AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ebrahim Raisi Death: ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

Iran President Ebrahim Raisi Dies: ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ.

Ebrahim Raisi Death: ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು
ಇಬ್ರಾಹಿಂ ರೈಸಿ
ನಯನಾ ರಾಜೀವ್
|

Updated on:May 20, 2024 | 9:58 AM

Share

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರ ಪತನಗೊಂಡಿದ್ದ ಹೆಲಿಕಾಪ್ಟರ್‌ನಲ್ಲಿದ್ದ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಸಹಿತ ಎಲ್ಲರೂ ಮೃತಪಟ್ಟಿರುವುದಾಗಿ ಇರಾನ್‌ (Iran) ಮಾಧ್ಯಮಗಳು ವರದಿ ಮಾಡಿವೆ.

ಈ ದುರ್ಘಟನೆಯಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್‌ಮ್ಯಾನ್‌ಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ರೈಸಿ ನೆರೆಯ ರಾಷ್ಟ್ರವಾದ ಅಝರ್ಬೈಜಾನ್​ನಲ್ಲಿ ಆ ದೇಶದ ಅಧ್ಯಕ್ಷ ಇಲ್ಹಾಮ್ ಅಲಿಯಎವ್ ಜತೆ ಅಣೆಕಟ್ಟು ಉದ್ಘಾಟಿಸಿದ್ದರು. ಉಭಯ ರಾಷ್ಟ್ರಗಳು ಅರಾಸ್​ ನದಿಗೆ ನಿರ್ಮಿಸಿದ ಮೂರನೇ ಅಣೆಕಟ್ಟು ಇದಾಗಿದೆ.

ಮತ್ತಷ್ಟು ಓದಿ: Ebrahim Raisi: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ? ಪ್ರಧಾನಿ ಮೋದಿ ಕಳವಳ

ರೈಸಿ ಅವರಿದ್ದ ಹೆಲಿಕಾಪ್ಟರ್​ನೊಂದಿಗೆ ಪ್ರಯಾಣಿಸುತ್ತಿದ್ದ ಇತರೆ ಎರಡು ಬೆಂಗಾವಲು ಹೆಲಿಕಾಪ್ಟರ್​ಗಳು ಸುರಕ್ಷಿತವಾಗಿ ಹಿಂದಿರುಗಿವೆ.

ಬೆಂಗಾವಲು ಹೆಲಿಕಾಪ್ಟರ್​ಗಳಲ್ಲಿ ಇಂಧನ ಸಚಿವ ಅಲಿ ಅಕ್ಬರ್ ಮೆಹ್ರಾಬಿಯಾನ್ ಹಾಗೂ ವಸತಿ ಸಚಿವ ಮೆಹ್ರದಾದ್ ಇದ್ದು ಅವರು ಸುರಕ್ಷಿತವಾಗಿ ಮರಳಿದ್ದಾರೆ.

ರೆಡ್ ಕ್ರೆಸೆಂಟ್ ಅನ್ನು ಉಲ್ಲೇಖಿಸಿ ಹಲವಾರು ಇರಾನಿನ ಮಾಧ್ಯಮ ಚಾನೆಲ್‌ಗಳು, ರಕ್ಷಣಾ ತಂಡಗಳು ರೈಸಿಯ ಹೆಲಿಕಾಪ್ಟರ್‌ನ ಅವಶೇಷಗಳನ್ನು ಪತ್ತೆಮಾಡಿದ್ದವು. ರೆಡ್ ಕ್ರೆಸೆಂಟ್ ಅಧ್ಯಕ್ಷ ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಎಂಬ ಮಾಹಿತಿಯನ್ನು ನೀಡಿರಲಿಲ್ಲ. ಅಪಘಾತದ ಸ್ಥಳದಲ್ಲಿ ಯಾರೂ ಜೀವಂತವಾಗಿರುವ ಯಾವುದೇ ಕುರುಹು ಕಂಡುಬಂದಿರಲಿಲ್ಲ. ಇದೀಗ ಇಬ್ರಾಹಿಂ ರೈಸಿ ಮೃತಪಟ್ಟಿರುವ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:49 am, Mon, 20 May 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!