AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಮೇನಿ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ ಮೇಲೂ ಇರಾನ್ ದಾಳಿ!

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಇಸ್ರೇಲ್ ಸರ್ಕಾರದ ಆಫೀಸ್ ಮತ್ತು ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿದೆ. ಟೆಲ್ ಅವೀವ್‌ನಲ್ಲಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಮೇಲೂ ದಾಳಿ ನಡೆಸಿದ್ದೇವೆಂದು ಇರಾನ್ ಘೋಷಿಸಿದೆ. ಆದರೆ, ಇರಾನ್ ಹೇಳಿದ್ದು ಸುಳ್ಳೆಂದು ಇಸ್ರೇಲ್ ನಿರಾಕರಿಸಿದೆ. ಮೂರು ದಿನಗಳಿಂದ ಇಸ್ರೇಲ್ ಮತ್ತು ಇರಾನ್ ನಡುವೆ ಪರಸ್ಪರ ದಾಳಿಗಳು ನಡೆಯುತ್ತಲೇ ಇದ್ದು, ಇರಾನ್​​ನ ಸರ್ವೋಚ್ಚ ನಾಯಕ ಅಯತುಲ್ಲಾ ಖಮೇನಿಯನ್ನು ಹತ್ಯೆ ಮಾಡಲಾಗಿದೆ.

ಖಮೇನಿ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ ಮೇಲೂ ಇರಾನ್ ದಾಳಿ!
Netanyahu
ಸುಷ್ಮಾ ಚಕ್ರೆ
|

Updated on: Mar 02, 2026 | 8:57 PM

Share

ಜೆರುಸಲೇಂ, ಮಾರ್ಚ್ 2: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ಇರಾನ್ (Iran-Israel Conflict) ಮೇಲೆ ದಾಳಿ ನಡೆಸಿದ್ದರಿಂದ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಇರಾನ್​ನಲ್ಲಿ ನೂರಾರು ಜನರು ಮೃತಪಟ್ಟಿದ್ದು, ವಾಯುನೆಲೆಗಳು ಛಿದ್ರವಾಗಿದೆ. ಹೀಗಾಗಿ, ಅದಕ್ಕೆ ಪ್ರತೀಕಾರವಾಗಿ ಇರಾನ್ ಕೂಡ ಇಸ್ರೇಲ್ ಮೇಲೆ ದಾಳಿ ನಡೆಸುತ್ತಿದೆ. ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿಯ ಮೇಲೆ ದಾಳಿ ಮಾಡಿದ್ದಾಗಿ ಇರಾನ್ ಘೋಷಿಸಿದೆ. ಬೆಂಜಮಿನ್ ನೆತನ್ಯಾಹು ಅವರ ಕಚೇರಿಯ ಮೇಲೆ ದಾಳಿ ನಡೆದಿದೆ ಎಂದು ಇರಾನ್‌ನ ಐಆರ್‌ಜಿಸಿ ಹೇಳಿಕೊಂಡಿದ್ದರೂ ಇಸ್ರೇಲ್ ಅದನ್ನು ನಿರಾಕರಿಸಿದೆ.

ಇರಾನಿನ ಕ್ರಾಂತಿಕಾರಿ ಗಾರ್ಡ್‌ಗಳು ಎಂದೂ ಕರೆಯಲ್ಪಡುವ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಟೆಲ್ ಅವೀವ್‌ನಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯನ್ನು ಗುರಿಯಾಗಿಸಿಕೊಂಡು ಯಶಸ್ವಿಯಾಗಿ ದಾಳಿ ನಡೆಸಲಾಗಿದೆ ಎಂದು ಹೇಳಿಕೊಂಡಿದೆ. ಆದರೆ, ಈ ದಾಳಿ ನಡೆದಾಗ 76 ವರ್ಷದ ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿಯಲ್ಲಿದ್ದರೇ ಎಂಬುದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ಇರಾನ್​ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ಮುಂದುವರೆಯಬಹುದು, ಟ್ರಂಪ್ ಹೇಳಿದ್ದೇನು?

“ಖೇಬರ್ ಶೇಕನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ಗುರಿಯಿಟ್ಟು ನಡೆಸಲಾದ ದಾಳಿಯಲ್ಲಿ ಇಸ್ರೇಲಿ ಪ್ರಧಾನಿ ನೆತನ್ಯಾಹು ಅವರ ಕಚೇರಿ ಮತ್ತು ಆಡಳಿತದ ವಾಯುಪಡೆಯ ಕಮಾಂಡರ್ ಸ್ಥಳವು ನಾಶವಾಯಿತು” ಎಂದು ಐಆರ್‌ಜಿಸಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ, ಇಸ್ರೇಲ್ ಈ ಹೇಳಿಕೆಯನ್ನು ನಿರಾಕರಿಸಿದೆ. ನೆತನ್ಯಾಹು ಅವರ ಕಚೇರಿಯ ಮೇಲೆ ದಾಳಿ ನಡೆದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್‌ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ

ಯುನೈಟೆಡ್ ಸ್ಟೇಟ್ಸ್ (ಯುಎಸ್) ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ ನಂತರ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಇರಾನ್ ಈ ಪ್ರದೇಶದಲ್ಲಿ ಇಸ್ರೇಲಿ ಮತ್ತು ಇರಾನಿನ ನೆಲೆಗಳನ್ನು ಗುರಿಯಾಗಿಸಿಕೊಂಡು ಪ್ರತೀಕಾರ ತೀರಿಸಿಕೊಂಡಿದೆ. ಭಾನುವಾರ, ಜೆರುಸಲೆಮ್ ಬಳಿಯ ಇಸ್ರೇಲ್‌ನ ಬೀಟ್ ಶೆಮೆಶ್ ನಗರದಲ್ಲಿ ಇರಾನ್ ನಡೆಸಿದ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದರು ಮತ್ತು ಡಜನ್​ಗಟ್ಟಲೆ ಜನರು ಗಾಯಗೊಂಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ