AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

ಈಗಾಗಲೇ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಕದನವಿರಾಮ ಘೋಷಣೆಯಾಗಿದ್ದರೂ ಎರಡೂ ಬಣದವರ ನಡುವಿನ ಬಿಕ್ಕಟ್ಟು ಮಾತ್ರ ಸಂಪೂರ್ಣವಾಗಿ ಶಮನವಾಗಿಲ್ಲ. ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ್ದರಿಂದ ಕೋಪಗೊಂಡ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿತ್ತು. ಇದೀಗ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ಬಿಕ್ಕಟ್ಟು ಎದುರಾಗಿದ್ದು, ಇರಾನ್ ಬಯಸಿದರೂ ಈ ಮಾರ್ಗವನ್ನು ತೆರೆಯಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ಕಾರಣ ಇಲ್ಲಿದೆ.

ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ
HormuzImage Credit source: AP
ಸುಷ್ಮಾ ಚಕ್ರೆ
|

Updated on: Apr 11, 2026 | 3:30 PM

Share

ನವದೆಹಲಿ, ಏಪ್ರಿಲ್ 11: ಇಸ್ರೇಲ್ ಮತ್ತು ಅಮೆರಿಕದ ಜೊತೆ ಸಂಘರ್ಷ ಶುರುವಾದ ಬಳಿಕ ಇರಾನ್ ಹಾರ್ಮುಜ್ ಜಲಸಂಧಿಯನ್ನು(Strait of Hormuz)  ಮುಚ್ಚಿತ್ತು. ಇದು ತೈಲ ಟ್ಯಾಂಕರ್​ಗಳನ್ನು ಸಾಗಿಸುವ ಪ್ರಮುಖ ಜಾಗತಿಕ ಜಲಮಾರ್ಗವಾಗಿದೆ. ಈ ಜಗಳದ ಸಮಯದಲ್ಲಿ ಇರಾನ್ ಹಡಗುಗಳನ್ನು ಬಳಸಿಕೊಂಡು ಹಾರ್ಮುಜ್ ಜಲಸಂಧಿಯಲ್ಲಿ ಗಣಿಗಳನ್ನು (ಮೈನ್ಸ್) ಹಾಕಿತ್ತು. ಆದರೆ, ಇದೀಗ ಆ ಗಣಿಗಳನ್ನು ಪತ್ತೆಹಚ್ಚಲು ಇರಾನ್​ಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಬಯಸಿದರೂ ಇರಾನ್​ಗೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಮಧ್ಯೆ ಹಾದುಹೋಗುವುದನ್ನು ತಡೆಯಲು ಜಲಮಾರ್ಗದಲ್ಲಿ ಹಾಕಲಾದ ಎಲ್ಲಾ ಗಣಿಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ವಿಶ್ವದ ತೈಲ ಪೂರೈಕೆಯ ಐದನೇ ಒಂದು ಭಾಗವನ್ನು ಹೊಂದಿರುವ ಈ ಚಾಕ್‌ಪಾಯಿಂಟ್ ಅನ್ನು ಕೂಡಲೆ ಮತ್ತೆ ತೆರೆಯಲು ಮತ್ತು ಅದರ ಮೂಲಕ ಹೆಚ್ಚಿನ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಡೊನಾಲ್ಡ್ ಟ್ರಂಪ್ ಟೆಹ್ರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಅಮೆರಿಕದ ಜೊತೆಗಿನ ಇರಾನ್​ ಶಾಂತಿ ಮಾತುಕತೆಗಳು ನಡೆಯಲಿವೆ. ಅದರ ನಡುವೆ ಇರಾನ್ ಈ ಎಡವಟ್ಟು ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ; ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಇರಾನ್

ಸ್ಥಗಿತಗೊಂಡ ಪರಮಾಣು ಮಾತುಕತೆಗಳ ಕುರಿತು ಯುಎಸ್ ಮತ್ತು ಇಸ್ರೇಲ್ ಇರಾನ್‌ನಾದ್ಯಂತ ಜಂಟಿ ವೈಮಾನಿಕ ದಾಳಿ ನಡೆಸಿದ ಕೂಡಲೇ ಇರಾನ್ ಕಳೆದ ತಿಂಗಳು ಹಾರ್ಮುಜ್ ಅನ್ನು ಗಣಿಗಳನ್ನು ಹಾಕಲು ಸಣ್ಣ ಹಡಗುಗಳನ್ನು ಬಳಸಿತ್ತು. ಇರಾನ್ ಹಾಕಿದ ಕೆಲವು ಗಣಿಗಳನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಇರಾನಿನ ಅಧಿಕಾರಿಗಳು ಜಲಸಂಧಿಯನ್ನು ಅವ್ಯವಸ್ಥಿತವಾಗಿ ಗಣಿ ಹಾಕಿದ್ದಾರೆ ಮಾಡಿದ್ದಾರೆ ಎಂದು ಯುಎಸ್ ಅಧಿಕಾರಿಗಳು ಹೇಳಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಈ ವಿಷಯವು ಪಾಕಿಸ್ತಾನದಲ್ಲಿ ಇರಾನಿನ ಅಧಿಕಾರಿಗಳು ಮತ್ತು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ಅಮೆರಿಕದ ನಿಯೋಗದ ನಡುವೆ ನಡೆಯುತ್ತಿರುವ ಮಾತುಕತೆಗಳಲ್ಲಿ ಪ್ರಸ್ತಾಪವಾಗುವ ನಿರೀಕ್ಷೆಯಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ