AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಹತಾಶೆಯೇ ಈ ಒಪ್ಪಂದಕ್ಕೆ ಕಾರಣ ಎಂದ ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ

ಇರಾನ್ ಮತ್ತು ಅಮೆರಿಕ ಜಂಟಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ದೃಢಪಡಿಸಿದ್ದಾರೆ. ಅಮೆರಿಕದ ಯುದ್ಧ ಮುಗಿಸುವ ಹತಾಶೆಯೇ ಈ ಒಪ್ಪಂದಕ್ಕೆ ಕಾರಣ ಎಂದು ಖಮೇನಿ ಲೇವಡಿ ಮಾಡಿದ್ದಾರೆ. ಮಿಲಿಟರಿ ಕಾರ್ಯಾಚರಣೆ ನಿಲುಗಡೆ, ಅಮೆರಿಕ ನೌಕಾ ದಿಗ್ಬಂಧನ ಹಿಂತೆಗೆತ, ಹಾರ್ಮುಜ್ ಜಲಸಂಧಿ ಸಂಚಾರ ಸುಗಮಗೊಳಿಸುವುದು ಪ್ರಮುಖ ಅಂಶಗಳಾಗಿವೆ. ಇದು ಮಧ್ಯಂತರ ಒಪ್ಪಂದವಾಗಿದ್ದು, ಅಂತಿಮ ಒಪ್ಪಂದಕ್ಕೆ 60 ದಿನಗಳ ಕಾಲಾವಕಾಶವಿದೆ.

ಅಮೆರಿಕದ ಹತಾಶೆಯೇ ಈ ಒಪ್ಪಂದಕ್ಕೆ ಕಾರಣ ಎಂದ ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ
ಮೊಜ್ತಬಾ ಖಮೇನಿ Image Credit source: Getty Images
ನಯನಾ ರಾಜೀವ್
|

Updated on: Jun 19, 2026 | 8:08 AM

Share

ಟೆಹ್ರಾನ್, ಜೂನ್ 19: ವಿಶ್ವ ರಾಜಕಾರಣದಲ್ಲಿ ಭಾರಿ ತಿರುವು ಸಿಕ್ಕಿದೆ. ಇರಾನ್(Iran) ಮತ್ತು ಅಮೆರಿಕ ಜಂಟಿಯಾಗಿ ಇಸ್ಲಾಮಾಬಾದ್ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅಧಿಕೃತವಾಗಿ ದೃಢಪಡಿಸಿದ್ದಾರೆ. ಆದರೆ, ಈ ಒಪ್ಪಂದಕ್ಕೆ ಇರಾನ್‌ನ ಉತ್ಸಾಹ ಕಾರಣವಲ್ಲ, ಬದಲಿಗೆ ಯುದ್ಧ ಮುಗಿಸಲೇಬೇಕಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತಾಶೆಯೇ ಕಾರಣ ಎಂದು ಖಮೇನಿ ಲೇವಡಿ ಮಾಡಿದ್ದಾರೆ.

ವರ್ಸೈಲ್ಸ್ ಅರಮನೆಯಲ್ಲಿ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಆಯೋಜಿಸಿದ್ದ ಜಿ7 ಶೃಂಗಸಭೆಯ ಔತಣಕೂಟದ ವೇಳೆ ಈ ಒಪ್ಪಂದದ ಸಿದ್ಧತೆ ನಡೆದಿದ್ದು, ಶುಕ್ರವಾರ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ಇದಕ್ಕೆ ಔಪಚಾರಿಕವಾಗಿ ಸಹಿ ಬೀಳಲಿದೆ.

ಲೆಬನಾನ್ ಸೇರಿದಂತೆ ಎಲ್ಲಾ ರಂಗಗಳಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆ ಹಾಗೂ ಯುದ್ಧವನ್ನು ತಕ್ಷಣದಿಂದಲೇ ಶಾಶ್ವತವಾಗಿ ನಿಲ್ಲಿಸಲು ಉಭಯ ದೇಶಗಳು ಒಪ್ಪಿಕೊಂಡಿವೆ. ಅಮೆರಿಕವು ಇರಾನ್ ಮೇಲಿನ ನೌಕಾ ದಿಗ್ಬಂಧನವನ್ನು 30 ದಿನಗಳ ಒಳಗಾಗಿ ಹಿಂಪಡೆಯಬೇಕಾಗುತ್ತದೆ. ಇದರಿಂದ ಜಾಗತಿಕ ಹಡಗು ಸಂಚಾರ ಮೊದಲಿನ ಸ್ಥಿತಿಗೆ ಮರಳಲಿದೆ.

ಮತ್ತಷ್ಟು ಓದಿ: ಇರಾನ್-ಅಮೆರಿಕ ಐತಿಹಾಸಿಕ ಒಪ್ಪಂದ: ಜಾಗತಿಕ ತೈಲ ಬೆಲೆ ಕುಸಿತ

ಅಂತಿಮ ಒಪ್ಪಂದವಾದ 30 ದಿನಗಳಲ್ಲಿ ಇರಾನ್ ಸುತ್ತಮುತ್ತಲಿನ ಪ್ರದೇಶಗಳಿಂದ ಅಮೆರಿಕ ತನ್ನ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಲು ಒಪ್ಪಿಕೊಂಡಿದೆ.ಇರಾನ್ ತನ್ನ ವ್ಯಾಪ್ತಿಯಲ್ಲಿ ಬರುವ ಹಾರ್ಮುಜ್ ಜಲಸಂಧಿಯಲ್ಲಿ ಮುಂದಿನ 60 ದಿನಗಳವರೆಗೆ ಯಾವುದೇ ಶುಲ್ಕವಿಲ್ಲದೆ ಅಂತಾರಾಷ್ಟ್ರೀಯ ವಾಣಿಜ್ಯ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಭರವಸೆ ನೀಡಿದೆ.

ಸದ್ಯಕ್ಕೆ ಇದು ಮಧ್ಯಂತರ ಒಪ್ಪಂದವಾಗಿದ್ದು, ಪೂರ್ಣ ಪ್ರಮಾಣದ ಸಮಗ್ರ ಅಂತಿಮ ಒಪ್ಪಂದವನ್ನು ಸಿದ್ಧಪಡಿಸಲು ಉಭಯ ದೇಶಗಳಿಗೆ 60 ದಿನಗಳ ಕಾಲಾವಕಾಶ ಸಿಕ್ಕಿದೆ. ಈ ಒಪ್ಪಂದವನ್ನು ಜಗತ್ತಿಗೆ ಪ್ರಕಟಿಸಿರುವ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್,ಇದು ವಿಶ್ವದಲ್ಲಿ ಶಾಶ್ವತ ಶಾಂತಿಗೆ ದಾರಿ ಮಾಡಿಕೊಡಲಿದ್ದು, ಜಾಗತಿಕ ವ್ಯಾಪಾರಕ್ಕೆ ದೊಡ್ಡ ನಿರಾಳ ತರಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್