AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​ ಹೆಣ್ಣುಮಕ್ಕಳು ಸರಿಯಾಗಿ ಹಿಜಾಬ್ ಧರಿಸದಿದ್ದರೆ 60 ಛಡಿ ಏಟು, 10 ವರ್ಷಗಳ ಜೈಲು ಶಿಕ್ಷೆ: ಲಿಂಗ ಭೇದ ನೀತಿ ಎಂದು ಕರೆದ ವಿಶ್ವಸಂಸ್ಥೆ

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಮೇಲೆ ಅಲ್ಲಿನ ಹೆಣ್ಣುಮಕ್ಕಳನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೋ ಹಾಗೆಯೇ ಇರಾನ್ ಕೂಡ ಅಲ್ಲಿನ ಹೆಣ್ಣುಮಕ್ಕಳ ವಿರುದ್ಧ ಕಠಿಣ ಕಾನೂನು ತರಲು ಮುಂದಾಗಿದೆ. ಇರಾನ್​ನಲ್ಲಿ ಹೆಣ್ಣುಮಕ್ಕಳು ಹಿಜಾಬ್​ನ್ನು ಸರಿಯಾಗಿ ಧರಿಸದಿದ್ದರೆ ಅವರಿಗೆ 60 ಛಡಿ ಏಟು ಹಾಗೂ 10 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸುವ ಲಿಂಗ ಭೇದ ಮಸೂದೆಯನ್ನು ಜಾರಿಗೆ ತರಲು ಹೊರಟಿದೆ.

ಹಿಜಾಬ್Image Credit source: NBC News
ನಯನಾ ರಾಜೀವ್
|

Updated on: Sep 14, 2023 | 7:59 AM

Share

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಮೇಲೆ ಅಲ್ಲಿನ ಹೆಣ್ಣುಮಕ್ಕಳನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೋ ಹಾಗೆಯೇ ಇರಾನ್ ಕೂಡ ಅಲ್ಲಿನ ಹೆಣ್ಣುಮಕ್ಕಳ ವಿರುದ್ಧ ಕಠಿಣ ಕಾನೂನು ತರಲು ಮುಂದಾಗಿದೆ. ಇರಾನ್​ನಲ್ಲಿ ಹೆಣ್ಣುಮಕ್ಕಳು ಹಿಜಾಬ್​ನ್ನು ಸರಿಯಾಗಿ ಧರಿಸದಿದ್ದರೆ ಅವರಿಗೆ 60 ಛಡಿ ಏಟು ಹಾಗೂ 10 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸುವ ಲಿಂಗ ಭೇದ ಮಸೂದೆಯನ್ನು ಜಾರಿಗೆ ತರಲು ಹೊರಟಿದೆ.

ಸಾರ್ವಜನಿಕವಾಗಿ ಕಡ್ಡಾಯವಾಗಿ ಹಿಜಾಬ್ ಧರಿಸಲೇಬೇಕು, ಇಲ್ಲದಿದ್ದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ, ಇದು ಕೊಲೆ ಮತ್ತು ಮಾದಕವಸ್ತು ಕಳ್ಳಸಾಗಣೆಯಷ್ಟೇ ಗಂಭೀರ ಅಪರಾಧ ಎಂದು ಪರಿಗಣಿಸಲಾಗಿದೆ.

ಇದಕ್ಕೆ ಈಗಾಗಲೇ ಸಿದ್ಧತೆಗಳು ಪ್ರಾರಂಭವಾಗಿವೆ, ರಸ್ತೆ ರಸ್ತೆಗಳಲ್ಲೂ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ, ನಿಯಮ ಉಲ್ಲಂಘಿಸುವ ಹೆಣ್ಣುಮಕ್ಕಳ ಫೋಟೊವನ್ನು ಸೆರೆ ಹಿಡಿಯುತ್ತದೆ. ಮಹಿಳೆಯರನ್ನು ಬಂಧಿಸಲು ಚೆಕ್​ಪೋಸ್ಟ್​ಗಳನ್ನು ಸ್ಥಾಪಿಸಲಾಗಿದೆ.

ಮತ್ತಷ್ಟು ಓದಿ: ಇಂಡೋನೇಷ್ಯಾ: ಸರಿಯಾಗಿ ಹಿಜಾಬ್ ಧರಿಸಿಲ್ಲ ಎಂದು 14 ವಿದ್ಯಾರ್ಥಿನಿಯರ ತಲೆ ಬೋಳಿಸಿದ ಶಿಕ್ಷಕರು

ಇರಾನ್​ನ ಈ ನಿರ್ಧಾರವನ್ನು ವಿಶ್ವಸಂಸ್ಥೆಯ ತಜ್ಞರು ಲಿಂಗ ಭೇದ ನೀತಿ ಎಂದು ಕರೆದಿದ್ದಾರೆ. ಇದೇ ರೀತಿ ತಾಲಿಬಾನಿಗಳು ಕೂಡ ಅಫ್ಘಾನ್​ನಲ್ಲಿ ಮಹಿಳೆಯ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.

ಮಹಿಳೆಯರಿಗೆ ಓದುವ ಹಕ್ಕಿಲ್ಲ, ಕೆಲಸ ಮಾಡುವ ಹಕ್ಕಿಲ್ಲ, ಸಾರ್ವಜನಿಕ ಸ್ಥಳಗಳಲ್ಲಿ ತಮಗೆ ಬೇಕಾದ ರೀತಿ ನಡೆದುಕೊಂಡು ಹೋಗುವ ಹಕ್ಕಿಲ್ಲ, ರಾಷ್ಟ್ರೀಯ ಉದ್ಯಾನಗಳಿಗೆ ಭೇಟಿ ನೀಡುವಂತಿಲ್ಲ, ಹೋಟೆಲ್​ಗಳಿಗೆ ಪುರುಷರಿಲ್ಲದೆ ಒಬ್ಬಂಟಿಯಾಗಿ ಹೋಗುವಂತಿಲ್ಲ ಹೀಗೆ ಹತ್ತು ಹಲವು ನಿರ್ಬಂಧಗಳನ್ನು ಹೇರಿ ಮಹಿಳೆಯರಿಗೆ ಉಸಿರುಗಟ್ಟುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಇರಾನ್​ನಲ್ಲೂ ಮಹಿಳೆಯರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನಗಳು ಮುಂದುವರೆದಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್