AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್, ಲೆಬನಾನ್ 10 ದಿನಗಳ ಕದನವಿರಾಮಕ್ಕೆ ಒಪ್ಪಿಕೊಂಡಿವೆ; ಟ್ರಂಪ್ ಘೋಷಣೆ

ಇಸ್ರೇಲ್ ಮತ್ತು ಲೆಬನಾನ್ ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಉನ್ನತ ಮಟ್ಟದ ಚರ್ಚೆಗಳ ನಂತರ ಇಸ್ರೇಲ್ ಮತ್ತು ಲೆಬನಾನ್ 10 ದಿನಗಳ ಕದನ ವಿರಾಮವನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅಮೆರಿಕ ಮತ್ತು ಇರಾನ್ ತಾತ್ಕಾಲಿಕ ಒಪ್ಪಂದಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಇದರಿಂದಾಗಿ ಮಧ್ಯ ಪ್ರಾಚ್ಯ ಕೊಂಚ ತಣ್ಣಗಾದಂತಾಗಿದೆ.

ಇಸ್ರೇಲ್, ಲೆಬನಾನ್ 10 ದಿನಗಳ ಕದನವಿರಾಮಕ್ಕೆ ಒಪ್ಪಿಕೊಂಡಿವೆ; ಟ್ರಂಪ್ ಘೋಷಣೆ
Donald Trump Image Credit source: AP
ಸುಷ್ಮಾ ಚಕ್ರೆ
|

Updated on: Apr 16, 2026 | 10:50 PM

Share

ವಾಷಿಂಗ್ಟನ್, ಏಪ್ರಿಲ್ 16: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಸ್ರೇಲ್ ಮತ್ತು ಲೆಬನಾನ್ 10 ದಿನಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಿದ್ದಾರೆ. ಶಾಶ್ವತ ಶಾಂತಿಯತ್ತ ಸಾಗುವ ಪ್ರಯತ್ನದಲ್ಲಿ ಎರಡೂ ಕಡೆಯವರು ಯುದ್ಧವನ್ನು ನಿಲ್ಲಿಸಲು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಪ್ರಪಂಚದಾದ್ಯಂತ 9 ಯುದ್ಧಗಳನ್ನು ಬಗೆಹರಿಸುವುದು ನನಗೆ ದೊರೆತ ದೊಡ್ಡ ಗೌರವವಾಗಿದೆ. ಇದು ನನ್ನ 10ನೇ ಯುದ್ಧ ನಿಲ್ಲಿಸುವ ಪ್ರಯತ್ನವಾಗಿದೆ!” ಎಂದು ಟ್ರಂಪ್ ತಮ್ಮ ಬೆನ್ನು ತಾವೇ ತಟ್ಟಿಕೊಂಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಟ್ರೂತ್​​ನ ಪೋಸ್ಟ್‌ನಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಅತ್ಯುತ್ತಮ ಮಾತುಕತೆ ನಡೆಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಶಾಂತಿಯತ್ತ ಸಾಗುವ ಪ್ರಯತ್ನದಲ್ಲಿ ಇಬ್ಬರೂ ನಾಯಕರು ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ಟ್ರಂಪ್ 40 ನಿಮಿಷ ಫೋನ್ ಸಂಭಾಷಣೆ; ಹಾರ್ಮುಜ್ ಕುರಿತು ಚರ್ಚೆ

ಮೂರು ದಶಕಗಳಲ್ಲಿ ಮೊದಲ ಬಾರಿಗೆ ಎರಡೂ ದೇಶಗಳು ವಾಷಿಂಗ್ಟನ್ ಡಿಸಿಯಲ್ಲಿ ಮಾತುಕತೆ ನಡೆಸಿವೆ. ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಸೇರಿದಂತೆ ಅಮೆರಿಕದ ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಟ್ರಂಪ್ ಮಾಹಿತಿ ನೀಡಿದ್ದಾರೆ. ಈ ಪ್ರದೇಶದಲ್ಲಿ ದೀರ್ಘಕಾಲೀನ ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಎರಡೂ ರಾಷ್ಟ್ರಗಳೊಂದಿಗೆ ನಿಕಟವಾಗಿ ಕೆಲಸ ಮಾಡುವಂತೆ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮತ್ತು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.

“ಲೆಬನಾನ್‌ನ ಅಧ್ಯಕ್ಷ ಜೋಸೆಫ್ ಔನ್ ಮತ್ತು ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ನಾನು ಅತ್ಯುತ್ತಮ ಮಾತುಕತೆ ನಡೆಸಿದ್ದೇನೆ. ಈ ಇಬ್ಬರು ನಾಯಕರು ತಮ್ಮ ದೇಶಗಳ ನಡುವೆ ಶಾಂತಿಯನ್ನು ಸಾಧಿಸಲು ಸಂಜೆ 5 ಗಂಟೆಗೆ ಔಪಚಾರಿಕವಾಗಿ 10 ದಿನಗಳ ಕದನವಿರಾಮಕ್ಕೆ ಒಪ್ಪಿಕೊಂಡಿದ್ದಾರೆ. ಮಂಗಳವಾರ ಎರಡೂ ದೇಶಗಳು 34 ವರ್ಷಗಳಲ್ಲಿ ಮೊದಲ ಬಾರಿಗೆ ವಾಷಿಂಗ್ಟನ್ ಡಿಸಿಯಲ್ಲಿ ನಮ್ಮ ಗ್ರೇಟ್ ಸೆಕ್ರೆಟರಿ ಆಫ್ ಸ್ಟೇಟ್ ಮಾರ್ಕೊ ರುಬಿಯೊ ಅವರೊಂದಿಗೆ ಭೇಟಿಯಾದವು” ಎಂದು ಟ್ರಂಪ್ ಬರೆದಿದ್ದಾರೆ.

ಇದನ್ನೂ ಓದಿ: ಲೆಬನಾನ್‌ನೊಂದಿಗೆ ಶೀಘ್ರದಲ್ಲೇ ಇಸ್ರೇಲ್ ನೇರ ಮಾತುಕತೆ; ನೆತನ್ಯಾಹು ಘೋಷಣೆ

1983ರ ನಂತರ ಉಭಯ ದೇಶಗಳ ನಡುವಿನ ಮೊದಲ ಅರ್ಥಪೂರ್ಣ ಮಾತುಕತೆ ಎಂದು ಅವರು ವಿವರಿಸಿದ ಈ ಮಾತುಕತೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಅವರನ್ನು ಶ್ವೇತಭವನಕ್ಕೆ ಆಹ್ವಾನಿಸುವುದಾಗಿ ಟ್ರಂಪ್ ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎರಡೂ ಕಡೆಯವರು ಶಾಂತಿ ಸಾಧಿಸಲು ಉತ್ಸುಕರಾಗಿದ್ದಾರೆ ಎಂಬ ವಿಶ್ವಾಸವನ್ನು ಟ್ರಂಪ್ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us