ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಮೇಲೆ ಅಲ್ಲಿನ ಹೆಣ್ಣುಮಕ್ಕಳನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೋ ಹಾಗೆಯೇ ಇರಾನ್ ಕೂಡ ಅಲ್ಲಿನ ಹೆಣ್ಣುಮಕ್ಕಳ ವಿರುದ್ಧ ಕಠಿಣ ಕಾನೂನು ತರಲು ಮುಂದಾಗಿದೆ. ಇರಾನ್ನಲ್ಲಿ ಹೆಣ್ಣುಮಕ್ಕಳು ಹಿಜಾಬ್ನ್ನು ಸರಿಯಾಗಿ ಧರಿಸದಿದ್ದರೆ ಅವರಿಗೆ 60 ಛಡಿ ಏಟು ಹಾಗೂ 10 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸುವ ಲಿಂಗ ಭೇದ ಮಸೂದೆಯನ್ನು ಜಾರಿಗೆ ತರಲು ಹೊರಟಿದೆ.
ಸಾರ್ವಜನಿಕವಾಗಿ ಕಡ್ಡಾಯವಾಗಿ ಹಿಜಾಬ್ ಧರಿಸಲೇಬೇಕು, ಇಲ್ಲದಿದ್ದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ, ಇದು ಕೊಲೆ ಮತ್ತು ಮಾದಕವಸ್ತು ಕಳ್ಳಸಾಗಣೆಯಷ್ಟೇ ಗಂಭೀರ ಅಪರಾಧ ಎಂದು ಪರಿಗಣಿಸಲಾಗಿದೆ.
ಇದಕ್ಕೆ ಈಗಾಗಲೇ ಸಿದ್ಧತೆಗಳು ಪ್ರಾರಂಭವಾಗಿವೆ, ರಸ್ತೆ ರಸ್ತೆಗಳಲ್ಲೂ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ, ನಿಯಮ ಉಲ್ಲಂಘಿಸುವ ಹೆಣ್ಣುಮಕ್ಕಳ ಫೋಟೊವನ್ನು ಸೆರೆ ಹಿಡಿಯುತ್ತದೆ. ಮಹಿಳೆಯರನ್ನು ಬಂಧಿಸಲು ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ.
ಮತ್ತಷ್ಟು ಓದಿ: ಇಂಡೋನೇಷ್ಯಾ: ಸರಿಯಾಗಿ ಹಿಜಾಬ್ ಧರಿಸಿಲ್ಲ ಎಂದು 14 ವಿದ್ಯಾರ್ಥಿನಿಯರ ತಲೆ ಬೋಳಿಸಿದ ಶಿಕ್ಷಕರು
ಇರಾನ್ನ ಈ ನಿರ್ಧಾರವನ್ನು ವಿಶ್ವಸಂಸ್ಥೆಯ ತಜ್ಞರು ಲಿಂಗ ಭೇದ ನೀತಿ ಎಂದು ಕರೆದಿದ್ದಾರೆ. ಇದೇ ರೀತಿ ತಾಲಿಬಾನಿಗಳು ಕೂಡ ಅಫ್ಘಾನ್ನಲ್ಲಿ ಮಹಿಳೆಯ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
ಮಹಿಳೆಯರಿಗೆ ಓದುವ ಹಕ್ಕಿಲ್ಲ, ಕೆಲಸ ಮಾಡುವ ಹಕ್ಕಿಲ್ಲ, ಸಾರ್ವಜನಿಕ ಸ್ಥಳಗಳಲ್ಲಿ ತಮಗೆ ಬೇಕಾದ ರೀತಿ ನಡೆದುಕೊಂಡು ಹೋಗುವ ಹಕ್ಕಿಲ್ಲ, ರಾಷ್ಟ್ರೀಯ ಉದ್ಯಾನಗಳಿಗೆ ಭೇಟಿ ನೀಡುವಂತಿಲ್ಲ, ಹೋಟೆಲ್ಗಳಿಗೆ ಪುರುಷರಿಲ್ಲದೆ ಒಬ್ಬಂಟಿಯಾಗಿ ಹೋಗುವಂತಿಲ್ಲ ಹೀಗೆ ಹತ್ತು ಹಲವು ನಿರ್ಬಂಧಗಳನ್ನು ಹೇರಿ ಮಹಿಳೆಯರಿಗೆ ಉಸಿರುಗಟ್ಟುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದೀಗ ಇರಾನ್ನಲ್ಲೂ ಮಹಿಳೆಯರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನಗಳು ಮುಂದುವರೆದಿವೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ