2 ತಿಂಗಳಿಂದ ಮುಚ್ಚಿದ್ದ ಇರಾನ್​ನ ಟೆಹ್ರಾನ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಆರಂಭ

ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಯುದ್ಧದ ನಂತರ ಇರಾನ್ 2 ತಿಂಗಳ ನಂತರ ಮೊದಲ ಬಾರಿಗೆ ಟೆಹ್ರಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಮರ್ಷಿಯಲ್ ವಿಮಾನಗಳ ಹಾರಾಟವನ್ನು ಪುನರಾರಂಭಿಸಿದೆ. 2 ತಿಂಗಳ ಯುದ್ಧ ಸ್ಥಗಿತದ ನಂತರ ಇರಾನ್ ಟೆಹ್ರಾನ್ ವಿಮಾನ ನಿಲ್ದಾಣವನ್ನು ಮತ್ತೆ ತೆರೆದಿದೆ. ಸುಮಾರು 2 ತಿಂಗಳ ಹಿಂದೆ ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಸಂಘರ್ಷ ಪ್ರಾರಂಭವಾದ ನಂತರ ಇರಾನ್ ತನ್ನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಂದ್ ಮಾಡಿತ್ತು. ಅದೀಗ ತೆರೆದಿದೆ.

2 ತಿಂಗಳಿಂದ ಮುಚ್ಚಿದ್ದ ಇರಾನ್​ನ ಟೆಹ್ರಾನ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಆರಂಭ
Tehran Airport
Image Credit source: x

Updated on: Apr 25, 2026 | 3:21 PM

ಟೆಹ್ರಾನ್, ಏಪ್ರಿಲ್ 25: ಸುಮಾರು 2 ತಿಂಗಳ ಹಿಂದೆ ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಸಂಘರ್ಷ ಆರಂಭವಾದ ನಂತರ ಇರಾನ್ (Iran) ಇಂದು ಮೊದಲ ಬಾರಿಗೆ ಟೆಹ್ರಾನ್‌ನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಣಿಜ್ಯ ವಿಮಾನಗಳ ಹಾರಾಟವನ್ನು ಪುನರಾರಂಭಿಸಿತು. ಟೆಹ್ರಾನ್​ನ ಇಮಾಮ್ ಖೊಮೇನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಸ್ತಾನ್‌ಬುಲ್, ಮಸ್ಕತ್ ಮತ್ತು ಮದೀನಾಗೆ ವಿಮಾನಗಳು ಹೊರಟಿವೆ. ಅಮೆರಿಕದೊಂದಿಗೆ ಕದನ ವಿರಾಮದ ನಂತರ ಇರಾನ್ ಈ ತಿಂಗಳ ಆರಂಭದಲ್ಲಿ ತನ್ನ ವಾಯುಪ್ರದೇಶವನ್ನು ಮತ್ತೆ ತೆರೆದಿತ್ತು. ಇದು 2 ದೇಶಗಳ ನಡುವಿನ ಹಗೆತನವನ್ನು ಕೊನೆಗೊಳಿಸಿತು.

ಶುಕ್ರವಾರ ರಾತ್ರಿ ಇಸ್ಲಾಮಾಬಾದ್‌ಗೆ ಬಂದ ನಂತರ ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಪಾಕಿಸ್ತಾನದ ಮಿಲಿಟರಿ ಮತ್ತು ರಾಜಕೀಯ ನಾಯಕತ್ವದೊಂದಿಗೆ 2 ಸುತ್ತಿನ ಮಾತುಕತೆಗಳನ್ನು ನಡೆಸಿದ ಬಳಿಕ ಈ ಬೆಳವಣಿಗೆ ಸಂಭವಿಸಿದೆ. ಇರಾನ್ ನಿಯೋಗವು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆಗಳನ್ನು ಮುಂದುವರಿಸಲಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಅಮೆರಿಕದ ರಾಯಭಾರಿಗಳು ಇಂದು ಇಸ್ಲಾಮಾಬಾದ್‌ಗೆ ಆಗಮಿಸುವ ನಿರೀಕ್ಷೆಯಿದೆ. ಟೆಹ್ರಾನ್‌ನೊಂದಿಗೆ ಕದನ ವಿರಾಮ ಮಾತುಕತೆಗಳನ್ನು ಪುನರುಜ್ಜೀವನಗೊಳಿಸುವ ಹೊಸ ಪ್ರಯತ್ನದಲ್ಲಿ ಡೊನಾಲ್ಡ್ ಟ್ರಂಪ್ ಸ್ಟೀವ್ ವಿಟ್ಕಾಫ್ ಮತ್ತು ಜೇರೆಡ್ ಕುಶ್ನರ್ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಾರೆ ಎಂದು ಶ್ವೇತಭವನ ದೃಢಪಡಿಸಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ

ಫೆಬ್ರವರಿ 28ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿ ಸಂಘರ್ಷಕ್ಕೆ ಕಾರಣವಾಗಿತ್ತು. ಅದಾಗಿ 2 ತಿಂಗಳವರೆಗೆ ಯುದ್ಧ ಮುಂದುವರೆದಿತ್ತು. ಇದರಿಂದ ಇರಾನ್‌ನ ವಾಯುಪ್ರದೇಶವು ಮುಚ್ಚಲ್ಪಟ್ಟಿತ್ತು. ಇದು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿತ್ತು.

 

ಈ ವಾರದ ಆರಂಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮದ ವಿಸ್ತರಣೆಯನ್ನು ಘೋಷಿಸಿದ ನಂತರ ರಾಜತಾಂತ್ರಿಕತೆಗೆ ಹೆಚ್ಚಿನ ಸಮಯಕ್ಕಾಗಿ ಪಾಕಿಸ್ತಾನ ಮನವಿ ಮಾಡಿತ್ತು. ಇದಾದ ನಂತರ ಪಾಕಿಸ್ತಾನವು ಅಮೆರಿಕ ಮತ್ತು ಇರಾನ್ ಅನ್ನು ಮಾತುಕತೆಗೆ ಮತ್ತೆ ಒಟ್ಟು ಸೇರಿಸಲು ಪ್ರಯತ್ನ ಮಾಡುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:20 pm, Sat, 25 April 26

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us