ಹಾರ್ಮುಜ್ ಜಲಸಂಧಿ ಕೇವಲ ಅಮೆರಿಕ ಹಾಗೂ ಇಸ್ರೇಲ್​ಗೆ ಮಾತ್ರ ಮುಚ್ಚಿದೆ: ಇರಾನ್ ವಿದೇಶಾಂಗ ಸಚಿವ

ಇರಾನ್ ವಿದೇಶಾಂಗ ಸಚಿವ ಅರಘ್ಚಿ ಹಾರ್ಮುಜ್ ಜಲಸಂಧಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಜಲಸಂಧಿಯು ಅಮೆರಿಕ ಮತ್ತು ಇಸ್ರೇಲ್‌ನಂತಹ ಶತ್ರು ರಾಷ್ಟ್ರಗಳಿಗೆ ಮಾತ್ರ ಮುಚ್ಚಿದೆ ಹೊರತು ಎಲ್ಲ ದೇಶಗಳಿಗಲ್ಲ. ಇರಾನ್ ಮೇಲೆ ದಾಳಿ ಮಾಡುವ ಟ್ಯಾಂಕರ್‌ಗಳಿಗೆ ಪ್ರವೇಶ ನಿಷಿದ್ಧ. ಯುದ್ಧ 16ನೇ ದಿನಕ್ಕೆ ಕಾಲಿಟ್ಟಿದ್ದು, ಅಮೆರಿಕ ಅಧ್ಯಕ್ಷ ಟ್ರಂಪ್ ಜಲಸಂಧಿ ತೆರೆಯಲು ಬಲ ಪ್ರಯೋಗಿಸುವುದಾಗಿ ಎಚ್ಚರಿಸಿದ್ದಾರೆ. ಭದ್ರತಾ ಕಾರಣಗಳಿಂದ ಅನೇಕ ಹಡಗುಗಳು ಮಾರ್ಗ ಬಳಸುತ್ತಿಲ್ಲ.

ಹಾರ್ಮುಜ್ ಜಲಸಂಧಿ ಕೇವಲ ಅಮೆರಿಕ ಹಾಗೂ ಇಸ್ರೇಲ್​ಗೆ ಮಾತ್ರ ಮುಚ್ಚಿದೆ: ಇರಾನ್ ವಿದೇಶಾಂಗ ಸಚಿವ
ಇರಾನ್ ವಿದೇಶಾಂಗ ಸಚಿವ
Image Credit source: India TV

Updated on: Mar 15, 2026 | 7:47 AM

ಟೆಹ್ರಾನ್, ಮಾರ್ಚ್​ 15:ಇಸ್ರೇಲ್ ಮತ್ತು ಅಮೆರಿಕ ನಿರಂತರವಾಗಿ ಇರಾನ್(Iran) ಮೇಲೆ ದಾಳಿ ಮಾಡುತ್ತಿವೆ. ಈ ದಾಳಿಗಳಿಗೆ ಇರಾನ್ ಕೂಡ ಪ್ರತಿಕ್ರಿಯಿಸುತ್ತಿದೆ. ಏತನ್ಮಧ್ಯೆ, ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಯ ಬಗ್ಗೆ ಇರಾನ್ ಹೇಳಿಕೆ ನೀಡಿದೆ.ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಬಗ್ಗೆ ಇರಾನ್ ವಿದೇಶಾಂಗ ಸಚಿವ ಅರಘ್ಚಿ ಸ್ಪಷ್ಟನೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಎಲ್ಲಾ ದೇಶಗಳಿಗೆ ಮುಚ್ಚಲಾಗಿಲ್ಲ, ತಮ್ಮ ಶತ್ರುಗಳಿಗೆ ಮಾತ್ರ ಮುಚ್ಚಲಾಗಿದೆ.

ನಮ್ಮ ಮತ್ತು ನಮ್ಮ ಮಿತ್ರರಾಷ್ಟ್ರಗಳ ಮೇಲೆ ದಾಳಿ ಮಾಡುವ ಟ್ಯಾಂಕರ್‌ಗಳು ಮತ್ತು ಹಡಗುಗಳಿಗೆ ಜಲಸಂಧಿಯನ್ನು ಮುಚ್ಚಲಾಗುವುದು ಎಂದು ಹೇಳಿದರು. ಹಲವಾರು ಭಾರತೀಯ ಹಡಗುಗಳು ಸೇರಿದಂತೆ ನೂರಾರು ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮನ್ ಕೊಲ್ಲಿಯ ನಡುವಿನ ಕಿರಿದಾದ ಸಮುದ್ರ ಮಾರ್ಗದಲ್ಲಿ ಸಿಲುಕಿಕೊಂಡಿರುವ ಸಮಯದಲ್ಲಿ ಇರಾನಿನ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಹಾರ್ಮುಜ್ ಜಲಸಂಧಿ ಕೇವಲ ಅಮೆರಿಕ ಹಾಗೂ ಇಸ್ರೇಲ್​​ಗೆ ಮಾತ್ರ ಮುಚ್ಚಿದೆ ಎಂದರು. ಭದ್ರತಾ ಕಾಳಜಿ ಯಿಂದಾಗಿ ಈ ಮಾರ್ಗವನ್ನು ಮುಚ್ಚಲಾಗಿದೆ ಎಂದು ಹೇಳಿದ್ದಾರೆ.ಅನೇಕರು ತಮ್ಮ ಭದ್ರತಾ ಕಾಳಜಿಯಿಂದಾಗಿ ಈ ಮಾರ್ಗದ ಮೂಲಕ ಹಾದುಹೋಗಲು ಬಯಸುವುದಿಲ್ಲ. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಮತ್ತೊಂದೆಡೆ, ಅನೇಕ ಟ್ಯಾಂಕರ್‌ಗಳು ಮತ್ತು ಹಡಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುತ್ತಿವೆ ಎಂದಿದ್ದಾರೆ.

ಮತ್ತಷ್ಟು ಓದಿ: ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು

ಇಸ್ರೇಲ್ ಮತ್ತು ಅಮೆರಿಕ ನಡುವೆ ಇರಾನ್ ಜೊತೆ ನಡೆಯುತ್ತಿರುವ ಯುದ್ಧ 16ನೇ ದಿನಕ್ಕೆ ಕಾಲಿಟ್ಟಿದೆ. ಹಾರ್ಮುಜ್ ಜಲಸಂಧಿಯ ಭದ್ರತೆಗೆ ಸಹಾಯ ಮಾಡಲು ಹಡಗುಗಳನ್ನು ಕಳುಹಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವದ ಇತರ ಹಲವು ದೇಶಗಳನ್ನು ಒತ್ತಾಯಿಸಿದ್ದಾರೆ.

ಇರಾನ್‌ನ ಮಿಲಿಟರಿ ಸಾಮರ್ಥ್ಯ ಸಂಪೂರ್ಣವಾಗಿ ನಾಶವಾಗಿದೆ ಎಂದು ಅಮೆರಿಕ ಅಧ್ಯಕ್ಷರು ಹೇಳಿಕೊಂಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಅಮೆರಿಕವು ಅತಿಯಾದ ಬಲಪ್ರಯೋಗ ಮಾಡುತ್ತದೆ ಎಂದು ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us