AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hormuz Strait: ಇರಾನ್​ನಿಂದ ತೈಲ ಸಾಗಾಟ ಸುಗಮ, ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಒಪ್ಪಿಗೆ

ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆದಿದ್ದು, ತೈಲ ಸಾಗಾಟ ಸುಗಮವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್‌ನಿಂದ ಎರಡು ವಾರಗಳ ಕದನ ವಿರಾಮ ಘೋಷಣೆಯ ನಂತರ ಈ ಒಪ್ಪಂದ ಏರ್ಪಟ್ಟಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯು ಪ್ರಮುಖ ಪಾತ್ರ ವಹಿಸಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಇಳಿದು, ಅಮೆರಿಕದ ಷೇರು ಮಾರುಕಟ್ಟೆಗಳು ಏರಿಕೆಯಾಗಿವೆ. ಇದು ಜಾಗತಿಕ ಆರ್ಥಿಕತೆಗೆ ನೆಮ್ಮದಿ ತಂದಿದೆ.

Hormuz Strait: ಇರಾನ್​ನಿಂದ ತೈಲ ಸಾಗಾಟ ಸುಗಮ, ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಒಪ್ಪಿಗೆ
ಹಾರ್ಮುಜ್ ಜಲಸಂಧಿ Image Credit source: Observer Research Foundation
ನಯನಾ ರಾಜೀವ್
|

Updated on:Apr 08, 2026 | 11:55 AM

Share

ಟೆಹ್ರಾನ್, ಏಪ್ರಿಲ್ 08: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಒಪ್ಪಿಗೆ ಕೊಡುತ್ತಿದ್ದಂತೆ ಇತ್ತ ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಅನುಮತಿ ನೀಡಿದ್ದು, ಇರಾನ್​ನಿಂದ ತೈಲ ಸಾಗಾಟ ಸುಗಮವಾಗಲಿದೆ. ಭಾರತ ಸೇರಿ ಅನೇಕ ದೇಶಗಳಿಗೆ ಇದರಿಂದ ಅನುಕೂಲವಾಗಲಿದೆ.  ಇರಾನ್ ಮೇಲಿನ ದಾಳಿಯನ್ನು ಎರಡು ವಾರಗಳ ಕಾಲ ಮುಂದೂಡಲು ಅಮೆರಿಕ ಅಧ್ಯಕ್ಷ ಟ್ರಂಪ್ ನಿರ್ಧರಿಸಿದ್ದು, ಜಾಗತಿಕ ಮಾರುಕಟ್ಟೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಘೋಷಣೆಯ ನಂತರ, ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಕುಸಿದಿವೆ ಮತ್ತು ಅಮೆರಿಕದ ಷೇರುಗಳು ಏರಿಕೆಯಾಗಿವೆ.

ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳನ್ನು ಸುರಕ್ಷಿತವಾಗಿ ಹಾದುಹೋಗಲು ಅನುಮತಿಸಿದರೆ ಮಿಲಿಟರಿ ಕ್ರಮವನ್ನು ನಿಲ್ಲಿಸಬಹುದು ಎಂದು ಡೊನಾಲ್ಡ್​ ಟ್ರಂಪ್ ಹೇಳಿದ್ದರು. ಇದೀಗ ಇರಾನ್ ಅದಕ್ಕೆ ಒಪ್ಪಿಕೊಂಡಿದೆ. ಹಾರ್ಮುಜ್ ಜಲಸಂಧಿಯನ್ನು ಎರಡು ವಾರಗಳ ಅವಧಿಗೆ ತೆರೆಯಲಾಗುವುದು ಎಂದು ಅರಾಘ್ಚಿ ಘೋಷಿಸಿದ್ದಾರೆ.

ಯುಎಸ್ ಕಚ್ಚಾ ತೈಲ ಬೆಲೆಗಳು ಸುಮಾರು ಶೇ. 18 ರಷ್ಟು ಇಳಿದು ಪ್ರತಿ ಬ್ಯಾರೆಲ್‌ಗೆ 92.60 ಡಾಲರ್​ಗೆ ಕ್ಕೆ ತಲುಪಿದರೆ, ಬ್ರೆಂಟ್ ಕಚ್ಚಾ ತೈಲ ಬೆಲೆಗಳು ಸುಮಾರು ಶೇ.6 ರಷ್ಟು ಇಳಿದು ಪ್ರತಿ ಬ್ಯಾರೆಲ್‌ಗೆ 103.40 ಡಾಲರ್​ಗೆ ತಲುಪಿವೆ. ಅಮೆರಿಕದ ಷೇರು ಮಾರುಕಟ್ಟೆಗಳು ಏರಿಕೆಯಾಗಿದ್ದು, ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಿವೆ.

ಮತ್ತಷ್ಟು ಓದಿ: ಇರಾನ್ ಮುಗಿಸಲು ಒಂದೇ ಒಂದು ರಾತ್ರಿ ಸಾಕು, ಗಡುವು ಮುಗಿಯುವ ಮುನ್ನವೇ ಇರಾನ್​ಗೆ ಟ್ರಂಪ್ ಬೆದರಿಕೆ

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮುಖ ಘೋಷಣೆ ಮಾಡಿದ್ದು, ಇರಾನ್ ಮೇಲಿನ ಸಂಭಾವ್ಯ ದಾಳಿಗಳು ಮತ್ತು ಬಾಂಬ್ ದಾಳಿಗಳನ್ನು ಎರಡು ವಾರಗಳ ಕಾಲ ನಿಲ್ಲಿಸಲಾಗಿದೆ ಎಂದು ಹೇಳಿದ್ದಾರೆ. ಇದು ದ್ವಿಪಕ್ಷೀಯ ಕದನ ವಿರಾಮ ಎಂದು ಟ್ರಂಪ್ ಹೇಳಿದ್ದಾರೆ.

ಅಂದರೆ ಈ ಅವಧಿಯಲ್ಲಿ ಅಮೆರಿಕ ಅಥವಾ ಇರಾನ್ ಯಾವುದೇ ಆಕ್ರಮಣಕಾರಿ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ.ಈ ಒಪ್ಪಂದಕ್ಕೆ ಒಂದು ಮಹತ್ವದ ಷರತ್ತು ವಿಧಿಸಲಾಗಿದೆ: ಇರಾನ್ ತಕ್ಷಣವೇ, ಸಂಪೂರ್ಣವಾಗಿ ಮತ್ತು ಸುರಕ್ಷಿತವಾಗಿ ಹಾರ್ಮುಜ್ ಜಲಸಂಧಿಯನ್ನು ತೆರೆಯಬೇಕು. ಕದನ ವಿರಾಮಕ್ಕೆ ಪಾಕಿಸ್ತಾನದ ಪ್ರಯತ್ನಗಳಿಗೆ ಅಬ್ಬಾಸ್ ಅರಘ್ಚಿ ಕೃತಜ್ಞತೆ ಸಲ್ಲಿಸಿದರು ಮತ್ತು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರನ್ನು ಶ್ಲಾಘಿಸಿದರು.

ಇರಾನ್‌ಗೆ ನೀಡಿದ್ದ 48 ಗಂಟೆಗಳ ಡೆಡ್‌ಲೈನ್‌ ಅಮೆರಿಕ ಕಾಲಮಾನ ರಾತ್ರಿ 8 ಗಂಟೆಗೆ ಅಂತ್ಯವಾಗುವ ಒಂದು ಗಂಟೆಯ ಮೊದಲು ಟ್ರಂಪ್‌ ತಮ್ಮ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ಇಂದು ರಾತ್ರಿ ಇರಾನ್‌ಗೆ ಕಳುಹಿಸಲಾಗುತ್ತಿರುವ ವಿನಾಶಕಾರಿ ಪಡೆಗಳನ್ನು ತಡೆಹಿಡಿಯುವಂತೆ ಮನವಿ ಮಾಡಿದರು. ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಈ ಕೂಡಲೇ ತೆರೆಯಲು ಒಪ್ಪಿಕೊಂಡರೆ ಇರಾನ್‌ ಮೇಲೆ ಮಾಡಲು ಉದ್ದೇಶಿಸಿರುವ ಬಾಂಬ್‌ ದಾಳಿಯನ್ನು ಎರಡು ವಾರಗಳ ಕಾಲ ತಡೆ ಹಿಡಿಯಲು ಒಪ್ಪಿಗೆ ನೀಡುತ್ತೇನೆ. ಇದು ದ್ವಿಪಕ್ಷೀಯ ಕದನ ವಿರಾಮ ಆಗಲಿದೆ ಎಂದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:16 am, Wed, 8 April 26

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!