Israel Iran War: ಇಸ್ರೇಲ್​ ಮೇಲೆ ಇರಾನ್​ನಿಂದ ಕ್ಷಿಪಣಿ ದಾಳಿ

ಇಸ್ರೇಲ್​ ಮೇಲೆ ಇರಾನ್ ಕ್ಷಿಪಣಿ ಹಾಗೂ ಡ್ರೋನ್​ ದಾಳಿ ನಡೆಸಿದೆ. ಕಿಲ್ಲರ್ ಡ್ರೋನ್​ಗಳು, ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಕ್ರೂಸ್​ ಕ್ಷಿಪಣಿಗಳು ಸೇರಿದಂತೆ ಇರಾನ್ 200ಕ್ಕೂ ಹೆಚ್ಚು ಬಗೆಯ ಡ್ರೋನ್​ ದಾಳಿಗಳನ್ನು ನಡೆಸಿದೆ. ಸಿರಿಯಾದ ರಾಜಧಾಮಿ ಡಮಾಸ್ಕಸ್​ನಲ್ಲಿರುವ ತನ್ನ ರಾಯಭಾರ ಕಚೇರಿ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ಪ್ರತಿಯಾಗಿ ಇರಾನ್ ಈ ಕ್ರಮ ಕೈಗೊಂಡಿದೆ. ಇರಾನ್ ಸೇನೆಯು ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ಇಸ್ರೇಲ್ ಮೇಲೆ ದಾಳಿ ಮಾಡಿದೆ.

ಇಸ್ರೇಲ್ ಮೇಲೆ ಇರಾನ್ ದಾಳಿ
Follow us
|

Updated on: Apr 14, 2024 | 8:58 AM

ಇಸ್ರೇಲ್​ ಮೇಲೆ ಇರಾನ್ ಕ್ಷಿಪಣಿ ಹಾಗೂ ಡ್ರೋನ್​ ದಾಳಿ ನಡೆಸಿದೆ. ಕಿಲ್ಲರ್ ಡ್ರೋನ್​ಗಳು, ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಕ್ರೂಸ್​ ಕ್ಷಿಪಣಿಗಳು ಸೇರಿದಂತೆ ಇರಾನ್ 200ಕ್ಕೂ ಹೆಚ್ಚು ಬಗೆಯ ಡ್ರೋನ್​ ದಾಳಿಗಳನ್ನು ನಡೆಸಿದೆ. ಸಿರಿಯಾದ ರಾಜಧಾಮಿ ಡಮಾಸ್ಕಸ್​ನಲ್ಲಿರುವ ತನ್ನ ರಾಯಭಾರ ಕಚೇರಿ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ಪ್ರತಿಯಾಗಿ ಇರಾನ್ ಈ ಕ್ರಮ ಕೈಗೊಂಡಿದೆ. ಇರಾನ್ ಸೇನೆಯು ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ಇಸ್ರೇಲ್ ಮೇಲೆ ದಾಳಿ ಮಾಡಿದೆ.

ಇರಾನ್ ಇಸ್ರೇಲ್ ಮೇಲೆ 100ಕ್ಕೂಹೆಚ್ಚು ಡ್ರೋನ್​ಗಳನ್ನು ಹಾರಿಸಿದೆ. ಇರಾನ್ ದಾಳಿಯ ನಂತರ ಇಸ್ರೇಲ್ ರಕ್ಷಣಾ ಪಡೆ ತೀವ್ರ ಕಟ್ಟೆಚ್ಚರವಹಿಸಿದೆ. ಇಸ್ರೇಲಿ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲೇ ಡ್ರೋನ್ ಮತ್ತು ಕ್ಷಿಪಣಿದಾಳಿಗಳನ್ನು ತಡೆಹಿಡಿಯಲಾಗಿದೆ.

ಡ್ರೋನ್​ಗಳು ಹಾಗೂ ಕ್ಷಿಪಣಿಗಳನ್ನು ಗಾಳಿಯಲ್ಲಿ ಹೊಡೆದುರುಳಿಸುವಲ್ಲಿ ಅಮೆರಿಕ ಹಾಗೂ ಬ್ರಿಟಿಷ್ ವಾಯುಪಡೆಗಳು ಇಸ್ರೇಲ್​ಗೆ ಸಹಾಯ ಮಾಡಿವೆ. ಇಸ್ರೇಲ್ ದಕ್ಷಿಣ ಭಾಗದಲ್ಲಿರುವ ಸೇನಾ ನೆಲೆಯಲ್ಲಿ ಸಣ್ಣಪುಟ್ಟ ಹಾನಿಗಳಾಗಿವೆ. ಈ ದಾಳಿಯಿಂದ ಯಾವುದೇ ಸಾವು, ನೋವು ಸಂಭವಿಸಿಲ್ಲ.

ಮತ್ತಷ್ಟು ಓದಿ: ಇಸ್ರೇಲ್​ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ದಾಳಿಯ ದೃಷ್ಟಿಯಿಂದ ಮಧ್ಯಪ್ರಾಚ್ಯದ ಅನೇಕ ದೇಶಗಳು ತಮ್ಮ ವಾಯುನೆಲೆಯನ್ನು ಮುಚ್ಚಿವೆ. ಇಸ್ರೇಲ್​ಮ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳು ಮತ್ತು ಯುಎಸ್​ ಸೆಕ್ರೆಟರಿ ಜನರಲ್ ಆಂಟೊನಿಯೊ ಗುಟೆರಸ್ ಇರಾನ್ ದಾಳಿಯನ್ನು ಖಂಡಿಸಿದ್ದಾರೆ. ಇರಾನ್ ದಾಳಿಯ ಕುರಿತು ಇಸ್ರೇಲ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯನ್ನು ಕರೆದಿದೆ.

ಇಸ್ರೇಲ್​ಗೆ ಸಹಾಯ ಮಾಡುವುದಾಗಿ ಅಮೆರಿಕ ಸ್ಪಷ್ಟಪಡಿಸಿದೆ. ಅದೇ ಸಮಯದಲ್ಲಿ ಇರಾನ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಇಸ್ರೇಲ್​ ಅಧಿಕಾರಿಗಳು ಹೇಳಿದ್ದಾರೆ.

ಇರಾನ್ ಇಸ್ರೇಲ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಇಸ್ರೇಲಿ ರಕ್ಷಣಾ ಪಡೆ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!

ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ

ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್

ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್

ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ

ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!

ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ

ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ

ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್

ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ