Hijab: ಹಿಜಾಬ್ ಧರಿಸದ ಹೆಣ್ಣುಮಕ್ಕಳ ಮೇಲೆ ಕಣ್ಣಿಡಲು ಇರಾನ್‌ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ
ಇರಾನ್ ಕೂಡ ಅಫ್ಘಾನಿಸ್ತಾನ(Afghanistan)ದ ಹಾದಿಯನ್ನೇ ಅನುಸರಿಸುತ್ತಿದೆ. ಮಹಿಳೆಯರ ಬಗ್ಗೆ ಇರಾನ್ ಕಟ್ಟುನಿಟ್ಟಾಗಿ ವರ್ತಿಸುತ್ತಿದೆ. ಮಹಿಳೆಯರು ಹಿಜಾಬ್ ಧರಿಸಲು ಕಟ್ಟುನಿಟ್ಟಿನ ಆದೇಶಗಳನ್ನು ಹೊರಡಿಸಲಾಗಿದೆ.
ಇರಾನ್ ಕೂಡ ಅಫ್ಘಾನಿಸ್ತಾನ(Afghanistan)ದ ಹಾದಿಯನ್ನೇ ಅನುಸರಿಸುತ್ತಿದೆ. ಮಹಿಳೆಯರ ಬಗ್ಗೆ ಇರಾನ್ ಕಟ್ಟುನಿಟ್ಟಾಗಿ ವರ್ತಿಸುತ್ತಿದೆ. ಮಹಿಳೆಯರು ಹಿಜಾಬ್ ಧರಿಸಲು ಕಟ್ಟುನಿಟ್ಟಿನ ಆದೇಶಗಳನ್ನು ಹೊರಡಿಸಲಾಗಿದೆ. ಕಡ್ಡಾಯ ಡ್ರೆಸ್ಕೋಡ್ನ ಭಾಗವಾಗಿ ಇರಾನ್‌ನಲ್ಲಿ ಹಿಜಾಬ್ ಅನ್ನು ಅಳವಡಿಸಲಾಗಿದೆ, ಆದರೆ ಸಾಕಷ್ಟು ಮಹಿಳೆಯರು ಈ ನಿಯಮಗಳನ್ನು ಪಾಲಿಸುತ್ತಿಲ್ಲ ಎನ್ನಲಾಗಿದೆ. ಇದರಿಂದ ಆತಂಕಗೊಂಡಿರುವ ಇರಾನ್ ಸರ್ಕಾರ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿಯನ್ನು ಅಳವಡಿಸಲು ನಿರ್ಧರಿಸಿದೆ.
ಇರಾನ್ ಅಧಿಕಾರಿ ಪ್ರಕಾರ, ಕಡ್ಡಾಯ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸುವ ಮಹಿಳೆಯರಿಗೆ ಸಿಸಿಟಿವಿ ಮೂಲಕ ಶಿಕ್ಷೆ ವಿಧಿಸಲಾಗುತ್ತದೆ. ಇದಕ್ಕಾಗಿ ಇರಾನ್‌ನ ಸಾರ್ವಜನಿಕ ಸ್ಥಳಗಳು ಮತ್ತು ಬೀದಿಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಅವರನ್ನು ಗುರುತಿಸಿದ ನಂತರ ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಲಾಗುವುದು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ, ಹಿಜಾಬ್ ಕಾನೂನಿನ ವಿರುದ್ಧ ಪ್ರತಿರೋಧವನ್ನು ನಿಲ್ಲಿಸುವುದು ಇರಾನ್ ಸರ್ಕಾರದ ಗುರಿಯಾಗಿದೆ. ಹಿಜಾಬ್‌ಗೆ ಸಂಬಂಧಿಸಿದಂತೆ ಕಳೆದ ಹಲವು ತಿಂಗಳುಗಳಿಂದ ಇರಾನ್‌ನಲ್ಲಿ ವಿವಾದ ನಡೆಯುತ್ತಿದೆ. ವಾಸ್ತವವಾಗಿ ಈ ಸಂಪೂರ್ಣ ವಿವಾದವು 22 ವರ್ಷದ ಇರಾನ್ ಹುಡುಗಿ ಮಹ್ಸಾ ಸಾವಿನೊಂದಿಗೆ ಪ್ರಾರಂಭವಾಯಿತು.
ಮತ್ತಷ್ಟು ಓದಿ: Iran: ಹಿಜಾಬ್ ಧರಿಸಿಲ್ಲ ಎಂದು ಇಬ್ಬರು ಮಹಿಳೆಯರ ಮೇಲೆ ಯೋಗರ್ಟ್ ಎರಚಿದ ವ್ಯಕ್ತಿ
ಮಾಧ್ಯಮ ವರದಿಗಳ ಪ್ರಕಾರ, ಇರಾನ್‌ನ ಪೊಲೀಸರು ಹಿಜಾಬ್ ಅನ್ನು ಸರಿಯಾಗಿ ಧರಿಸದ ಕಾರಣ ಮಹ್ಸಾ ಅವರನ್ನು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿ ಮಹ್ಸಾ ನಿಗೂಢವಾಗಿ ಸಾವನ್ನಪ್ಪಿದ್ದರು.
ಇದಾದ ನಂತರ ಇರಾನ್‌ನಾದ್ಯಂತ ಮಹಿಳೆಯರ ಆಕ್ರೋಶ ಭುಗಿಲೆದ್ದಿದೆ. ಬೀದಿಗಳಲ್ಲಿ ಪ್ರತಿಭಟನೆಗಳು ಪ್ರಾರಂಭವಾದವು ಮತ್ತು ಶೀಘ್ರದಲ್ಲೇ ಅದು ದೊಡ್ಡ ಚಳವಳಿಯಾಗಿ ಮಾರ್ಪಟ್ಟಿತು. ಈಗ ದೇಶದಲ್ಲಿ ಹಿಜಾಬ್ ಅನ್ನು ವಿರೋಧಿಸುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಸಿಸಿಟಿವಿ ಮೂಲಕ ಅವರನ್ನು ನಿಯಂತ್ರಿಸಲು ಯತ್ನಿಸಿದೆ.
ಗಮನಾರ್ಹವಾಗಿ, ಇತ್ತೀಚಿನ ದಿನಗಳಲ್ಲಿ, ಇರಾನ್‌ನಿಂದ ಇಂತಹ ಅನೇಕ ವೀಡಿಯೊಗಳು ವೈರಲ್ ಆಗಿದ್ದು, ಇದರಲ್ಲಿ ಮಹಿಳೆಯರು ಹಿಜಾಬ್ ಇಲ್ಲದೆ ತಿರುಗಾಡುತ್ತಿದ್ದಾರೆ. ಇತ್ತೀಚೆಗೆ ಹಿಜಾಬ್ ಧರಿಸಿಲ್ಲ ಎಂಬ ಕಾರಣಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಲಾಗಿತ್ತು. ಘಟನೆಯ ವಿಡಿಯೋ ಭಾರೀ ವೈರಲ್ ಆಗಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:36 am, Sun, 9 April 23