದಿಯ ಪ್ರಕಾರ, ಜೈಶ್ ಅಲ್-ಅದ್ಲ್ ಅನ್ನು 2012 ರಲ್ಲಿ ರಚಿಸಲಾಯಿತು, ಇದನ್ನು ಇರಾನ್ ಭಯೋತ್ಪಾದಕ ಸಂಘಟನೆ ಎಂದು ಪರಿಗಣಿಸುತ್ತದೆ. ಇದು ಇರಾನ್‌ನ ಆಗ್ನೇಯ ಪ್ರಾಂತ್ಯದ ಸಿಸ್ತಾನ್-ಬಲೂಚಿಸ್ತಾನ್ ಮೂಲದ ಸುನ್ನಿ ಭಯೋತ್ಪಾದಕ ಗುಂಪು. ಜೈಶ್ ಅಲ್-ಅದ್ಲ್ ಕಳೆದ ಕೆಲವು ವರ್ಷಗಳಿಂದ ಇರಾನ್ ಭದ್ರತಾ ಪಡೆಗಳ ಮೇಲೆ ಹಲವಾರು ದಾಳಿಗಳನ್ನು ನಡೆಸಿದೆ. ಡಿಸೆಂಬರ್‌ನಲ್ಲಿ, ಜೈಶ್ ಅಲ್-ಅದ್ಲ್ ಸಿಸ್ತಾನ್-ಬಲುಚಿಸ್ತಾನ್‌ನಲ್ಲಿ ಪೋಲಿಸ್ ಚೆಕ್​ ಪೋಸ್ಟ್‌ ಮೇಲಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು, ಘಟನೆಯಲ್ಲಿ 11 ಪೊಲೀಸರು ಸಾವನ್ನಪ್ಪಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ