AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧ ನಿಲ್ಲಿಸುವುದು ಈಗ ಅಮೆರಿಕದ ಕೈಯಲ್ಲಿದೆ: ವಿಶ್ವಸಂಸ್ಥೆ ವೇದಿಕೆಯಲ್ಲಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ನೇರ ಸಂದೇಶ

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ವಿಶ್ವಸಂಸ್ಥೆಯಲ್ಲಿ ಅಮೆರಿಕಕ್ಕೆ ನೇರ ಸಂದೇಶ ನೀಡಿದ್ದಾರೆ: ನಿರ್ಬಂಧ ತೆರವುಗೊಳಿಸಿದರೆ ಹಾರ್ಮುಜ್ ಜಲಸಂಧಿಯನ್ನು 7 ದಿನಗಳಲ್ಲಿ ಮುಕ್ತಗೊಳಿಸುವುದಾಗಿ ಆಫರ್ ನೀಡಿದ್ದಾರೆ. ಯುದ್ಧ ಮುಂದುವರಿಸಬೇಕೇ ಅಥವಾ ಅಂತ್ಯಗೊಳಿಸಬೇಕೇ ಎಂಬ ನಿರ್ಧಾರ ಈಗ ಅಮೆರಿಕದ ಕೈಯಲ್ಲಿದೆ. ಇದು ಜಾಗತಿಕ ಇಂಧನ ಸಾಗಣೆಗೆ ಮಹತ್ವದ್ದಾಗಿದ್ದು, ಮಧ್ಯಪ್ರಾಚ್ಯದಲ್ಲಿ ರಾಜತಾಂತ್ರಿಕ ಬೆಳವಣಿಗೆಗಳು ತೀವ್ರಗೊಂಡಿವೆ.

ಯುದ್ಧ ನಿಲ್ಲಿಸುವುದು ಈಗ ಅಮೆರಿಕದ ಕೈಯಲ್ಲಿದೆ: ವಿಶ್ವಸಂಸ್ಥೆ ವೇದಿಕೆಯಲ್ಲಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ನೇರ ಸಂದೇಶ
ಇರಾನ್ ಅಧ್ಯಕ್ಷ ಮಸೌದ್Image Credit source: PTI
ನಯನಾ ರಾಜೀವ್
|

Updated on: Sep 25, 2026 | 9:45 AM

Share

ವಾಷಿಂಗ್ಟನ್, ಸೆಪ್ಟೆಂಬರ್ 25: ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ತೀವ್ರಗೊಂಡಿರುವ ಯುದ್ಧದ ನಡುವೆಯೇ ಮಹತ್ವದ ರಾಜತಾಂತ್ರಿಕ ಬೆಳವಣಿಗೆಯೊಂದು ಹೊರಬಿದ್ದಿದೆ. ವಾಷಿಂಗ್ಟನ್ ತನ್ನ ಕಠಿಣ ಆರ್ಥಿಕ ದಿಗ್ಬಂಧನ ಹಾಗೂ ಬಂದರುಗಳ ಮೇಲಿನ ನೌಕಾ ನಿರ್ಬಂಧಗಳನ್ನು ಸಡಿಲಿಸಿದರೆ, ಕೇವಲ ಏಳು ದಿನಗಳಲ್ಲಿ ಜಾಗತಿಕ ಇಂಧನ ಸಾಗಣೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಕ್ತವಾಗಿ ತೆರೆಯುವುದಾಗಿ ಇರಾನ್ ಆಫರ್ ನೀಡಿದೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿರುವ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್, ಅಮೆರಿಕದ ನವೆಂಬರ್ ಚುನಾವಣೆಗಳಿಗೆ ಮುನ್ನ ಜೂನ್ ತಿಂಗಳ ಕದನ ವಿರಾಮ ಒಪ್ಪಂದವನ್ನು ಪುನರುಜ್ಜೀವನಗೊಳಿಸಲು ಒಲವು ವ್ಯಕ್ತಪಡಿಸಿದ್ದಾರೆ. ಯುದ್ಧವನ್ನು ಕೊನೆಗೊಳಿಸಬೇಕೇ ಅಥವಾ ಮುಂದುವರೆಸಬೇಕೇ ಎಂಬ ತೀರ್ಮಾನ ಈಗ ಅಮೆರಿಕದ ಕೈಯಲ್ಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಧ್ಯವರ್ತಿಗಳ ಮೂಲಕ ಅಮೆರಿಕಕ್ಕೆ 7 ದಿನಗಳ ಮಾರ್ಗಸೂಚಿ ಪ್ರಸ್ತಾವನೆಯನ್ನು ರವಾನಿಸಲಾಗಿದ್ದು, ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ಹಿಂಪಡೆದರೆ ಹಾರ್ಮುಜ್ ಜಲಮಾರ್ಗವನ್ನು ಸಂಪೂರ್ಣವಾಗಿ ಮುಕ್ತಗೊಳಿಸುವುದಾಗಿ ತಿಳಿಸಲಾಗಿದೆ. ಒಂದೆಡೆ ಅಧ್ಯಕ್ಷರು ಸಂಧಾನದ ಮಾತುಗಳನ್ನಾಡುತ್ತಿದ್ದರೆ, ಮತ್ತೊಂದೆಡೆ ಇರಾನ್‌ನ ಸುಪ್ರೀಂ ಲೀಡರ್ ಮಿಲಿಟರಿ ಸಲಹೆಗಾರರು ಕಠಿಣ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕ ಏನಾದರೂ ಹೊಸದಾಗಿ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ, ಈ ಯುದ್ಧ ಕೇವಲ ಗಲ್ಫ್ ವಲಯಕ್ಕೆ ಮಾತ್ರ ಸೀಮಿತವಾಗಿರದೆ ಕೆಂಪು ಸಮುದ್ರ, ಬಾಬ್ ಅಲ್-ಮಂಡೇಬ್ ಜಲಸಂಧಿ ಮತ್ತು ಇಡೀ ಹಿಂದೂ ಮಹಾಸಾಗರಕ್ಕೂ ಹರಡಲಿದೆ ಎಂದು ಎಚ್ಚರಿಸಿದ್ದಾರೆ.

ಮತ್ತಷ್ಟು ಓದಿ: ಪಾಕಿಸ್ತಾನ ಹೊತ್ತು ತಂದಿಲ್ಲ ಅಮೆರಿಕ ಸಂದೇಶ: ನಖ್ವಿ ಟೆಹ್ರಾನ್ ಪ್ರವಾಸದ ಅಸಲಿ ಸತ್ಯ ಬಿಚ್ಚಿಟ್ಟ ಇರಾನ್

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇರಾನ್‌ನ ಮಿಲಿಟರಿ ಶಕ್ತಿಯನ್ನು ಪುಡಿಪುಡಿ ಮಾಡಿರುವುದಾಗಿ ವಿಶ್ವಸಂಸ್ಥೆಯಲ್ಲಿ ಹೇಳಿಕೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಕತಾರ್, ನೆತನ್ಯಾಹು ತಮ್ಮ ದೇಶೀಯ ರಾಜಕೀಯ ಸಂಕಷ್ಟಗಳಿಂದ ಜಗತ್ತಿನ ಗಮನ ಬೇರೆಡೆ ಸೆಳೆಯಲು ದಾಳಿಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದೆ. ಮತ್ತೊಂದೆಡೆ ಯುಎಇ (UAE) ಇರಾನ್‌ನ ವಿಮಾನಯಾನ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ರಷ್ಯಾ ಹಾಗೂ ಪಾಕಿಸ್ತಾನದ ರಾಜತಾಂತ್ರಿಕ ಯತ್ನ: ನ್ಯೂಯಾರ್ಕ್‌ನಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಕ್ಚಿ ಅವರನ್ನು ಭೇಟಿಯಾದ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್, ಅಮೆರಿಕ-ಇಸ್ರೇಲ್ ಕದನದಿಂದ ಸೃಷ್ಟಿಯಾಗಿರುವ ಈ ಬಿಕ್ಕಟ್ಟನ್ನು ಕೇವಲ ರಾಜತಾಂತ್ರಿಕ ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳಲು ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಕೂಡ ತೆರೆಮರೆಯ ಮಾತುಕತೆಗಳು ನಡೆಯುತ್ತಿದ್ದು, ಶಾಂತಿ ಸ್ಥಾಪನೆಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾರ್ಮುಜ್ ಜಲಸಂಧಿಯ ಮಹತ್ವ: ವಿಶ್ವದ ಒಟ್ಟು ಕಚ್ಚಾ ತೈಲ ಬಳಕೆಯ ಸುಮಾರು ಶೇ.20ರಷ್ಟು ಮತ್ತು ಅಪಾರ ಪ್ರಮಾಣದ ಎಲ್‌ಎನ್‌ಜಿ (ದ್ರವೀಕೃತ ನೈಸರ್ಗಿಕ ಅನಿಲ) ಸಾಗಣೆಯಾಗುವುದು ಇದೇ ಕಿರಿದಾದ ಹಾರ್ಮುಜ್ ಜಲಸಂಧಿಯ ಮೂಲಕ. ಇದು ಬಂದ್ ಆಗಿರುವುದರಿಂದ ಭಾರತ, ಚೀನಾ, ಜಪಾನ್ ಸೇರಿದಂತೆ ಇಡೀ ವಿಶ್ವದ ಇಂಧನ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯ ಭೀತಿ ಆವರಿಸಿದೆ.

ಪರ್ಯಾಯ ಸಾಗಣೆ ಮಾರ್ಗಗಳು: ಹಾರ್ಮುಜ್ ಜಲಸಂಧಿ ಸ್ಥಗಿತಗೊಂಡಿರುವುದರಿಂದ ಭಾರತ ಸೇರಿದಂತೆ ಹಲವು ಏಷ್ಯನ್ ರಾಷ್ಟ್ರಗಳು ಒಮಾನ್‌ನ ಸೊಹಾರ್ ಬಂದರಿನ ಮೂಲಕ ಪರ್ಯಾಯ ರಸ್ತೆ ಮತ್ತು ಸಮುದ್ರ ಮಾರ್ಗಗಳಲ್ಲಿ ಸರಕು ಸಾಗಿಸಲು ಅನ್ವೇಷಣೆ ನಡೆಸುತ್ತಿವೆ.

ಅಮೆರಿಕದ ನಡೆ: ಇರಾನ್‌ನ ಈ 7 ದಿನಗಳ ಪ್ರಸ್ತಾವನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲವಾದರೂ, ಕತಾರ್ ಮೂಲಕ ಪರೋಕ್ಷ ಸಂದೇಶಗಳ ವಿನಿಮಯ ಮುಂದುವರೆದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಭಾರೀ ಭೂಕುಸಿತ, ತಡೆಗೋಡೆ ಕುಸಿತದಿಂದ ಒಡಿಶಾದ ಕಳಿಂಗ ಘಾಟ್ ರಸ್ತೆ ಬಂದ್
ಭಾರೀ ಭೂಕುಸಿತ, ತಡೆಗೋಡೆ ಕುಸಿತದಿಂದ ಒಡಿಶಾದ ಕಳಿಂಗ ಘಾಟ್ ರಸ್ತೆ ಬಂದ್
ಚಿತ್ರದುರ್ಗ ಎಸ್ಪಿ ವಿರುದ್ಧ ಶಾಸಕ ವೀರೇಂದ್ರ ಪಪ್ಪಿ ಕೆಂಡಾಮಂಡಲ
ಚಿತ್ರದುರ್ಗ ಎಸ್ಪಿ ವಿರುದ್ಧ ಶಾಸಕ ವೀರೇಂದ್ರ ಪಪ್ಪಿ ಕೆಂಡಾಮಂಡಲ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ
ಕಲಬುರ್ಗಿಯಲ್ಲಿ ಕನೇರಿ ಶ್ರೀಗಳ ಸಮಾವೇಶಕ್ಕೆ ತೀವ್ರ ವಿರೋಧ
ಕಲಬುರ್ಗಿಯಲ್ಲಿ ಕನೇರಿ ಶ್ರೀಗಳ ಸಮಾವೇಶಕ್ಕೆ ತೀವ್ರ ವಿರೋಧ