AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ದಾಳಿಯಲ್ಲಿ ನಮ್ಮ ದೇಶದ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹತ್ಯೆ; ಇರಾನ್ ಸ್ಪಷ್ಟನೆ

ಇಸ್ರೇಲ್ ನಿನ್ನೆ ರಾತ್ರೋರಾತ್ರಿ ನಡೆಸಿದ ದಾಳಿಯಲ್ಲಿ ಇರಾನ್​ನ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹತ್ಯೆಯಾಗಿದ್ದಾರೆ. ಇರಾನ್‌ನ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ರಾತ್ರಿಯಿಡೀ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಹೇಳಿದ್ದಾರೆ. ಇರಾನ್ ಆಡಳಿತದ ಇತರ ಇಬ್ಬರು ಪ್ರಮುಖ ವ್ಯಕ್ತಿಗಳಾದ ಇರಾನ್‌ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ಅಲಿ ಲಾರಿಜಾನಿ ಮತ್ತು ಬ್ರಿಗೇಡಿಯರ್ ಜನರಲ್ ಘೋಲಮ್ರೆಜಾ ಸೊಲೈಮಾನಿ ಅವರ ಹತ್ಯೆಯ ಬೆನ್ನಲ್ಲೇ ಎಸ್ಮಾಯಿಲ್ ಹತ್ಯೆಯಾಗಿದೆ.

ಇಸ್ರೇಲ್ ದಾಳಿಯಲ್ಲಿ ನಮ್ಮ ದೇಶದ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹತ್ಯೆ; ಇರಾನ್ ಸ್ಪಷ್ಟನೆ
Esmail KhatibImage Credit source: AP
ಸುಷ್ಮಾ ಚಕ್ರೆ
|

Updated on:Mar 18, 2026 | 9:47 PM

Share

ನವದೆಹಲಿ, ಮಾರ್ಚ್ 18: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್​ನ ಗುಪ್ತಚರ ಸಚಿವ ಮೃತಪಟ್ಟಿದ್ದಾರೆ. ಗುಪ್ತಚರ ಇಲಾಖೆಯ ಎಸ್ಮಾಯಿಲ್ ಖತೀಬ್ ಅವರ ಹತ್ಯೆಯನ್ನು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ದೃಢಪಡಿಸಿದ್ದಾರೆ. ಈ ದಾಳಿಯನ್ನು ಅವರು “ಹೇಡಿತನದ ಹತ್ಯೆ” ಎಂದು ಕರೆದಿದ್ದಾರೆ. ಇಸ್ರೇಲ್ ತನ್ನ ಪಡೆಗಳು ಟೆಹ್ರಾನ್ ಮೇಲೆ ರಾತ್ರಿಯಿಡೀ ನಡೆಸಿದ ವೈಮಾನಿಕ ದಾಳಿ ನಡೆಸಿ ಸಚಿವ ಎಸ್ಮಾಯಿಲ್ ಅವರನ್ನು ಹತ್ಯೆ ಮಾಡಿವೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಇರಾನ್ (Iran War) ಕೂಡ ಈ ಬಗ್ಗೆ ದೃಢಪಡಿಸಿದೆ.

ಇರಾನ್‌ನಾದ್ಯಂತ ಇತ್ತೀಚೆಗೆ ನಡೆದ ಪ್ರತಿಭಟನೆಗಳಲ್ಲಿ ಎಸ್ಮಾಯಿಲ್ ಖತೀಬ್ ಮಹತ್ವದ ಪಾತ್ರ ವಹಿಸಿದ್ದಾರೆ. ಪ್ರತಿಭಟನಾಕಾರರ ಬಂಧನ ಮತ್ತು ಹತ್ಯೆ ಸೇರಿದಂತೆ ಪ್ರಮುಖ ನಿರ್ಧಾರಗಳಲ್ಲಿ ಅವರು ಪಾತ್ರ ವಹಿಸಿದ್ದರು. ಅವರು ಇಸ್ರೇಲಿಗಳು ಮತ್ತು ಅಮೆರಿಕನ್ನರ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳನ್ನು ಮುನ್ನಡೆಸಿದ್ದಾರೆ ಎಂದು ಐಡಿಎಫ್ ಹೇಳಿತ್ತು.

ಇದನ್ನೂ ಓದಿ: ಅಮೆರಿಕ, ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು; ಇರಾನ್‌ ಸುಪ್ರೀಂ ನಾಯಕ ಪಟ್ಟು

ಎಸ್ಮಾಯಿಲ್ ಖತೀಬ್ ಒಬ್ಬ ಶಿಯಾ ಧರ್ಮಗುರು. ಅವರು ಇರಾನ್‌ನ ನ್ಯಾಯಾಂಗ ಮತ್ತು ಗುಪ್ತಚರ ಸಚಿವಾಲಯದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸಿದ್ದರು. ಅವರು 1980ರ ದಶಕದಲ್ಲಿ ಇರಾನ್-ಇರಾಕ್ ಯುದ್ಧದ ಸಮಯದಲ್ಲಿ ಕ್ರಾಂತಿಕಾರಿ ಗಾರ್ಡ್‌ನಲ್ಲಿಯೂ ಸೇವೆ ಸಲ್ಲಿಸಿದ್ದರು. ಅಲ್ಲಿ ಅವರು ಯುದ್ಧದಲ್ಲಿ ಗಾಯಗೊಂಡಿದ್ದರು.

ಇದನ್ನೂ ಓದಿ: ಇರಾನ್​ಗೆ ಮೆಡಿಕಲ್ ಕಿಟ್ ಕಳುಹಿಸಿ ಮಾನವೀಯತೆ ಮೆರೆದ ಭಾರತ

ಫೆಬ್ರವರಿ 28ರಂದು ಇರಾನ್ ಮೇಲೆ ಯುಎಸ್-ಇಸ್ರೇಲ್ ದಾಳಿಗಳನ್ನು ನಡೆಸಿ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಕೊಂದ ನಂತರ ಶುರುವಾದ ಯುದ್ಧವು ಎರಡು ವಾರಗಳಿಗೂ ಹೆಚ್ಚು ಕಾಲದಿಂದ ಉಲ್ಬಣಗೊಳ್ಳುತ್ತಿದೆ. ಅಂದಿನಿಂದ ಎರಡೂ ಕಡೆಯವರು ಪ್ರತೀಕಾರದ ದಾಳಿಗಳನ್ನು ನಡೆಸಿದ್ದು, ಮಧ್ಯಪ್ರಾಚ್ಯದಾದ್ಯಂತ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Wed, 18 March 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!