AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಯಾದಲ್ಲಿರುವ ಇರಾನ್ ದೂತಾವಾಸ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 11 ಮಂದಿ ಸಾವು

ಸಿರಿಯಾದಲ್ಲಿರುವ ತನ್ನ ಕಾನ್ಸುಲೇಟ್ ಮೇಲೆ ದಾಳಿ ಇಸ್ರೇಲ್ ಮಾಡಿದೆ ಎಂದು ಇರಾನ್ ಸೋಮವಾರ ಹೇಳಿದೆ. ದಾಳಿಯಲ್ಲಿ ಸಾವನ್ನಪ್ಪಿದ 11 ಮಂದಿಯಲ್ಲಿ ಇಬ್ಬರು ಉನ್ನತ ಶ್ರೇಣಿಯ ಮಿಲಿಟರಿ ಜನರಲ್‌ಗಳು ಇದ್ದರು. ದಾಳಿಯಲ್ಲಿ ಕಾನ್ಸುಲೇಟ್‌ನ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.

ಸಿರಿಯಾದಲ್ಲಿರುವ ಇರಾನ್ ದೂತಾವಾಸ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 11 ಮಂದಿ ಸಾವು
ಸಿರಿಯಾದಲ್ಲಿರುವ ಇರಾನ್ ದೂತಾವಾಸ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 11 ಮಂದಿ ಸಾವುImage Credit source: AFP
Ganapathi Sharma
|

Updated on:Apr 02, 2024 | 10:08 AM

Share

ಡಮಾಸ್ಕಸ್, ಏಪ್ರಿಲ್ 2: ಸಿರಿಯಾದಲ್ಲಿರುವ (Syria) ಇರಾನ್ ದೂತಾವಾಸ ಕಚೇರಿ (Iran consulate) ಮೇಲೆ ಇಸ್ರೇಲ್ ಸೋಮವಾರ ನಡೆಸಿದ ವೈಮಾನಿಕ ದಾಳಿಯಲ್ಲಿ (Airstrike) ಕನಿಷ್ಠ 11 ಜನರು ಮೃತಪಟ್ಟಿದ್ದಾರೆ. ಈ ಕೃತ್ಯವು ಸಿರಿಯಾದಲ್ಲಿರುವ ಇರಾನ್‌ನ ಮಿಲಿಟರಿ ಅಧಿಕಾರಿಗಳನ್ನು ಗುರಿಯಾಗಿಸುವ ಸಂಬಂಧ ಇಸ್ರೇಲ್‌ನಿಂದ ಸ್ಪಷ್ಟ ಸಂದೇಶವಾಗಿದೆ ಎನ್ನಲಾಗಿದೆ. ಇರಾನ್ ಮತ್ತು ಆ ದೇಶದ ಮಿಲಿಟರಿ ಅಧಿಕಾರಿಗಳು ಇಸ್ರೇಲ್ ವಿರುದ್ಧ ಗಾಜಾದಲ್ಲಿ ಮತ್ತು ಲೆಬನಾನ್ ಗಡಿಯಲ್ಲಿ ಹೋರಾಡುತ್ತಿರುವ ಉಗ್ರಗಾಮಿ ಗುಂಪುಗಳನ್ನು ಬೆಂಬಲಿಸುವುದಕ್ಕೆ ಇಸ್ರೇಲ್ ಆಕ್ಷೇಪ ವ್ಯಕ್ತಪಡಿಸುತ್ತಿದೆ.

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಇನ್ನೊಬ್ಬ ಉನ್ನತ ಶ್ರೇಣಿಯ ಅಧಿಕಾರಿ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ಹಾದಿ ಹಾಜಿ ರಹೀಮಿ ಹಾಗೂ ಏಳು ಮಂದಿ ಸದಸ್ಯರು ಕೂಡ ಹತ್ಯೆಯಾದವರಲ್ಲಿ ಸೇರಿದ್ದಾರೆ.

ದಾಳಿಯ ಬಗ್ಗೆ ಇಸ್ರೇಲ್ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ದಾಳಿಗೆ ಕಠಿಣ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಹೇಳಿದೆ. ಇದು ಇಸ್ರೇಲ್ ಮತ್ತು ಇರಾನ್‌ನ ಮಿತ್ರರಾಷ್ಟ್ರಗಳ ನಡುವೆ ಇನ್ನೂ ಹೆಚ್ಚಿನ ಹಿಂಸಾತ್ಮಕ ದಾಳಿಗಳು ನಡೆಯುವ ಮುನ್ಸೂಚನೆ ನೀಡಿವೆ.

ಮೃತರಲ್ಲಿ ಎಂಟು ಇರಾನಿಯನ್ನರು, ಇಬ್ಬರು ಸಿರಿಯನ್ನರು ಮತ್ತು ಒಬ್ಬ ಲೆಬನೀಸ್ ಸೇರಿದ್ದಾರೆ. ಅವರೆಲ್ಲರೂ ಹೋರಾಟಗಾರರು. ನಾಗರಿಕರು ಯಾರೂ ಮೃತಪಟ್ಟಿಲ್ಲ ಎಂದು ಸಿರಿಯಾದಲ್ಲಿನ ಮೂಲಗಳು ತಿಳಿಸಿವೆ.

ಅವಶೇಷಗಳನ್ನು ತೆರವುಗೊಳಿಸಲು ಮತ್ತು ಸುಟ್ಟ ವಾಹನಗಳನ್ನು ರಸ್ತೆಯಿಂದ ಹೊರತೆಗೆಯಲು ಕಾರ್ಯಾಚರಣೆ ಪ್ರಗತಿಯಲ್ಲಿದೆ.

ದಾಳಿಯು ಸಂಪೂರ್ಣ ಕಟ್ಟಡವನ್ನು ನಾಶಪಡಿಸಿದೆ. ಒಳಗಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಗಾಯಗೊಂಡರು ಮತ್ತು ಮೃತದೇಹಗಳನ್ನು ಹೊರತೆಗೆಯಲು, ಅವಶೇಷಗಳಡಿಯಿಂದ ಗಾಯಗೊಂಡವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂದು ಸಿರಿಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

ಸಿರಿಯಾದ ವಿದೇಶಾಂಗ ಸಚಿವ ಫೈಸಲ್ ಮೆಕ್ದಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿ, ದಾಳಿಯನ್ನು ಖಂಡಿಸಿದರು. ಇದು ಘೋರ ಭಯೋತ್ಪಾದಕ ದಾಳಿ. ಹಲವಾರು ಮುಗ್ಧ ಜನರನ್ನು ಕೊಲ್ಲಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಐವರ ಸಾವು

ದಾಳಿ ಸಂಬಂಧಿತ ಇನ್ನಷ್ಟು ವಿವರ

  • ಸಿರಿಯಾದಲ್ಲಿ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಜನರಲ್ ಮೊಹಮ್ಮದ್ ರೆಜಾ ಜಹೇದಿ ಹತ್ಯೆಯಾಗಿದ್ದಾರೆ. ಅವರು 2016 ರವರೆಗೆ ಲೆಬನಾನ್ ಮತ್ತು ಸಿರಿಯಾದಲ್ಲಿ ಗಣ್ಯ ಕುಡ್ಸ್ ಫೋರ್ಸ್ ಅನ್ನು ಮುನ್ನಡೆಸಿದ್ದರು. ಅವರ ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಕೂಡ ಸಾವನ್ನಪ್ಪಿದ್ದಾರೆ.
  • ದಾಳಿಯಲ್ಲಿ ಇರಾನ್‌ನ ಒಟ್ಟು 5 ಸೇನಾ ಅಧಿಕಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ.
  • ಸೇನಾ ಅಧಿಕಾರಿಗಳ ಹೊರತಾಗಿ, ಹುಸೇನ್ ಯೂಸೆಫ್ ಎಂದು ಗುರುತಿಸಲಾದ ಹಿಜ್ಬುಲ್ಲಾದ ಸದಸ್ಯ ಕೂಡ ವೈಮಾನಿಕ ದಾಳಿಯಲ್ಲಿ ಅಸುನೀಗಿದ್ದಾರೆ.
  • ಇನ್ನೂ ಹೆಚ್ಚಿನವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಶವಗಳಿಗಾಗಿ ಶೋಧ ನಡೆಯುತ್ತಿದೆ. ಅವಶೇಷಗಳನ್ನು ತೆರವುಗೊಳಿಸಿದ ನಂತರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
  • ದಾಳಿಯಲ್ಲಿ ಕಾನ್ಸುಲೇಟ್‌ನ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:05 am, Tue, 2 April 24

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ