AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​ನ ಹೊಸ ಸುಪ್ರೀಂ ನಾಯಕ ಮುಜ್ತಾಬಾ ಖಮೇನಿಯ ಆಸ್ತಿ ಎಷ್ಟು?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಇಸ್ರೇಲ್ ಮತ್ತು ಅಮೆರಿಕ ಪಡೆಗಳು ಹತ್ಯೆ ಮಾಡಿದ ನಂತರ ಅವರ ಪುತ್ರ ಮೊಜ್ತಾಬಾ ಹೊಸೇನಿ ಖಮೇನಿಯವರನ್ನು ಇರಾನ್‌ನ ಹೊಸ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. 56 ವರ್ಷದ ಮುಜ್ತಾಬಾ ಖಮೇನಿ ಇರಾನ್​​ನ ಸುಪ್ರೀಂ ನಾಯಕರಾಗಿದ್ದಾರೆ. ಅವರು ಇರಾನ್ ಮಿಲಿಟರಿಯ ಮೇಲೆ ಸಂಪೂರ್ಣ ಅಧಿಕಾರ ಹೊಂದಿದ್ದಾರೆ. ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಹೊಸೇನಿ ಖಮೇನಿ ಅವರ ಸಂಪತ್ತು ಎಷ್ಟಿದೆ ಗೊತ್ತಾ?

ಇರಾನ್​ನ ಹೊಸ ಸುಪ್ರೀಂ ನಾಯಕ ಮುಜ್ತಾಬಾ ಖಮೇನಿಯ ಆಸ್ತಿ ಎಷ್ಟು?
Mojtaba Khamenei
ಸುಷ್ಮಾ ಚಕ್ರೆ
|

Updated on: Mar 04, 2026 | 4:26 PM

Share

ನವದೆಹಲಿ, ಮಾರ್ಚ್ 4: ಇರಾನ್‌ನ ತಜ್ಞರ ಸಭೆಯು ಹತ್ಯೆಗೀಡಾದ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ (Ayatollah Ali Khamenei) ಎರಡನೇ ಮಗ 56 ವರ್ಷದ ಮೊಜ್ತಬಾ ಹೊಸೇನಿ ಖಮೇನಿ ಅವರನ್ನು ಇರಾನ್ ದೇಶದ ಹೊಸ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಿದೆ. ಮೊಜ್ತಾಬಾ ಅವರು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆಂದು ಹೇಳಲಾಗಿದೆ. ಇರಾನ್‌ನ ತಜ್ಞರ ಸಭೆಯು ರೆವಲ್ಯೂಷನರಿ ಗಾರ್ಡ್ಸ್‌ನ ಒತ್ತಡದ ಮೇರೆಗೆ ಮೊಜ್ತಾಬಾ ಅವರನ್ನು ಆಯ್ಕೆ ಮಾಡಿದೆ ಎಂದು ಕೂಡ ಹೇಳಲಾಗುತ್ತಿದೆ.

ಮೊಜ್ತಾಬಾ ಅವರನ್ನು ಸಂಭಾವ್ಯ ಉತ್ತರಾಧಿಕಾರಿ ಎಂದು ಬಹಳ ಹಿಂದಿನಿಂದಲೂ ಪರಿಗಣಿಸಲಾಗಿದ್ದರೂ, ತಜ್ಞರಲ್ಲಿ ಭಿನ್ನಾಭಿಪ್ರಾಯಗಳಿದ್ದವು. ಕಳೆದ ವರ್ಷ ಸಿದ್ಧಪಡಿಸಲಾದ ಸಂಭಾವ್ಯ ಉತ್ತರಾಧಿಕಾರಿಗಳ ಪಟ್ಟಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ತನ್ನ ಮಗನ ಹೆಸರನ್ನು ಸೇರಿಸಿರಲಿಲ್ಲ. ಇರಾನ್‌ನ ಶಿಯಾ ಪಾದ್ರಿಗಳ ಸಂಪ್ರದಾಯದಲ್ಲಿ ತಂದೆಯ ಬಳಿಕ ಮಗ ಉತ್ತರಾಧಿಕಾರಿಯಾಗುವುದನ್ನು ಸಾಮಾನ್ಯವಾಗಿ ನೆಗೆಟಿವ್ ಎಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Mojtaba Khamenei: ಇರಾನ್​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಮಗ ಮೊಜ್ತಬಾ ನೇಮಕ

ಸಾರ್ವಜನಿಕ ಹುದ್ದೆಯನ್ನು ಎಂದಿಗೂ ಹೊಂದಿರದ ಮತ್ತು ಉನ್ನತ ದರ್ಜೆಯ ಧರ್ಮಗುರು ಅಲ್ಲದ ಮೊಜ್ತಬಾ ಇರಾನ್-ಇರಾಕ್ ಯುದ್ಧದ ಸಮಯದಲ್ಲಿ ಇರಾನಿನ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅವರು IRGCಯೊಂದಿಗಿನ ನಿಕಟ ಸಂಪರ್ಕಗಳಿಗೆ ಹೆಸರುವಾಸಿಯಾಗಿದ್ದಾರೆ.

ಮೊಜ್ತಬಾ ಖಮೇನಿಯವರ ಆಸ್ತಿ ಎಷ್ಟು?:

ಮೊಜ್ತಾಬಾ ಅವರ ನಿಖರವಾದ ಆಸ್ತಿಯ ಬಗ್ಗೆ ತಿಳಿದಿಲ್ಲವಾದರೂ ವಿವಿಧ ವರದಿಗಳು ಅವರು ಬಹು-ಮಿಲಿಯನೇರ್ ಎಂದು ಸೂಚಿಸುತ್ತವೆ. ಅವರು ವಿಶಾಲ ಹೂಡಿಕೆ ಜಾಲವನ್ನು ನೋಡಿಕೊಳ್ಳುತ್ತಾರೆ ಎಂದು ಹೇಳಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಅವರು ಸ್ವಿಸ್ ಬ್ಯಾಂಕ್ ಖಾತೆಗಳು ಮತ್ತು 138 ಮಿಲಿಯನ್‌ ಡಾಲರ್​​ಗಿಂತಲೂ ಹೆಚ್ಚು ಮೌಲ್ಯದ ಬ್ರಿಟಿಷ್ ಐಷಾರಾಮಿ ಆಸ್ತಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ:  Iran Army and IRGC: ಇರಾನ್​​ನಲ್ಲಿವೆ ಎರಡೆರಡು ಸೇನೆಗಳು, IRGC ಎಂದರೆ ಯಾರು? ಇರಾನ್ ಸೇನೆಗಿಂತ ಹೇಗೆ ಭಿನ್ನ?

ಮೊಜ್ತಾಬಾ ಅವರು ಹಿರಿಯ ಸಂಪ್ರದಾಯವಾದಿ ರಾಜಕಾರಣಿ ಮತ್ತು ಇರಾನ್​ನ ಮಾಜಿ ಸಂಸತ್ ಅಧ್ಯಕ್ಷ ಘೋಲಮ್-ಅಲಿ ಹದ್ದದ್-ಅಡೆಲ್ ಅವರ ಪುತ್ರಿ ಜಹ್ರಾ ಹದ್ದದ್-ಅಡೆಲ್ ಅವರನ್ನು ವಿವಾಹವಾದರು. ಈ ದಂಪತಿಗಳು 2004ರಲ್ಲಿ ವಿವಾಹವಾದರು. ಇರಾನ್ ಮೇಲೆ ಯುಎಸ್-ಇಸ್ರೇಲ್ ದಾಳಿಯ ಸಮಯದಲ್ಲಿ ಜಹ್ರಾ 2026ರಲ್ಲಿ ಕೊಲ್ಲಲ್ಪಟ್ಟರು. ಅವರಿಗೆ ಮೂರು ಮಕ್ಕಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?