ಇಸ್ರೇಲ್ ಪ್ರಧಾನಿ ನೆತನ್ಯಾಹು ಸತ್ತಿದ್ದಾರಾ, ಬದುಕಿದ್ದಾರಾ? ಅನುಮಾನ ಹುಟ್ಟಿಸಿದೆ ಆ 6 ಬೆರಳು!

ಅಮೆರಿಕದ ಜೊತೆ ಸೇರಿ ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು. ಇದಾದ ನಂತರ ಮುಯ್ಯಿಗೆ ಮುಯ್ಯಿ ಎಂಬಂತೆ ಇರಾನ್ ಕೂಡ ಕಂಡಲ್ಲೆಲ್ಲ ದಾಳಿ ನಡೆಸಿ ಸೇಡು ತೀರಿಸಿಕೊಳ್ಳುತ್ತಿದೆ. ಇರಾನ್ ನಡೆಸಿದ ದಾಳಿಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ? ಅಥವಾ ಜೀವಂತವಾಗಿದ್ದಾರಾ? ಎಂಬ ಅನುಮಾನ ಮೂಡಿದೆ. ಇದಕ್ಕೆ ಕಾರಣವಾಗಿರುವುದು ನೆತನ್ಯಾಹು ಅವರದ್ದು ಎನ್ನಲಾದ ಒಂದು ವಿಡಿಯೋ. ಆ ವಿಡಿಯೋದಲ್ಲಿ ಏನಿದೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಇಸ್ರೇಲ್ ಪ್ರಧಾನಿ ನೆತನ್ಯಾಹು ಸತ್ತಿದ್ದಾರಾ, ಬದುಕಿದ್ದಾರಾ? ಅನುಮಾನ ಹುಟ್ಟಿಸಿದೆ ಆ 6 ಬೆರಳು!
Netanyahu

Updated on: Mar 14, 2026 | 9:25 PM

ನವದೆಹಲಿ, ಮಾರ್ಚ್ 14: ಇರಾನ್- ಇಸ್ರೇಲ್ ನಡುವೆ ದಾಳಿ-ಪ್ರತಿದಾಳಿಗಳು ನಡೆಯುತ್ತಲೇ ಇವೆ. ನಿನ್ನೆ (ಮಾರ್ಚ್ 13) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಮಾತನಾಡಿರುವ ವಿಡಿಯೋವೊಂದು ಅವರು ಸುರಕ್ಷಿತವಾಗಿದ್ದಾರಾ ಎಂಬ ಬಗ್ಗೆ ಅನುಮಾನ ಹುಟ್ಟುಹಾಕಿದೆ. ನೆತನ್ಯಾಹು ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಲಾಗಿತ್ತು. ಹಲವು ದಿನಗಳಿಂದ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಇದ್ದಕ್ಕಿದ್ದಂತೆ ವಿಡಿಯೋ ಸಂದೇಶ ಹರಿಬಿಟ್ಟಿದ್ದು ಒಂದು ಅನುಮಾನವಾದರೆ ಆ ವಿಡಿಯೋದಲ್ಲಿ ನೆತನ್ಯಾಹು ಕೈಯಲ್ಲಿ 6 ಬೆರಳಿರುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಡಿಯೋ ಎಐ (ಕೃತಕ ಬುದ್ಧಿಮತ್ತೆ)ಯದ್ದು ಎಂಬ ಅನುಮಾನವನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

ಆ ವಿಡಿಯೋದಲ್ಲಿ ನೆತನ್ಯಾಹು ಅವರ ಒಂದು ಕೈಯಲ್ಲಿ 6 ಬೆರಳುಗಳು ಇರುವಂತೆ ಕಾಣುತ್ತಿದೆ. ಹೀಗಾಗಿ, ಇದು ಎಐನಿಂದ ಎಡಿಟ್ ಮಾಡಲಾದ ವಿಡಿಯೋ ಎಂಬ ಅನುಮಾನವನ್ನು ಹುಟ್ಟುಹಾಕಿತು. ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ನೆತನ್ಯಾಹು ಶುಕ್ರವಾರ ವಿಡಿಯೋವನ್ನು ಹಂಚಿಕೊಂಡಿದ್ದರು. ಇಸ್ರೇಲ್ ಮತ್ತು ಇರಾನ್ ಯುದ್ಧದ ಕುರಿತು ಅವರು ಹೇಳಿಕೆಗಳನ್ನು ನೀಡಿದ್ದರು. ಫೆಬ್ರವರಿ 28ರಂದು ಸಂಘರ್ಷದ ಮೊದಲ ದಿನ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲೊ ಅಲಿ ಖಮೇನಿಯನ್ನು ದಾಳಿಯಲ್ಲಿ ಕೊಲ್ಲಲಾಗಿತ್ತು.


ಇದನ್ನೂ ಓದಿ: ಇರಾನ್-ಇಸ್ರೇಲ್ ಯುದ್ಧ ಯಾವಾಗ ಕೊನೆಗೊಳ್ಳುತ್ತೆ? ಟ್ರಂಪ್ ಹೇಳಿದ್ದೇನು?

ನೆತನ್ಯಾಹು ಅವರ ವಿಡಿಯೋದಲ್ಲಿ ಇಸ್ರೇಲ್ ಪ್ರಧಾನಿಯ ಬಲಗೈಯಲ್ಲಿ 6 ಬೆರಳುಗಳನ್ನು ಹೊಂದಿರುವಂತೆ ತೋರುತ್ತಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ‘ಕ್ಲಾಸಿಕ್ AI ಫಿಂಗರ್ ಗ್ಲಿಚ್’, ‘ಅವರ ಕೈಯನ್ನು ಹತ್ತಿರದಿಂದ ನೋಡಿ’ ಎಂಬಂತಹ ಕ್ಯಾಪ್ಷನ್ ಹಾಕಿರುವ ನೆಟ್ಟಿಗರು ಅದು AI ಎಡಿಟೆಡ್ ವಿಡಿಯೋ ಎಂಬ ಅನುಮಾನ ಹೊರಹಾಕಿದ್ದಾರೆ. ಇನ್ನೂ ಕೆಲವರು ಈ ಯುದ್ಧದಲ್ಲಿ ನೆತನ್ಯಾಹು ಸತ್ತಿದ್ದಾರೆ ಎಂದು ಕೂಡ ಕಮೆಂಟ್ ಹಾಕಿದ್ದಾರೆ.


ಇನ್ನು ಕೆಲವರು ಇದು ಆಪ್ಟಿಕಲ್ ಭ್ರಮೆ ಎಂದು ಕಮೆಂಟ್ ಹಾಕುವ ಮೂಲಕ ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ. ಇನ್ನೂ ಸೋಷಿಯಲ್ ಮೀಡಿಯಾದಲ್ಲಿ ನೆತನ್ಯಾಹು ಅವರ ಈ ವಿಡಿಯೋ ಬಗ್ಗೆ ಚರ್ಚೆಗಳು ಮುಂದುವರೆದಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us