AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಜರ್​ ಲಸಿಕೆ ಪಡೆದ 12,400 ಜನರಿಗೆ ಕೊರೊನಾ!

ಇಸ್ರೇಲ್​ ಆರೋಗ್ಯ ಸಚಿವಾಲಯ ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದೆ. ಅವರು ಹೇಳುವ ಪ್ರಕಾರ ಇಸ್ರೇಲ್​ನಲ್ಲಿ 1,89,000 ಜನರಿಗೆ ಕೊರೊನಾ ವೈರಸ್​ ದೃಢವಾಗಿದೆ. ಇದರಲ್ಲಿ ಶೇ. 6.6 ಜನರಿಗೆ ಕೊರೊನಾ ಲಸಿಕೆ ನೀಡಲಾಗಿತ್ತಂತೆ.

ಫೈಜರ್​ ಲಸಿಕೆ ಪಡೆದ 12,400 ಜನರಿಗೆ ಕೊರೊನಾ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 21, 2021 | 6:39 PM

Share

ಇಸ್ರೇಲ್​ನಲ್ಲಿ ಫೈಜರ್ ಲಸಿಕೆ ಪಡೆದ ನಂತರವೂ 12,400 ಜನರಿಗೆ ಕೊರೊನಾ ವೈರಸ್​ ಸೋಂಕು ಕಾಣಿಸಿಕೊಂಡಿದೆ ಎಂದು ಸರ್ಕಾರ ಹೇಳಿದೆ. ವಿಚಿತ್ರ ಎಂದರೆ, 12,400 ಜನರ ಪೈಕಿ 69 ಮಂದಿ ಎರಡನೇ ಬಾರಿಗೆ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು.

ಇಸ್ರೇಲ್​ ಆರೋಗ್ಯ ಸಚಿವಾಲಯ ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದೆ. ಇಸ್ರೇಲ್​ನಲ್ಲಿ ಈವರೆಗೆ ಒಟ್ಟು 1,89,000 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದರಲ್ಲಿ ಶೇ  6.6 ಜನರಿಗೆ ಕೊರೊನಾ ಲಸಿಕೆ ನೀಡಲಾಗಿತ್ತು.

ಕೊರೊನಾ ಲಸಿಕೆ ನಾವು ಅಂದುಕೊಂಡಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ ಡಿಸೆಂಬರ್​ 19ರಿಂದ ಇಸ್ರೇಲ್​ ಕೊರೊನಾ ಲಸಿಕೆ ನೀಡಲು ಆರಂಭಿಸಿತ್ತು. ವಯಸ್ಸಾದವರಿಗೆ ಮೊದಲ ಆದ್ಯತೆ ನೀಡುವ ಗುರಿ ಸರ್ಕಾರದ್ದಾಗಿದೆ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ 25ರಷ್ಟು ಅಂದರೆ ಕಾಲು ಭಾಗದಷ್ಟು ಜನರಿಗೆ ಔಷಧ ನೀಡಲಾಗಿದೆ. ಈ ಪೈಕಿ ಶೇ 3.5 ಜನರಿಗೆ ಎರಡನೇ ಬಾರಿ ಕೊರೊನಾ ಔಷಧ ನೀಡಲಾಗಿದೆ.

ದೇಶದಲ್ಲಿ ಮೂರನೇ ಬಾರಿಗೆ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಆದಾಗ್ಯೂ ಕೊರೊನಾ ವೈರಸ್​ ಪ್ರಕರಣ ಹೆಚ್ಚುತ್ತಲೇ ಇದೆ. ಈವರೆಗೆ ಕೊರೊನಾದಿಂದ 4,005 ಜನರು ಮೃತಪಟ್ಟಿದ್ದಾರೆ.

ಕೊರೊನಾ ಕಾಟ ನಿಯಂತ್ರಣಕ್ಕೆ ಬಂತಾ? ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 15,223 ಹೊಸ ಪ್ರಕರಣ, 151 ಮಂದಿ ಸಾವು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ