Video: ಇರಾನ್ ಯೂನಿವರ್ಸಿಟಿಯಲ್ಲಿ ಹಿಜಾಬ್ ಹೆಸರಿನಲ್ಲಿ ಕಿರುಕುಳ, ವಿದ್ಯಾರ್ಥಿನಿ ಮಾಡಿದ್ದೇನು?

ಇರಾನ್ ವಿಶ್ವವಿದ್ಯಾಲಯದಲ್ಲಿ ಹಿಜಾಬ್ ಹೆಸರಿನಲ್ಲಿ ನೀಡುತ್ತಿರುವ ಕಿರುಕುಳವನ್ನು ತಾಳಲಾರದೆ ವಿದ್ಯಾರ್ಥಿನಿಯೊಬ್ಬರು ಕಾಲೇಜು ಆವರಣದಲ್ಲಿ ಅರೆಬೆತ್ತಲಾಗಿ ನಿಂತು ಪ್ರತಿಭಟಿಸಿರುವ ಘಟನೆ ವರದಿಯಾಗಿದೆ. ಆಕೆ ತನ್ನ ಬೆಟ್ಟೆಯೆನ್ನವನ್ನು ಬಿಚ್ಚಿ ಒಳ ಉಡಿಪಿನಲ್ಲಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Video: ಇರಾನ್ ಯೂನಿವರ್ಸಿಟಿಯಲ್ಲಿ ಹಿಜಾಬ್ ಹೆಸರಿನಲ್ಲಿ ಕಿರುಕುಳ, ವಿದ್ಯಾರ್ಥಿನಿ ಮಾಡಿದ್ದೇನು?
ಇರಾನ್ ವಿದ್ಯಾರ್ಥಿನಿ
Follow us
ನಯನಾ ರಾಜೀವ್
|

Updated on: Nov 03, 2024 | 12:42 PM

ಇರಾನ್ ವಿಶ್ವವಿದ್ಯಾಲಯದಲ್ಲಿ ಹಿಜಾಬ್ ಹೆಸರಿನಲ್ಲಿ ನೀಡುತ್ತಿರುವ ಕಿರುಕುಳವನ್ನು ತಾಳಲಾರದೆ ವಿದ್ಯಾರ್ಥಿನಿಯೊಬ್ಬರು ಕಾಲೇಜು ಆವರಣದಲ್ಲಿ ಅರೆಬೆತ್ತಲಾಗಿ ನಿಂತು ಪ್ರತಿಭಟಿಸಿರುವ ಘಟನೆ ವರದಿಯಾಗಿದೆ. ಆಕೆ ತನ್ನ ಬೆಟ್ಟೆಯೆನ್ನವನ್ನು ಬಿಚ್ಚಿ ಒಳ ಉಡುಪಿನಲ್ಲಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಶ್ವವಿದ್ಯಾಲಯದ ಸಿಬ್ಬಂದಿ ಆಕೆಯನ್ನು ಬಂಧಿಸಲು ಯತ್ನಿಸುತ್ತಿರುವುದನ್ನು ಕಾಣಬಹುದು. ಅನೇಕ ಭದ್ರತಾ ಅವಳನ್ನು ಕಾರಿನೊಳಗೆ ಕೂರಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ, ಆದರೆ ಆಕೆ ಅವರನ್ನು ವಿರೋಧಿಸುತ್ತಾಳೆ. ಅಂತಿಮವಾಗಿ ಅವರು ಆಕೆಯನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗುತ್ತಾರೆ.

ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಪ್ರಕಾರ, ವೀಡಿಯೊ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾಲಯದ್ದಾಗಿದೆ. ಈ ಕುರಿತು ವಿಶ್ವವಿದ್ಯಾನಿಲಯದ ವಕ್ತಾರ ಅಮೀರ್ ಮಹಜೌಬ್ ಮಾತನಾಡಿ, ನಾವು ವಿದ್ಯಾರ್ಥಿನಿಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋದೆವು. ಅಲ್ಲಿ ಆಕೆ ತೀವ್ರ ಮಾನಸಿಕ ಒತ್ತಡದಿಂದ ನರಳುತ್ತಿರುವುದು ಕಂಡು ಬಂದಿದ್ದು, ಅಂದರೆ ಆಕೆಯ ಮನಸ್ಸು ಸ್ಥಿರವಾಗಿಲ್ಲ. ತನಿಖೆಯ ನಂತರ ಅವರನ್ನು ಮಾನಸಿಕ ಆಸ್ಪತ್ರೆಗೆ ವರ್ಗಾಯಿಸಲಾಗುತ್ತದೆ ಎಂದಿದ್ದಾರೆ.

ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಮಹಿಳೆ ಉದ್ದೇಶಪೂರ್ವಕವಾಗಿ ಮತ್ತು ಹಿಜಾಬ್ ವಿರುದ್ಧ ಪ್ರತಿಭಟನೆಗಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಸೆಪ್ಟೆಂಬರ್ 2022 ರಿಂದ, ಇರಾನ್‌ನಲ್ಲಿ ವಿವಿಧ ರೀತಿಯಲ್ಲಿ ಹಿಜಾಬ್ ವಿರುದ್ಧ ಭಾರಿ ಪ್ರತಿಭಟನೆಗಳು ನಡೆದಿವೆ.

2022ರ ಸೆಪ್ಟೆಂಬರ್​ನಲ್ಲಿ ಇರಾನ್‌ನ ಪೊಲೀಸರು ಹಿಜಾಬ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಇರಾನ್-ಕುರ್ದಿಷ್  ಮಹ್ಸಾ ಅಮಿನಿಯನ್ನು ಬಂಧಿಸಿದರು. ಬಳಿಕ  ಅವರು ಸಾವನ್ನಪ್ಪಿದ್ದರು. ಹಿಜಾಬ್ ನಿಯಮಾವಳಿಗಳನ್ನು ಜಾರಿಗೊಳಿಸಲು ಏಪ್ರಿಲ್ 13 ರಂದು ಪ್ರಾರಂಭಿಸಲಾದ ಪ್ರಾಜೆಕ್ಟ್ ನೂರ್, ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಪಡೆಗಳು, ಬಸಿಜ್ ಅರೆಸೈನಿಕ ಘಟಕಗಳು ಮತ್ತು ಸರಳ ಉಡುಪಿನ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗಮನಾರ್ಹ ಹೆಚ್ಚಳಕ್ಕೆ ಕಾರಣವಾಗಿದೆ.

ಹೆಚ್ಚುವರಿಯಾಗಿ, ಟೆಹ್ರಾನ್‌ನ ಅಲ್ಜಹ್ರಾ ವಿಶ್ವವಿದ್ಯಾಲಯದಂತಹ ವಿಶ್ವವಿದ್ಯಾನಿಲಯಗಳು ಪ್ರವೇಶ ದ್ವಾರಗಳಲ್ಲಿ ಫೇಸ್​ ರಿಕಗ್ನಿಷನ್ ತಂತ್ರಜ್ಞಾನವನ್ನು ಅಳವಡಿಸಿಕೊಂಡಿವೆ, ಕಟ್ಟುನಿಟ್ಟಾದ ಹಿಜಾಬ್ ಕಾನೂನುಗಳನ್ನು ಅನುಸರಿಸದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನಿರಾಕರಿಸುತ್ತವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ