ಹಿಜ್ಬುಲ್ಲಾ ಮುಖ್ಯಸ್ಥನ ಸಾವು: ಭದ್ರತಾ ಮಂಡಳಿ ಸಭೆ ಕರೆದ ಇರಾನ್

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ವಿಶೇಷವಾಗಿ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಹತ್ಯೆಯ ನಂತರ, ಇರಾನ್ ಯಹೂದಿ ರಾಷ್ಟ್ರದ ಮೇಲೆ ಸೇಡು ತೀರಿಸಿಕೊಳ್ಳಲು ಯುಎನ್ ಭದ್ರತಾ ಮಂಡಳಿಯ ತುರ್ತು ಸಭೆಯನ್ನು ಕರೆದಿದೆ.

ಹಿಜ್ಬುಲ್ಲಾ ಮುಖ್ಯಸ್ಥನ ಸಾವು: ಭದ್ರತಾ ಮಂಡಳಿ ಸಭೆ ಕರೆದ ಇರಾನ್
Image Credit source: India Today
Follow us
ನಯನಾ ರಾಜೀವ್
|

Updated on: Sep 29, 2024 | 8:56 AM

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ವಿಶೇಷವಾಗಿ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಹತ್ಯೆಯ ನಂತರ, ಇರಾನ್ ಯಹೂದಿ ರಾಷ್ಟ್ರದ ಮೇಲೆ ಸೇಡು ತೀರಿಸಿಕೊಳ್ಳಲು ಯುಎನ್ ಭದ್ರತಾ ಮಂಡಳಿಯ ತುರ್ತು ಸಭೆಯನ್ನು ಕರೆದಿದೆ.

ಲೆಬನಾನ್‌ನಲ್ಲಿ ಇಸ್ರೇಲಿ ನಡೆಸಿದ ದಾಳಿಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 195 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ ಎರಡು ವಾರಗಳಲ್ಲಿ ಇಸ್ರೇಲಿ ದಾಳಿಯ ಪರಿಣಾಮವಾಗಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 6,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ ಮತ್ತು ಸುಮಾರು ಒಂದು ಮಿಲಿಯನ್ ಲೆಬನಾನ್ ಜನರು ಸ್ಥಳಾಂತರಗೊಂಡಿದ್ದಾರೆ.

ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆಯನ್ನು ಖಂಡಿಸಿ ಮತ್ತು ಲೆಬನಾನ್ ವಿರುದ್ಧ ಇಸ್ರೇಲ್ ದಾಳಿಯ ವಿರುದ್ಧ ಸೇಡು ತೀರಿಸಿಕೊಳ್ಳಲು ಟೆಹ್ರಾನ್ ಮತ್ತು ದೇಶದಾದ್ಯಂತ ಶನಿವಾರ ಸಾವಿರಾರು ಇರಾನಿಯನ್ನರು ಬೀದಿಗಿಳಿದರು.

ಮತ್ತಷ್ಟು ಓದಿ: ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಮುಖ್ಯಸ್ಥರನ್ನು ಹತ್ಯೆ ಮಾಡಲು ಇಸ್ರೇಲ್ ಯಾವ ರೀತಿ ಕಾರ್ಯಾಚರಣೆ ನಡೆಸಿತು?

ನಸ್ರಲ್ಲಾ ಹತ್ಯೆಯನ್ನು ಇಸ್ರೇಲ್ ದೃಢಪಡಿಸಿದ ನಂತರ ಸಿರಿಯಾದಲ್ಲಿ ಸಂಭ್ರಮಾಚರಣೆಗಳು ನಡೆದವು. ಉಗ್ರಗಾಮಿ ಗುಂಪು ಸಿರಿಯನ್ ಕ್ರಾಂತಿಯನ್ನು ನಿಗ್ರಹಿಸಲು ಅಧ್ಯಕ್ಷ ಬಶರ್ ಅಲ್-ಅಸ್ಸಾದ್‌ಗೆ ಸಹಾಯ ಮಾಡಿದ್ದರಿಂದ ಹಿಜ್ಬುಲ್ಲಾವನ್ನು ಜನರು ಶತ್ರುವಾಗಿ ನೋಡುತ್ತಾರೆ.

ಗಾಜಾ ಮತ್ತು ಲೆಬನಾನ್ ಮೇಲಿನ ಇಸ್ರೇಲ್ ದಾಳಿಯಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯಿಂದ ಇರಾನ್ ಕೋಪಗೊಂಡಿದೆ. ಲೆಬನಾನ್‌ನ ರಾಜಧಾನಿ ಬೈರುತ್‌ನಲ್ಲಿ ಇಸ್ರೇಲ್ ನಡೆದ ದಾಳಿಗೆ ಬಾಂಬ್​ಗಳನ್ನು ಅಮೆರಿಕವು ಇಸ್ರೇಲ್​ಗೆ ಉಡುಗೊರೆಯಾಗಿ ನೀಡಿದೆ ಎಂದು ಇರಾನ್ ಆರೋಪಿಸಿದೆ. ಈ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾರೆ.

ಇಸ್ರೇಲ್ ದಾಳಿಯಲ್ಲಿ ಅಮೆರಿಕ ನೀಡಿದ 5,000 ಪೌಂಡ್ ತೂಕದ ಬಂಕರ್ ಬಸ್ಟರ್ ಬಾಂಬ್‌ಗಳನ್ನು ಬಳಸಿದೆ ಎಂದು ಇರಾನ್ ಹೇಳಿದೆ. ಆದಾಗ್ಯೂ, ಈ ದಾಳಿಯ ಬಗ್ಗೆ ನಮಗೆ ಯಾವುದೇ ಪೂರ್ವ ಮಾಹಿತಿ ಇರಲಿಲ್ಲ ಎಂದು ಹಿಜ್ಬುಲ್ಲಾ ಮುಖ್ಯಸ್ಥರ ಮೇಲಿನ ದಾಳಿಯ ಕುರಿತು ಅಮೆರಿಕ ಹೇಳಿದೆ. ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರನ್ನು ಕೊಂದಿರುವುದಾಗಿ ಐಡಿಎಫ್  ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?