ಬಾಂಗ್ಲಾದೇಶದ ಪ್ರಸ್ತುತ ಸ್ಥಿತಿ, ಚಿನ್ಮಯ್ ದಾಸ್ ಬಂಧನ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಇಸ್ಕಾನ್

ಬಾಂಗ್ಲಾದೇಶದ ವಿವಿಧ ಪ್ರದೇಶಗಳಲ್ಲಿ ಸಾತನವಾದಿಗಳ ವಿರುದ್ಧದ ಹಿಂಸಾಚಾರ ಮತ್ತು ದಾಳಿಗಳನ್ನು ನಾವು ಖಂಡಿಸುತ್ತೇವೆ, ಸನಾತನ ಸಮುದಾಯಕ್ಕೆ ಶಾಂತಿಯುತವಾಗಿ ಬದುಕುವಂತೆ ಅನುವು ಮಾಡಿಕೊಡುವಂತೆ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ ಎಂದು ಇಸ್ಕಾನ್ ಹೇಳಿಕೆ ಬಿಡುಗಡೆ ಮಾಡಿದೆ. ಬಾಂಗ್ಲಾದೇಶ ಸಮ್ಮಿಲಿತ್‌ ಸನಾತನಿ ಜಾಗರಣ ಜೋತೆ ಎಂಬ ಹಿಂದೂ ಸಂಘಟನೆಯ ವಕ್ತಾರ ಚಿನ್ಮಯ್ ಕೃಷ್ಣದಾಸ್‌ ಬ್ರಹ್ಮಚಾರಿ ರಾಷ್ಟ್ರದ ಅಲ್ಪಸಂಖ್ಯಾತ ಗುಂಪುಗಳ ರಕ್ಷಣೆಗಾಗಿ ಧ್ವನಿ ಎತ್ತುತ್ತಿದ್ದಾರೆ.

ಬಾಂಗ್ಲಾದೇಶದ ಪ್ರಸ್ತುತ ಸ್ಥಿತಿ, ಚಿನ್ಮಯ್ ದಾಸ್ ಬಂಧನ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಇಸ್ಕಾನ್
ಬಂಧನImage Credit source: Hindustan Times
Follow us
ನಯನಾ ರಾಜೀವ್
|

Updated on:Nov 28, 2024 | 10:28 AM

ಬಾಂಗ್ಲಾದೇಶದ ವಿವಿಧ ಪ್ರದೇಶಗಳಲ್ಲಿ ಸಾತನವಾದಿಗಳ ವಿರುದ್ಧದ ಹಿಂಸಾಚಾರ ಮತ್ತು ದಾಳಿಗಳನ್ನು ನಾವು ಖಂಡಿಸುತ್ತೇವೆ, ಸನಾತನ ಸಮುದಾಯಕ್ಕೆ ಶಾಂತಿಯುತವಾಗಿ ಬದುಕುವಂತೆ ಅನುವು ಮಾಡಿಕೊಡುವಂತೆ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ ಎಂದು ಇಸ್ಕಾನ್ ಹೇಳಿಕೆ ಬಿಡುಗಡೆ ಮಾಡಿದೆ. ಬಾಂಗ್ಲಾದೇಶ ಸಮ್ಮಿಲಿತ್‌ ಸನಾತನಿ ಜಾಗರಣ ಜೋತೆ ಎಂಬ ಹಿಂದೂ ಸಂಘಟನೆಯ ವಕ್ತಾರ ಚಿನ್ಮಯ್ ಕೃಷ್ಣದಾಸ್‌ ಬ್ರಹ್ಮಚಾರಿ ರಾಷ್ಟ್ರದ ಅಲ್ಪಸಂಖ್ಯಾತ ಗುಂಪುಗಳ ರಕ್ಷಣೆಗಾಗಿ ಧ್ವನಿ ಎತ್ತುತ್ತಿದ್ದಾರೆ.

ವಾಕ್ ಸ್ವಾತಂತ್ರ್ಯದ ಹಕ್ಕನ್ನು ಎತ್ತಿಹಿಡಿಯುವುದು ಮತ್ತು ಈ ಹಕ್ಕನ್ನು ರಕ್ಷಿಸಲು ಇತರರನ್ನು ಪ್ರೋತ್ಸಾಹಿಸುವ ಅವರ ಪ್ರಯತ್ನಗಳನ್ನು ಬೆಂಬಲಿಸುವುದು ಅತ್ಯಗತ್ಯ. ಅವರಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ. ಸನಾತನ ಸಮುದಾಯದ ಮೇಲಿನ ದಾಳಿಗಳಿಗೆ ಕಾರಣರಾದವರನ್ನು ಗುರುತಿಸಿ ಶಿಕ್ಷೆ ಕೊಡಿಸಿ, ಚಿನ್ಮಯ್ ಕೃಷ್ಣ ದಾಸ್ ಮತ್ತು ಇತರ ಸನಾತನಿಗಳ ನಾಗರಿಕ ಹಕ್ಕುಗಳನ್ನು ರಕ್ಷಿಸಿ, ದೇಶದ ಎಲ್ಲಾ ಸಮುದಾಯಗಳ ನಡುವೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ತಕ್ಷಣದ ಮತ್ತು ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಿ ಎಂದು ಒತ್ತಾಯಿಸಿದ್ದಾರೆ.

ದೇಶದ್ರೋಹದ ಆರೋಪ ಎದುರಿಸುತ್ತಿರುವ ‘ಸಮ್ಮಿಲಿತ್‌ ಸನಾತನಿ ಜಾಗರಣ ಜೋತೆ’ ಎಂಬ ಹಿಂದೂ ಸಂಘಟನೆಯ ವಕ್ತಾರ ಚಿನ್ಮಯ್ ಕೃಷ್ಣದಾಸ್‌ ಬ್ರಹ್ಮಚಾರಿ ಅವರ ಬಂಧನದ ವೇಳೆ ನಡೆದ ಘರ್ಷಣೆಯಲ್ಲಿ‌ ಹತ್ಯೆಯಾದ ವಕೀಲ ಸೈಫುಲ್‌ ಇಸ್ಲಾಂ ಅವರ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಓದಿ: ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನ ವಿರೋಧಿಸಿ ಪ್ರತಿಭಟನೆ; 30 ಜನರ ಬಂಧನ

ನ್ಯಾಯಾಲಯದ ಸಂಕೀರ್ಣದಲ್ಲಿನ ಮಸೀದಿ ಕಟ್ಟಡದ ಎರಡನೇ ಮಹಡಿಯಲ್ಲಿ ಅಳವಡಿಸಿದ್ದ ಕಿಟಕಿ ಗಾಜುಗಳನ್ನು ಒಡೆದ, ವಾಹನಗಳನ್ನು ಜಖಂಗೊಳಿಸಿದ, ವಕೀಲರ ಕೊಠಡಿಗಳ ಒಳಗೆ ನುಗ್ಗಿದ ಆರೋಪಕ್ಕೆ ಸಂಬಂಧಿಸಿ 21 ಮಂದಿಯನ್ನು ಬಂಧಿಸಲಾಗಿದೆ. ಭದ್ರತಾ ಪಡೆಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಾಗೂ ಅವರ ಮೇಲೆ ದಾಳಿ ನಡೆಸಿದ್ದಕ್ಕಾಗಿ ಇವರನ್ನು ಬಂಧಿಸಲಾಗಿದೆ’ ಎಂದು ಬಾಂಗ್ಲಾದ ‘ಬಿಡಿನ್ಯೂಸ್‌24.ಕಾಂ’ ವರದಿ ಮಾಡಿದೆ.

21 ಮಂದಿ ಬಂಧಿತರಲ್ಲಿ ಆರು ಮಂದಿ, ಮಾಜಿ ಪ್ರಧಾನಿ ಶೇಕ್‌ ಹಸೀನಾ ಅವರ ‘ಅವಾಮಿ ಲೀಗ್‌’ ಹಾಗೂ ಇದರ ವಿದ್ಯಾರ್ಥಿ ಘಟಕದ ಕಾರ್ಯಕರ್ತರು. ವಶಕ್ಕೆ ಪಡೆದುಕೊಳ್ಳುವ ಸಂದರ್ಭದಲ್ಲಿ ಇವರ ಬಳಿ ಪೆಟ್ರೋಲ್‌ ಬಾಂಬ್‌ಗಳು ದೊರೆತವು’ ಎಂದು ಸರ್ಕಾರ ಹೇಳಿದೆ.

ಚಿನ್ಮಯ್ ಕೃಷ್ಣದಾಸ್‌ ಅವರ ಬಂಧನವನ್ನು ಕೋಲ್ಕತ್ತದಲ್ಲಿನ ಇಸ್ಕಾನ್‌ ಹಾಗೂ ಬಾಂಗ್ಲಾದೇಶದ ಇಸ್ಕಾನ್‌ ಖಂಡಿಸಿವೆ. ಚಿನ್ಮಯಿ ಅವರು ಬಾಂಗ್ಲಾದೇಶದಲ್ಲಿನ ಇಸ್ಕಾನ್‌ನ ಸದಸ್ಯರಾಗಿದ್ದರು. ಆದರೆ, ಕೆಲವು ತಿಂಗಳ ಹಿಂದೆ ಅವರನ್ನು ಇಸ್ಕಾನ್‌ನಿಂದ ಹೊರದಬ್ಬಲಾಗಿತ್ತು. ಬಾಂಗ್ಲಾದೇಶವು ನಮ್ಮ ಜನ್ಮಸ್ಥಳ ಮತ್ತು ನಮ್ಮ ಪೂರ್ವಜರ ಸ್ಥಳ. ಆದ್ದರಿಂದ, ಸನಾತನಿಗಳು ಶಾಂತಿಯುತವಾಗಿ ಸಹಬಾಳ್ವೆ ನಡೆಸುವಂತೆ ಸರ್ಕಾರವು ಕ್ರಮ ಕೈಗೊಳ್ಳಬೇಕು’ ಎಂದು ಬಾಂಗ್ಲಾದ ಇಸ್ಕಾನ್‌ ಒತ್ತಾಯಿಸಿದೆ.

ಇಸ್ಕಾನ್‌ ಹಾಗೂ ರಾಮಕೃಷ್ಣ ಮಿಷನ್‌ನಂಥ ಹಿಂದೂ ಧಾರ್ಮಿಕ ಸಂಘಟನೆಗಳ ವಿರುದ್ಧ ಮುಸ್ಲಿಮರು ಕಳೆದ ಮೂರು ತಿಂಗಳಿನಿಂದ ಬೆದರಿಕೆ ಒಡ್ಡುತ್ತಿದ್ದಾರೆ. ಚಿನ್ಮಯ್ ಅವರ ಬಂಧನವು ಇತ್ತೀಚಿನ ಉದಾಹರಣೆ ಯಾಗಿದೆ. ಇಂಥ ಭಯದ ಸನ್ನಿವೇಶದಲ್ಲಿ ಭಾರತದ ವಿದೇಶಾಂಗ ಸಚಿವಾಲಯ ಹಾಗೂ ಕೇಂದ್ರ ಗೃಹ ಸಚಿವಾಲಯವು ಬಾಂಗ್ಲಾದ ಹಿಂದೂಗಳ ಮೇಲೆ ದಾಳಿಗಳಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋಲ್ಕತ್ತದಲ್ಲಿನ ಇಸ್ಕಾನ್‌ ಹೇಳಿದೆ. ವಿಶ್ವಸಂಸ್ಥೆ ಮಧ್ಯೆಪ್ರವೇಶಿಸಬೇಕು ಎಂದು ಆಗ್ರಹಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:37 am, Thu, 28 November 24

‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?