ಕಾರು ಕದ್ದಿದ್ದು ತಂದೆ, ಆದ್ರೆ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದು 9 ವರ್ಷದ ಮಗ

ಕಾರು ಕದ್ದಿದ್ದ ವ್ಯಕ್ತಿಗೆ ಗುಂಡು ಹಾರಿಸುವ ಬದಲು ಪೊಲೀಸರು ಆತನ 9 ವರ್ಷದ ಮಗನನ್ನು ಹತ್ಯೆ ಮಾಡಿರುವ ಘಟನೆ ಇರಾನ್​ನಲ್ಲಿ ನಡೆದಿದೆ. ಬಾಲಕನ ತಂದೆ ಕಾರನ್ನು ಕದ್ದು ಮಗನೊಂದಿಗೆ ಪರಾರಿಯಾಗುತ್ತಿದ್ದ, ಆ ವ್ಯಕ್ತಿಯನ್ನು ತಡೆಯಲು ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದರು, ಆದರೆ ವ್ಯಕ್ತಿ ಬದಲು ಬಾಲಕನಿಗೆ ಗುಂಡು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕಾರು ಕದ್ದಿದ್ದು ತಂದೆ, ಆದ್ರೆ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದು 9 ವರ್ಷದ ಮಗ
ಇರಾನ್ ಫ್ಲ್ಯಾಗ್
Image Credit source: Hindustan Times

Updated on: Jun 11, 2023 | 8:53 AM

ಕಾರು ಕದ್ದಿದ್ದ ವ್ಯಕ್ತಿಗೆ ಗುಂಡು ಹಾರಿಸುವ ಬದಲು ಪೊಲೀಸರು ಆತನ 9 ವರ್ಷದ ಮಗನನ್ನು ಹತ್ಯೆ ಮಾಡಿರುವ ಘಟನೆ ಇರಾನ್​ನಲ್ಲಿ ನಡೆದಿದೆ.
ಬಾಲಕನ ತಂದೆ ಕಾರನ್ನು ಕದ್ದು ಮಗನೊಂದಿಗೆ ಪರಾರಿಯಾಗುತ್ತಿದ್ದ, ಆ ವ್ಯಕ್ತಿಯನ್ನು ತಡೆಯಲು ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದರು, ಆದರೆ ವ್ಯಕ್ತಿ ಬದಲು ಬಾಲಕನಿಗೆ ಗುಂಡು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆ ವ್ಯಕ್ತಿಯ ವಿರುದ್ಧ ಸಾಕಷ್ಟು ಆರೋಪಗಳಿದ್ದವು, ಅದರಲ್ಲಿ ಈ ಕಾರು ಕಳ್ಳತನ ಕೂಡ ಒಂದು. ಕಾರು ನಿಲ್ಲಿಸುವಂತೆ ಸಾಕಷ್ಟು ಬಾರಿ ಪೊಲೀಸರು ಕೇಳಿಕೊಂಡರೂ ಆತ ಕಿವಿಗೊಡದೆ ವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಹಾಗಾಗಿ ಅನಿವಾರ್ಯವಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ.

Shivamogga News: ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿ ನಿಗೂಢ ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಮೊರ್ಟೆಜಾ ಡೆಲ್ಫ್ ಜರೆಗಾನಿ ಎನ್ನುವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಇಂತಹ ಘಟನೆ ಇರಾನ್​ನಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ ನವೆಂಬರ್​ನಲ್ಲಿ ಇಝೆಹ್​ ನಗರದಲ್ಲಿ ಹಿಜಾಬ್​ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ 9 ವರ್ಷದ ಕಿಯಾನ್ ಮೇಲೆ ಗುಂಡು ಹಾರಿಸಲಾಗಿತ್ತು.

ಮೃತ ಮಗುವಿನ ತಂದೆ ಶುಕ್ರವಾರ (ಜೂನ್ 9, 2023) ಕಾರು ಕಳ್ಳತನ ಮಾಡಿ ಪರಾರಿಯಾಗಿದ್ದರು, ಕಾರು ಕಳ್ಳತನದ ಸುಳ್ಳು ದೂರಿನ ಆಧಾರದ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಆ ವ್ಯಕ್ತಿ ದೂರಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us