AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮೇಲೆ ದಾಳಿ ನಿಲ್ಲಬೇಕಾದರೆ ಅಮೆರಿಕನ್ನರನ್ನು ಹೊರಹಾಕಿ; ಗಲ್ಫ್ ದೇಶಗಳಿಗೆ ಇರಾನ್ ಎಚ್ಚರಿಕೆ

ಅಮೆರಿಕದ ವಾಯುನೆಲೆಗಳಿವೆ ಎಂಬ ಕಾರಣಕ್ಕೆ ಇರಾನ್ ಗಲ್ಫ್ ದೇಶಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಇದರಿಂದ ಅರಬ್ ದೇಶಗಳಲ್ಲಿಯೂ ಅನೇಕ ಸಾವು-ನೋವು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಗಲ್ಫ್ ದೇಶಗಳಿಗೆ ಎಚ್ಚರಿಕೆ ನೀಡಿರುವ ಇರಾನ್ 'ನೀವು ದಾಳಿಯನ್ನು ಅಂತ್ಯಗೊಳಿಸಲು ಬಯಸಿದರೆ ನಿಮ್ಮ ದೇಶಗಳಿಂದ ಅಮೆರಿಕನ್ನರನ್ನು ಹೊರಹಾಕಿ, ಎಲ್ಲಾ ಯುಎಸ್ ನೆಲೆಗಳನ್ನು ತೆಗೆದುಹಾಕಿ' ಎಂದು ಸಂದೇಶ ರವಾನಿಸಿದೆ.

ನಿಮ್ಮ ಮೇಲೆ ದಾಳಿ ನಿಲ್ಲಬೇಕಾದರೆ ಅಮೆರಿಕನ್ನರನ್ನು ಹೊರಹಾಕಿ; ಗಲ್ಫ್ ದೇಶಗಳಿಗೆ ಇರಾನ್ ಎಚ್ಚರಿಕೆ
Iran Attack
ಸುಷ್ಮಾ ಚಕ್ರೆ
|

Updated on: Mar 05, 2026 | 8:18 PM

Share

ಟೆಹ್ರಾನ್, ಮಾರ್ಚ್ 5: ಇರಾನ್ (Iran) ಎಲ್ಲ ಗಲ್ಫ್ ದೇಶಗಳಿಗೆ ಆ ದೇಶದಲ್ಲಿರುವ ಅಮೆರಿಕನ್ನರನ್ನು ಹೊರಹಾಕುವಂತೆ ಮತ್ತು ಎಲ್ಲಾ ಯುಎಸ್ ಮಿಲಿಟರಿ ನೆಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವಂತೆ ಎಚ್ಚರಿಕೆ ನೀಡಿದೆ. ಅಮೆರಿಕದ ವಾಯುನೆಲೆಗಳಿವೆ ಎಂಬ ಕಾರಣಕ್ಕೆ ಇರಾನ್ ಗಲ್ಫ್ ದೇಶಗಳ ಮೇಲೂ ದಾಳಿ ನಡೆಸಿದೆ.

ಯುಎಇ, ಸೌದಿ ಅರೇಬಿಯಾ, ಕುವೈತ್, ಓಮನ್, ಕತಾರ್, ಬಹ್ರೇನ್, ಟರ್ಕಿ ಮುಂತಾದ ದೇಶಗಳ ನಾಯಕರು ಇರಾನಿನ ಕ್ಷಿಪಣಿಗಳ ದಾಳಿಯನ್ನು ಕೊನೆಗೊಳಿಸಲು ಬಯಸಿದರೆ, ಅವರು ಅಮೆರಿಕನ್ನರನ್ನು ತಮ್ಮ ಪ್ರದೇಶಗಳಿಂದ ಹೊರಹಾಕಬೇಕು ಮತ್ತು ಎಲ್ಲಾ ಯುಎಸ್ ಮಿಲಿಟರಿ ನೆಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕಬೇಕು ಎಂದು ಇರಾನ್ ಸಂಸತ್ತಿನ ಸಂಸದರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಖೋರ್ರಮ್‌ಶಹರ್-4 ಕ್ಷಿಪಣಿ ಉಡಾಯಿಸಿದ ಇರಾನ್

ಫೆಬ್ರವರಿ 28ರಂದು ಅಮೆರಿಕ-ಇಸ್ರೇಲಿ ಸಂಘಟಿತ ದಾಳಿಗಳಿಗೆ ಪ್ರತೀಕಾರವಾಗಿ ಟೆಹ್ರಾನ್ ಟೆಲ್ ಅವಿವ್ ಮತ್ತು ಹಲವಾರು ಗಲ್ಫ್ ದೇಶಗಳಲ್ಲಿನ ಮಿಲಿಟರಿ ಸೌಲಭ್ಯಗಳ ಮೇಲೆ ಕ್ಷಿಪಣಿಗಳನ್ನು ಹಾರಿಸುತ್ತಲೇ ಇದೆ. ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಆರನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ ಈ ಎಚ್ಚರಿಕೆ ಬಂದಿದೆ.

ಅಮೆರಿಕ ಮತ್ತು ಇಸ್ರೇಲ್ ಜೊತೆ ನಡೆಯುತ್ತಿರುವ ಯುದ್ಧದಿಂದ ಇರಾನ್‌ನಲ್ಲಿ ಸಾವನ್ನಪ್ಪಿದವರ ಸಂಖ್ಯೆ 1,230 ತಲುಪಿದೆ. ಇಸ್ರೇಲ್ ಇಂದು ಲೆಬನಾನ್‌ನಲ್ಲಿ ಇರಾನಿನ ಬೆಂಬಲಿತ ಹೆಜ್ಬೊಲ್ಲಾ ಉಗ್ರಗಾಮಿ ಗುಂಪಿನ ವಿರುದ್ಧ ಹೊಸ ದಾಳಿಗಳ ಜೊತೆಗೆ ಬಹು ದಾಳಿಗಳನ್ನು ಘೋಷಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು