AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​​ನಲ್ಲಿ ಭೀಕರ ಅಪಘಾತ; ಬಸ್ ಪಲ್ಟಿಯಾಗಿ 21 ಜನರು ಸಾವು, 34 ಜನರಿಗೆ ಗಾಯ

ಇರಾನ್​​ನಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಕಾರ್ಯಾಚರಣೆಗಳು ಪೂರ್ಣಗೊಂಡ ನಂತರ ಮತ್ತು ವಿವರವಾದ ತನಿಖೆ ನಡೆಸಿದ ನಂತರ ಹೆಚ್ಚಿನ ಮಾಹಿತಿ ಮತ್ತು ಅಂತಿಮ ಸಾವಿನ ಸಂಖ್ಯೆಯನ್ನು ಘೋಷಿಸಲಾಗುತ್ತದೆ. ಈ ಅಪಘಾತದ ಕಾರಣ ಇನ್ನೂ ತನಿಖೆಯಲ್ಲಿದೆ. ಅಪಘಾತವು ಬೆಳಿಗ್ಗೆ 11.05ರ ಸುಮಾರಿಗೆ ಸಂಭವಿಸಿದೆ.

ಇರಾನ್​​ನಲ್ಲಿ ಭೀಕರ ಅಪಘಾತ; ಬಸ್ ಪಲ್ಟಿಯಾಗಿ 21 ಜನರು ಸಾವು, 34 ಜನರಿಗೆ ಗಾಯ
Iran Bus Accident
ಸುಷ್ಮಾ ಚಕ್ರೆ
|

Updated on: Jul 19, 2025 | 9:12 PM

Share

ಟೆಹ್ರಾನ್, ಜುಲೈ 19: ದಕ್ಷಿಣ ಇರಾನ್‌ನಲ್ಲಿ (Iran) ಬಸ್ ಉರುಳಿಬಿದ್ದ ನಂತರ 21 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರಾಂತ್ಯದ ರಾಜಧಾನಿಯಾದ ದಕ್ಷಿಣ ಶಿರಾಜ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ 34 ಜನರು ಗಾಯಗೊಂಡಿದ್ದಾರೆ ಎಂದು ಫಾರ್ಸ್ ಪ್ರಾಂತ್ಯದ ತುರ್ತು ಸಂಸ್ಥೆಯ ಮುಖ್ಯಸ್ಥ ಮಸೌದ್ ಅಬೆದ್ ಹೇಳಿದ್ದಾರೆ. ಈಗ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಕಾರ್ಯಾಚರಣೆ ಪೂರ್ಣಗೊಂಡ ನಂತರ ಮತ್ತು ವಿವರವಾದ ತನಿಖೆ ನಡೆಸಿದ ನಂತರ ಹೆಚ್ಚುವರಿ ಮಾಹಿತಿ ಮತ್ತು ಅಂತಿಮ ಸಾವಿನ ಸಂಖ್ಯೆಯನ್ನು ಘೋಷಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಪಘಾತದ ಕಾರಣ ಇನ್ನೂ ತನಿಖೆಯಲ್ಲಿದೆ. ಅಪಘಾತವು ಬೆಳಿಗ್ಗೆ 11.05ರ ಸುಮಾರಿಗೆ ಸಂಭವಿಸಿದೆ. ರಕ್ಷಣಾ ಪಡೆಗಳು ತಕ್ಷಣವೇ ಸ್ಥಳಕ್ಕೆ ಧಾವಿಸಲಾಗಿದ್ದು, ಅಪಘಾತದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ ಎಂದು ಅಬೆದ್ ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಕ್ಕೆ ಇರಾನ್​ನ ಸಂಪೂರ್ಣ ಪರಮಾಣು ಸಾಮರ್ಥ್ಯ ನಾಶಮಾಡಲು ಸಾಧ್ಯವಾಗಿಲ್ಲ: ಗುಪ್ತಚರ ವರದಿ

ವಾರ್ಷಿಕವಾಗಿ ಸುಮಾರು 17,000 ಸಾವು-ನೋವುಗಳೊಂದಿಗೆ ಇರಾನ್ ರಸ್ತೆ ಅಪಘಾತಗಳಿಗೆ ಅಗ್ರ ದೇಶಗಳಲ್ಲಿ ಒಂದಾಗಿದೆ ಎಂದು ವರದಿಯಾಗಿದೆ. ಸುರಕ್ಷತಾ ಕ್ರಮಗಳನ್ನು ನಿರ್ಲಕ್ಷಿಸುವುದು, ಹಳೆಯ ವಾಹನಗಳ ಬಳಕೆ ಮತ್ತು ಅಸಮರ್ಪಕ ತುರ್ತು ಸೇವೆಗಳು ಇಲ್ಲಿನ ಅಪಘಾತ ಹೆಚ್ಚಳಕ್ಕೆ ಕಾರಣವಾಗಿವೆ.

ಇನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್