AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೇಲೆ ಅಟ್ಯಾಕ್ ಮುಂದುವರೆಸಿದರೆ ಪಾಕಿಸ್ತಾನದಿಂದ ಇಸ್ರೇಲ್ ಮೇಲೆ ಪರಮಾಣು ದಾಳಿ; ಇರಾನ್ ಎಚ್ಚರಿಕೆ

ಇಸ್ರೇಲ್ ಮತ್ತು ಇರಾನ್ ನಡುವೆ ದಾಳಿಗಳು ನಡೆದು ಹಲವು ಜನರು ಪ್ರಾಣ ಕಳೆದುಕಂಡಿದ್ದರು. ಈ ನಡುವೆ ಇರಾನ್ ಇಸ್ರೇಲ್ ವಿರುದ್ಧ ಎಚ್ಚರಿಕೆ ನೀಡಿದೆ. ನಮ್ಮ ವಿರುದ್ಧ ಪರಮಾಣು ಶಸ್ತ್ರಾಸ್ತ್ರವನ್ನು ಬಳಸಿದರೆ ಪಾಕಿಸ್ತಾನ ಇಸ್ರೇಲ್ ಮೇಲೆ ಪರಮಾಣು ಬಾಂಬ್ ದಾಳಿ ಮಾಡುತ್ತದೆ ಎಂದು ಇರಾನ್ ಹೇಳಿಕೊಂಡಿದೆ. ಇಸ್ರೇಲ್ ಟೆಹ್ರಾನ್ ವಿರುದ್ಧ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಪಾಕಿಸ್ತಾನ ಅದರ ಮೇಲೆ ಪರಮಾಣು ದಾಳಿ ನಡೆಸಲಿದೆ ಎಂದು ಇರಾನಿನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದರೆ, ಈ ಹೇಳಿಕೆಯನ್ನು ಪಾಕಿಸ್ತಾನ ದೃಢವಾಗಿ ನಿರಾಕರಿಸಿದೆ.

ನಮ್ಮ ಮೇಲೆ ಅಟ್ಯಾಕ್ ಮುಂದುವರೆಸಿದರೆ ಪಾಕಿಸ್ತಾನದಿಂದ ಇಸ್ರೇಲ್ ಮೇಲೆ ಪರಮಾಣು ದಾಳಿ; ಇರಾನ್ ಎಚ್ಚರಿಕೆ
Mohsen Rezae
ಸುಷ್ಮಾ ಚಕ್ರೆ
|

Updated on:Jun 16, 2025 | 3:18 PM

Share

ಟೆಹ್ರಾನ್, ಜೂನ್ 16: ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಹಾಕಿದರೆ ಪಾಕಿಸ್ತಾನವು (Pakistan) ಇಸ್ರೇಲ್ (Israel) ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನ್‌ನ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. ಯಹೂದಿ ರಾಷ್ಟ್ರವಾದ ಇಸ್ರೇಲ್ ಇರಾನ್ (Iran) ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಪಾಕಿಸ್ತಾನ ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನಿನ ಹಿರಿಯ ಅಧಿಕಾರಿಯೊಬ್ಬರು ಹೇಳಿಕೊಂಡಿದ್ದಾರೆ. ಆದರೆ ಈ ಹೇಳಿಕೆಯನ್ನು ಇಸ್ಲಾಮಾಬಾದ್ ತಕ್ಷಣವೇ ತಿರಸ್ಕರಿಸಿದೆ.

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಇರಾನಿನ ಈ ಹೇಳಿಕೆ ಹೊರಬಿದ್ದಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ಕ್ಷಿಪಣಿಗಳ ಸುರಿಮಳೆಯಾದಾಗ ಇರಾನ್ ದೂರದರ್ಶನಕ್ಕೆ ನೀಡಿದ ಸಂದರ್ಶನದಲ್ಲಿ ಜನರಲ್ ಮೊಹ್ಸೆನ್ ರೆಝಾಯ್ ಈ ಹೇಳಿಕೆ ನೀಡಿದ್ದಾರೆ. ಇಲ್ಲಿಯವರೆಗೆ, ಎರಡೂ ದೇಶಗಳಲ್ಲಿ ಸುಮಾರು 248 ಸಾವುಗಳು (ಇರಾನ್- 230 ಮತ್ತು ಇಸ್ರೇಲ್ – 18) ವರದಿಯಾಗಿವೆ.

ಇದನ್ನೂ ಓದಿ: Israel-Iran conflict: ಇಸ್ರೇಲ್​​ನಲ್ಲಿ ಸಿಲುಕಿದ 40 ಸಾವಿರ ಪ್ರವಾಸಿಗರು, ಸೈರನ್ ಸದ್ದು, ಕ್ಷಿಪಣಿ ದಾಳಿಗೆ ಬೆದರಿದ ಜನ

ಇದನ್ನೂ ಓದಿ
Image
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
Image
ಇರಾನ್ ಮೇಲೆ ದಾಳಿ; ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು
Image
ಇಸ್ರೇಲ್ ಹಠಾತ್ ದಾಳಿಗೆ ಬೆಚ್ಚಿಬಿದ್ದ ಇರಾನ್: ಪರಮಾಣು ನೆಲೆಗಳೇ ಗುರಿ
Image
ರಾತ್ರೋರಾತ್ರಿ ಉಕ್ರೇನ್ ಮೇಲೆ 479 ಡ್ರೋನ್ ದಾಳಿ ನಡೆಸಿದ ರಷ್ಯಾ

“ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಬಳಸಿದರೆ ನಾವು ಇಸ್ರೇಲ್ ಮೇಲೆ ಪರಮಾಣು ಬಾಂಬ್ ದಾಳಿ ಮಾಡುವುದಾಗಿ ಪಾಕಿಸ್ತಾನ ನಮಗೆ ಭರವಸೆ ನೀಡಿದೆ” ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹಿರಿಯ ಅಧಿಕಾರಿ ಮತ್ತು ಇರಾನ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಸದಸ್ಯ ರೆಝಾಯ್ ಹೇಳಿದ್ದಾರೆ.

“ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಬಳಸಿದರೆ, ಪಾಕಿಸ್ತಾನ ಕೂಡ ಇಸ್ರೇಲ್ ಮೇಲೆ ಪರಮಾಣು ಬಾಂಬ್ ದಾಳಿ ಮಾಡುತ್ತದೆ ಎಂದು ಪಾಕಿಸ್ತಾನ ನಮಗೆ ತಿಳಿಸಿದೆ” ಎಂದು ಇರಾನ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಸದಸ್ಯ ಮತ್ತು ಇಸ್ಲಾಮಿಕ್ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC)ನ ಉನ್ನತ ಕಮಾಂಡರ್ ಜನರಲ್ ಮೊಹ್ಸೆನ್ ರೆಜೈ ಹೇಳಿದರು. ಕಳೆದ 3 ದಿನಗಳಿಂದ ಎರಡೂ ರಾಷ್ಟ್ರಗಳು ನೇರ ಕ್ಷಿಪಣಿ ವಿನಿಮಯದಲ್ಲಿ ತೊಡಗಿರುವ ಇರಾನ್ ಮತ್ತು ಇಸ್ರೇಲ್ ನಡುವೆ ಹಗೆತನ ಹೆಚ್ಚುತ್ತಿರುವ ಮಧ್ಯೆ ಈ ಹೇಳಿಕೆ ಬಂದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:18 pm, Mon, 16 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ