AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ಅಮೆರಿಕ-ಇರಾನ್ ಯುದ್ಧದ ಮಧ್ಯೆ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಆರೋಗ್ಯದ ಬಗ್ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಮಹತ್ವದ ಹೇಳಿಕೆ ನೀಡಿದ್ದಾರೆ. ಖಮೇನಿ ಬದುಕಿದ್ದಾರೆ, ಆದರೆ ಗಾಯಗೊಂಡಿರಬಹುದು ಎಂದಿದ್ದಾರೆ. ಮಾಧ್ಯಮ ವರದಿಗಳು ಅವರು ಕೋಮಾದಲ್ಲಿದ್ದಾರೆ, ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ ಎಂದು ತಿಳಿಸಿವೆ. ಯುದ್ಧದ ತೀವ್ರತೆ ಹೆಚ್ಚಿರುವಾಗ, ಖಮೇನಿ ಸ್ಥಿತಿ ಬಗ್ಗೆ ಊಹಾಪೋಹಗಳು ಹರಡುತ್ತಿವೆ.

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?
ಡೊನಾಲ್ಡ್​ ಟ್ರಂಪ್ -ಮೊಜ್ತಬಾ
ನಯನಾ ರಾಜೀವ್
|

Updated on: Mar 13, 2026 | 1:28 PM

Share

ವಾಷಿಂಗ್ಟನ್, ಮಾರ್ಚ್​ 13: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮಹತ್ವದ ಹೇಳಿಕೆ ನೀಡಿದ್ದಾರೆ. ಮೊಜ್ತಾಬಾ ಖಮೇನಿ ಉಸಿರಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಇಡೀ ಮಧ್ಯಪ್ರಾಚ್ಯವನ್ನು ಆವರಿಸಿದೆ. ಅಮೆರಿಕ-ಇಸ್ರೇಲ್ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ರಾಷ್ಟ್ರಗಳಾದ ಯುಎಇ, ಬಹ್ರೇನ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾಗಳ ಮೇಲೆ ದಾಳಿ ಮಾಡಿದೆ.

ಯುದ್ಧದ ಮಧ್ಯೆ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಅನೇಕ ಹೇಳಿಕೆಗಳು ಬರುತ್ತಿವೆ.

ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ನಡೆದ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು ಮತ್ತು ಮೊಜ್ತಬಾ ಖಮೇನಿ ಗಾಯಗೊಂಡಿದ್ದರು ಎಂದು ಅಮೆರಿಕದ ಮಾಧ್ಯಮ ವರದಿಯ ನಂತರ ಟ್ರಂಪ್ ಅವರ ಹೇಳಿಕೆ ಹೊರಬಿದ್ದಿದೆ .

ಮೊಜ್ತಬಾ ಖಮೇನಿ ಕೋಮಾದಲ್ಲಿದ್ದಾರೆ ಎಂದು ಅಮೆರಿಕದ ಮಾಧ್ಯಮ ವರದಿಗಳು ತಿಳಿಸಿವೆ. ಇರಾನ್‌ನಲ್ಲಿ ಯುದ್ಧ ಪ್ರಾರಂಭವಾದ ನಂತರ ಅಧಿಕಾರ ವಹಿಸಿಕೊಂಡಾಗಿನಿಂದ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮತ್ತಷ್ಟು ಓದಿ: ಹೊಸ ಟ್ಯಾರಿಫ್​ಗೆ ನೆಪಗಳ ಹುಡುಕಾಟ; ಭಾರತ ಸೇರಿ 16 ಟ್ರೇಡಿಂಗ್ ಪಾರ್ಟ್ನರ್ಸ್ ಮೇಲೆ ಅಮೆರಿಕ ತನಿಖೆ

ಫಾಕ್ಸ್ ನ್ಯೂಸ್ ರೇಡಿಯೊದಲ್ಲಿ ಬ್ರಿಯಾನ್ ಕಿಲ್ಮೀಡ್ ಶೋಗೆ ಮಾತನಾಡಿದ ಟ್ರಂಪ್, ಅವರು ಗಾಯಗೊಂಡಿರಬಹುದು, ಯಾವುದೋ ರೂಪದಲ್ಲಿ ಜೀವಂತವಾಗಿರಬಹುದು ಎಂದರು. ಇರಾನ್‌ನ ಸರ್ವೋಚ್ಚ ನಾಯಕರಾಗಿ ಅಧಿಕಾರ ವಹಿಸಿಕೊಂಡ ನಂತರ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಮೊಜ್ತಬಾ ಖಮೇನಿ ಅವರ ಬಗ್ಗೆ ತಮ್ಮ ಮೊದಲ ಹೇಳಿಕೆ ನೀಡಿದ್ದಾರೆ.

ಇರಾನ್‌ನೊಂದಿಗಿನ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕ ಹಿಂದೆ ಸರಿಯುವುದಿಲ್ಲ ಎಂದು ಅವರು ಹೇಳಿದ್ದಾರೆ. ಇರಾನ್‌ನಲ್ಲಿ ಇತ್ತೀಚೆಗೆ ನಡೆದ ದಾಳಿಗಳ ನಂತರ, ಮೊಜ್ತಾಬಾ ಖಮೇನಿ ಬಗ್ಗೆ ವಿವಿಧ ಊಹಾಪೋಹಗಳು ಹರಡುತ್ತಿವೆ. ದಿ ಸನ್ ವರದಿಯ ಪ್ರಕಾರ, 56 ವರ್ಷದ ಖಮೇನಿ ಈ ದಾಳಿಗಳಲ್ಲಿ ಒಂದು ಕಾಲು ಕಳೆದುಕೊಂಡಿದ್ದಾರೆ ಮತ್ತು ಅವರ ಹೊಟ್ಟೆ ಅಥವಾ ಯಕೃತ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಿದೆ.

ಮೊಜ್ತಬಾ ಖಮೇನಿ ಅವರ ಪತ್ನಿ, ಅವರ ಸಹೋದರಿಗಳಲ್ಲಿ ಒಬ್ಬರು, ಅವರ ಸೊಸೆ ಮತ್ತು ಅವರ ತಂದೆ ಮತ್ತು ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಕೂಡ ಅಮೆರಿಕದ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ.

ಯುದ್ಧ ಪ್ರಾರಂಭವಾದಾಗಿನಿಂದ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಯುದ್ಧವನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ ಅವರ ಮೊದಲ ಸಾರ್ವಜನಿಕ ಹೇಳಿಕೆಯನ್ನು ದೂರದರ್ಶನದಲ್ಲಿ ಅಥವಾ ವೀಡಿಯೊ ರೆಕಾರ್ಡಿಂಗ್ ಮೂಲಕ ವೈಯಕ್ತಿಕವಾಗಿ ನೀಡಲಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ