AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಚೀನ ನಾಗರಿಕತೆಯಿಂದ ನಿಮಗೆ ಮರೆಯಲಾಗದ ಹೊಡೆತ ಕಾದಿದೆ; ಅಮೆರಿಕಕ್ಕೆ ಇರಾನ್ ತಿರುಗೇಟು

ಇಂದು ರಾತ್ರಿ ಇರಾನ್​ನ ನಾಗರಿಕತೆಯೇ ನಾಶವಾಗುತ್ತದೆ ಎಂದು ಅಮೆರಿಕ ಇರಾನ್​ಗೆ ಎಚ್ಚರಿಕೆ ನೀಡಿತ್ತು. ಅದರ ಬೆನ್ನಲ್ಲೇ ತಿರುಗೇಟು ನೀಡಿರುವ ಇರಾನ್ 'ನಾವು ಯಾವುದಕ್ಕೂ ಹಿಂಜರಿಯುವುದಿಲ್ಲ. ನಮ್ಮ ದಾಳಿಗಳನ್ನು ದ್ವಿಗುಣಗೊಳಿಸುತ್ತೇವೆ. ಇರಾನ್​ನ ಪ್ರಾಚೀನ ನಾಗರಿಕತೆಯಿಂದ ನೀವು ಮರೆಯಲಾಗದ ಹೊಡೆತ ಅನುಭವಿಸಲಿದ್ದೀರಿ'ಎಂದು ಹೇಳಿದೆ. ಟ್ರಂಪ್ ಇರಾನ್​ಗೆ ನೀಡಿರುವ ಗಡುವು ಮುಗಿಯಲು 9 ಗಂಟೆಗಳು ಮಾತ್ರ ಬಾಕಿ ಉಳಿದಿವೆ. ಹೀಗಾಗಿ, ಮುಂದೇನಾಗಬಹುದು ಎಂಬ ನಿರೀಕ್ಷೆ ಇನ್ನೂ ಹೆಚ್ಚಾಗಿದೆ.

ಪ್ರಾಚೀನ ನಾಗರಿಕತೆಯಿಂದ ನಿಮಗೆ ಮರೆಯಲಾಗದ ಹೊಡೆತ ಕಾದಿದೆ; ಅಮೆರಿಕಕ್ಕೆ ಇರಾನ್ ತಿರುಗೇಟು
Mojtaba KhamenieImage Credit source: x
ಸುಷ್ಮಾ ಚಕ್ರೆ
|

Updated on: Apr 07, 2026 | 8:33 PM

Share

ಟೆಹ್ರಾನ್, ಏಪ್ರಿಲ್ 7: ಇಂದು ರಾತ್ರಿ ಇರಾನ್​ನ ನಾಗರಿಕತೆ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ನೀಡಿದ ಸ್ವಲ್ಪ ಸಮಯದ ನಂತರ ಅದಕ್ಕೆ ಇರಾನ್ ಪ್ರತ್ಯುತ್ತರ ನೀಡಿದೆ. ನಾವು ನಿಮ್ಮ ಬೆದರಿಕೆಗೆ ಹೆದರುವುದಿಲ್ಲ, ನಮ್ಮ ದಾಳಿಗಳನ್ನು ದ್ವಿಗುಣಗೊಳಿಸುತ್ತೇವೆ, ನಾವೆಂದೂ ಹಿಂಜರಿಯುವುದಿಲ್ಲ ಎಂದು ಹೇಳಿದೆ. ಟ್ರಂಪ್ ಅವರ ಇತ್ತೀಚಿನ ಬೆದರಿಕೆಗಳ ನಂತರ ಎಲ್ಲಾ ರಾಜತಾಂತ್ರಿಕ ಮಾರ್ಗಗಳು ಮತ್ತು ಪರೋಕ್ಷ ಮಾತುಕತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಇರಾನ್ ಸ್ಪಷ್ಟಪಡಿಸಿದೆ

“ಅಮೆರಿಕದ ವಿರುದ್ಧ ಫತಾಹ್ ಮತ್ತು ಖೈಬರ್ ಶೇಕನ್ ಕ್ಷಿಪಣಿಗಳಿಗಾಗಿ ಹೊಸ ಉಡಾವಣಾ ವೇದಿಕೆಗಳೊಂದಿಗೆ ನಾವು ನಮ್ಮ ದಾಳಿಗಳನ್ನು ದ್ವಿಗುಣಗೊಳಿಸುತ್ತೇವೆ” ಎಂದು ಐಆರ್‌ಜಿಸಿ ಏರೋಸ್ಪೇಸ್ ಫೋರ್ಸ್ ಕಮಾಂಡರ್ ತಿಳಿಸಿದ್ದಾರೆ.

ಇದನ್ನೂ ಓದಿ: ಇಂದು ರಾತ್ರಿ ಇಡೀ ದೇಶವೇ ನಾಶವಾಗುತ್ತದೆ; ಗಡುವು ಸಮೀಪಿಸುತ್ತಿದ್ದಂತೆ ಇರಾನ್​ಗೆ ಟ್ರಂಪ್ ಬೆದರಿಕೆ

ದಕ್ಷಿಣ ಆಫ್ರಿಕಾದಲ್ಲಿರುವ ಇರಾನಿನ ರಾಯಭಾರ ಕಚೇರಿಯು ಎಕ್ಸ್​ನಲ್ಲಿ ಟ್ರಂಪ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, “ನೀವು ಮತ್ತು ನಿಮ್ಮ ಮಿತ್ರರಾಷ್ಟ್ರಗಳು ಇರಾನ್‌ನ ಪ್ರಾಚೀನ ನಾಗರಿಕತೆಯಿಂದ ಮರೆಯಲಾಗದ ಹೊಡೆತವನ್ನು ಅನುಭವಿಸುವಿರಿ” ಎಂದು ಹೇಳಿದೆ. ಫೆಬ್ರವರಿಯಲ್ಲಿ ಯುಎಸ್-ಇಸ್ರೇಲಿ ದಾಳಿಯ ಸಮಯದಲ್ಲಿ ಮಿನಾಬ್‌ನಲ್ಲಿ ಕೊಲ್ಲಲ್ಪಟ್ಟ ಮಗುವಿನ ದುಃಖಿತ ತಾಯಿಯ ಚಿತ್ರವನ್ನು ಸಹ ರಾಯಭಾರ ಕಚೇರಿ ಹಂಚಿಕೊಂಡಿದೆ. ಇದು ಅಯತೊಲ್ಲಾ ಅಲಿ ಖಮೇನಿಯವರ ಹತ್ಯೆಯ ನಂತರ ಮತ್ತು ಪ್ರಾಥಮಿಕ ಶಾಲೆಯ ಮೇಲೆ ಕ್ಷಿಪಣಿ ದಾಳಿಗಳನ್ನು ಗುರಿಯಾಗಿಸಿಕೊಂಡ ದಾಳಿಯಾಗಿತ್ತು. ಈ ದಾಳಿಯಲ್ಲಿ ಸುಮಾರು 170 ಶಾಲಾ ಹುಡುಗಿಯರು ಸಾವನ್ನಪ್ಪಿದ್ದರು. “ಈ ದುಃಖ, ಈ ಕೋಪ, ಈ ಮುಖವನ್ನು ನೆನಪಿಟ್ಟುಕೊಳ್ಳಿ. ನಾವು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ” ಎಂದು ರಾಯಭಾರ ಕಚೇರಿಯು ಎಕ್ಸ್​​ನಲ್ಲಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ: ಕದನವಿರಾಮಕ್ಕೆ ನೀಡಿದ್ದ ಗಡುವು ಮುಗಿವ ಮೊದಲೇ ಇರಾನ್​ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ

“ಅಮೆರಿಕನ್ ಭಯೋತ್ಪಾದಕ ಸೇನೆಯು ಕೆಂಪು ರೇಖೆಗಳನ್ನು ದಾಟಿದರೆ ನಮ್ಮ ಪ್ರತಿಕ್ರಿಯೆಯು ಬೇರೆಯದೇ ರೀತಿ ಇರುತ್ತದೆ. ನಾವು ನಾಗರಿಕ ಸೌಲಭ್ಯಗಳ ಮೇಲಿನ ಹೇಯ ಆಕ್ರಮಣಗಳ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಹಿಂಜರಿಯುವುದಿಲ್ಲ” ಎಂದು IRGC ತಿಳಿಸಿದೆ.

ಇಸ್ಲಾಮಿಕ್ ಗಣರಾಜ್ಯವು ನಿರ್ಣಾಯಕ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವುದನ್ನು ಒಳಗೊಂಡ ಒಪ್ಪಂದಕ್ಕೆ ಇರಾನ್ ಒಪ್ಪಿಕೊಳ್ಳಲು ನೀಡಿದ ಇತ್ತೀಚಿನ ಗಡುವನ್ನು ಇರಾನ್ ಪೂರೈಸದಿದ್ದರೆ “ಇಡೀ ನಾಗರಿಕತೆ ಇಂದು ರಾತ್ರಿ ನಾಶವಾಗುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ.

ಇರಾನ್‌ನಲ್ಲಿ ಎರಡು ಸೇತುವೆಗಳು ಮತ್ತು ರೈಲು ನಿಲ್ದಾಣದ ಮೇಲೆ ಅಮೆರಿಕದ ವಾಯುದಾಳಿಗಳು ನಡೆದಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ