AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರಬ್ ದೇಶಗಳ ಸಂಘರ್ಷಕ್ಕೆ ಇರಾನ್ ಕಾರಣ’; ವಿಶ್ವಸಂಸ್ಥೆ ಮಹಾಸಭೆಯಲ್ಲಿ ಡೊನಾಲ್ಡ್ ಟ್ರಂಪ್ ಗಂಭೀರ ಆರೋಪ

ವಿಶ್ವಸಂಸ್ಥೆಯಲ್ಲಿ ಇರಾನ್ ಜೊತೆಗಿನ ಯುದ್ಧದ ಕುರಿತು ಮಾತನಾಡಿದ ಟ್ರಂಪ್, ಯುಎಸ್ ಮಧ್ಯಂತರ ಚುನಾವಣೆಗಳು ಮುಗಿದ ತಕ್ಷಣ ಇರಾನ್ ಜೊತೆ ಒಪ್ಪಂದ ಏರ್ಪಡುವ ಸಾಧ್ಯತೆಯಿದೆ ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ಇರಾನ್ ಪ್ರಸ್ತುತ ಅಮೆರಿಕದ ಚುನಾವಣಾ ಫಲಿತಾಂಶಕ್ಕಾಗಿ ಕಾಯುತ್ತಿದೆ. ಆದರೆ, ತಾವು ಈ ಚುನಾವಣೆಯಲ್ಲಿ ಅಭ್ಯರ್ಥಿಯಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಹಾರ್ಮುಜ್ ಜಲಸಂಧಿ ಬಂದ್ ಆಗಿರುವುದರಿಂದ ಉಂಟಾಗಿರುವ ಜಾಗತಿಕ ಆರ್ಥಿಕ ಸಂಕಷ್ಟದ ನಡುವೆಯೇ ಟ್ರಂಪ್ ನೀಡಿರುವ ಈ ಹೇಳಿಕೆಗಳು ತೀವ್ರ ರಾಜತಾಂತ್ರಿಕ ಕುತೂಹಲಕ್ಕೆ ಕಾರಣವಾಗಿವೆ.

'ಅರಬ್ ದೇಶಗಳ ಸಂಘರ್ಷಕ್ಕೆ ಇರಾನ್ ಕಾರಣ'; ವಿಶ್ವಸಂಸ್ಥೆ ಮಹಾಸಭೆಯಲ್ಲಿ ಡೊನಾಲ್ಡ್ ಟ್ರಂಪ್ ಗಂಭೀರ ಆರೋಪ
ವಿಶ್ವಸಂಸ್ಥೆ ಮಹಾಸಭೆಯಲ್ಲಿ ಡೊನಾಲ್ಡ್ ಟ್ರಂಪ್ Image Credit source: AP
ಸುಷ್ಮಾ ಚಕ್ರೆ
|

Updated on: Sep 22, 2026 | 10:07 PM

Share

ನ್ಯೂಯಾರ್ಕ್, ಸೆಪ್ಟೆಂಬರ್ 22: ಮಧ್ಯಪ್ರಾಚ್ಯದಲ್ಲಿ ಸೃಷ್ಟಿಯಾಗಿರುವ ಅಶಾಂತಿ ಮತ್ತು ಸಶಸ್ತ್ರ ಸಂಘರ್ಷಕ್ಕೆ ಇರಾನ್ ನೇರ ಹೊಣೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಆರೋಪಿಸಿದ್ದಾರೆ. ಶಾಂತಿ ಮಾತುಕತೆಯ ಎಲ್ಲಾ ಪ್ರಯತ್ನಗಳು ವಿಫಲವಾದ ನಂತರವೇ ಅಮೆರಿಕವು ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಂಡಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ವಿಶ್ವಸಂಸ್ಥೆಯ ಮಹಾಸಭೆಯ (UNGA) 81ನೇ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಧ್ಯಪ್ರಾಚ್ಯದಲ್ಲಿ ಹಡಗುಗಳ ಮೇಲಿನ ದಾಳಿಯನ್ನು ಟೆಹ್ರಾನ್‌ನ ಭಯೋತ್ಪಾದಕ ಕೃತ್ಯಗಳು ಎಂದು ಕಟುವಾಗಿ ಟೀಕಿಸಿದರು.

ಇರಾನ್‌ನಲ್ಲಿ 10 ಸಾವಿರಕ್ಕೂ ಹೆಚ್ಚು ಜನರ ಸಾವು:

“ಅರಬ್ ಜಗತ್ತಿನ ಅಶಾಂತಿಗೆ ಇರಾನ್ ಸಂಪೂರ್ಣವಾಗಿ ಹೊಣೆಯಾಗಿದೆ. ನಾನು ಮೊದಲು ಇರಾನ್‌ನೊಂದಿಗೆ ಸಂಧಾನಕ್ಕೆ ಯತ್ನಿಸಿದೆ. ಆದರೆ ಅವರು ಅದಕ್ಕೆ ಒಪ್ಪದ ಕಾರಣದಿಂದಾಗಿಯೇ ನಾನು ಮಿಲಿಟರಿ ಕಾರ್ಯಾಚರಣೆಗೆ ಇಳಿದೆ. ದೇಶಾದ್ಯಂತ ನಡೆದ ಪ್ರತಿಭಟನೆಗಳ ವೇಳೆ ಇರಾನ್‌ನಲ್ಲಿ 10,000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ” ಎಂದು ಟ್ರಂಪ್ ಪ್ರತಿಪಾದಿಸಿದರು.

ಇದನ್ನೂ ಓದಿ: ಅಮೆರಿಕದ ಜೊತೆಗಿನ ಉದ್ವಿಗ್ನತೆ ಬೆನ್ನಲ್ಲೇ ನ್ಯೂಯಾರ್ಕ್‌ಗೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭೇಟಿ

ಇತ್ತೀಚಿನ ಮಿಲಿಟರಿ ಕಾರ್ಯಾಚರಣೆಗಳಲ್ಲಿ ಇರಾನ್‌ಗೆ ಸೇರಿದ 159ಕ್ಕೂ ಹೆಚ್ಚು ನೌಕಾ ಹಡಗುಗಳು ಹಾಗೂ ಯುದ್ಧ ವಿಮಾನಗಳನ್ನು ಧ್ವಂಸಗೊಳಿಸಲಾಗಿದೆ ಎಂದ ಅವರು, “ಇರಾನ್ ಎಂದಿಗೂ ಅಣ್ವಸ್ತ್ರಗಳನ್ನು ನಿರ್ಮಿಸಲು ಸಾಧ್ಯವಾಗದಂತೆ ತಡೆಯಲಾಗುವುದು” ಎಂದು ಸವಾಲು ಹಾಕಿದರು.

ಗಾಜಾ ಶಾಂತಿ ಒಪ್ಪಂದ:

ಇದೇ ವೇಳೆ ಪ್ಯಾಲೆಸ್ಟೈನ್ ಮತ್ತು ಇಸ್ರೇಲ್ ನಡುವಿನ ಶಾಂತಿ ಸ್ಥಾಪನೆಯ ಪ್ರಯತ್ನಗಳ ಬಗ್ಗೆಯೂ ಮಾತನಾಡಿದ ಟ್ರಂಪ್, ಪ್ರಸ್ತುತ 30ಕ್ಕೂ ಹೆಚ್ಚು ದೇಶಗಳು ‘ಗಾಜಾ ಶಾಂತಿ ಒಪ್ಪಂದ’ದ ಭಾಗವಾಗಿವೆ ಎಂದರು. ಅಮೆರಿಕವು ಎಂದಿಗಿಂತಲೂ ಆರ್ಥಿಕವಾಗಿ ಬಲಶಾಲಿಯಾಗಿದೆ, ತಂತ್ರಜ್ಞಾನ ಹಾಗೂ ಇಂಧನ ಕ್ಷೇತ್ರದಲ್ಲಿ ಜಗತ್ತನ್ನು ಮುನ್ನಡೆಸುತ್ತಿದೆ. ನಮ್ಮ ವಿರುದ್ಧದ ಯಾವುದೇ ಬೆದರಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಟ್ರಂಪ್ ಹೇಳಿದರು.

ಅಮೆರಿಕದ ಹಿಂದಿನ ಸರ್ಕಾರದ ಅವಧಿಯನ್ನು ‘ಕರಾಳ ಯುಗ’ ಎಂದು ಬಣ್ಣಿಸಿದ ಟ್ರಂಪ್, ತಮ್ಮ ಆಡಳಿತದಲ್ಲಿ ಅಮೆರಿಕವನ್ನು ಅತ್ಯಂತ ಶಕ್ತಿಶಾಲಿ ದೇಶವನ್ನಾಗಿ ಮಾಡಿದ್ದು, ಪ್ರಸ್ತುತ ದೇಶವು ‘ಸುವರ್ಣ ಯುಗ’ದಲ್ಲಿದೆ ಎಂದು ಪ್ರತಿಪಾದಿಸಿದರು. ಇತರ ನಾಯಕರು ಶಾಂತಿಯ ಬಗ್ಗೆ ಮಾತನಾಡಿದರೆ, ತಾವು ಅದನ್ನು ಕಾರ್ಯರೂಪಕ್ಕೆ ತಂದಿರುವುದಾಗಿ ಹೆಮ್ಮೆಯಿಂದ ಹೇಳಿಕೊಂಡರು.

ಇದನ್ನೂ ಓದಿ: 7 ದಿನಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಆಫರ್; ಅಮೆರಿಕಕ್ಕೆ ವಿಧಿಸಿದ ಷರತ್ತುಗಳೇನು?

ಟ್ರಂಪ್ ಭಾಷಣದ ವೇಳೆ ಇರಾನ್ ನಿಯೋಗದ ವಾಕ್-ಔಟ್:

ವಿಶ್ವಸಂಸ್ಥೆ ಮಹಾಸಭೆಯಲ್ಲಿ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಕಳೆದ 6 ತಿಂಗಳಲ್ಲಿ ಅಮೆರಿಕ ನಡೆಸಿದ ವೈಮಾನಿಕ ಹಾಗೂ ಮಿಲಿಟರಿ ದಾಳಿಗಳ ಕುರಿತು ಪ್ರಸ್ತಾಪಿಸುತ್ತಿದ್ದಂತೆ, ಸಭೆಯಲ್ಲಿದ್ದ ಇರಾನ್ ರಾಜತಾಂತ್ರಿಕ ನಿಯೋಗದ ಸದಸ್ಯರು ಕೌನ್ಸಿಲ್ ಸಭಾಂಗಣದಿಂದ ಹೊರನಡೆದರು.

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಮತ್ತು ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ನ್ಯೂಯಾರ್ಕ್‌ನಲ್ಲಿದ್ದರೂ, ಟ್ರಂಪ್ ಭಾಷಣದ ವೇಳೆ ಮಹಾಸಭೆಯ ಸಭಾಂಗಣಕ್ಕೆ ಆಗಮಿಸಿರಲಿಲ್ಲ. ಅವರ ಪ್ರತಿನಿಧಿಗಳಾಗಿ ಕೇವಲ ಕಿರಿಯ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದು, ಟ್ರಂಪ್ ಟೀಕೆ ಆರಂಭಿಸುತ್ತಿದ್ದಂತೆ ಒಬ್ಬ ಅಧಿಕಾರಿಯನ್ನು ಹೊರತುಪಡಿಸಿ ಉಳಿದವರೆಲ್ಲ ಸಭಾಂಗಣದಿಂದ ಹೊರನಡೆದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ