ಗಾಜಾದಲ್ಲಿ ಹಮಾಸ್​ನ ಅಡಗುತಾಣಗಳ ಮೇಲೆ ದಾಳಿ ನಡೆಸಿ ಒತ್ತೆಯಾಳುಗಳನ್ನು ರಕ್ಷಿಸಿದ ಇಸ್ರೇಲ್ ಸೈನಿಕರು

ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. 250ಕ್ಕೂ ಹೆಚ್ಚಿ ಇಸ್ರೇಲಿ ಜನರನ್ನು ಹಮಾಸ್​ ಉಗ್ರರು ಒತ್ತೆಯಾಳಾಗಿರಿಸಿಕೊಂಡಿದ್ದರು. ಒಂದೊಮ್ಮೆ ಗಾಜಾದ ಮೇಲೆ ದಾಳಿ ನಡೆಸಿದರೆ ನಾವು ಒಬ್ಬೊಬ್ಬರನ್ನೇ ಕೊಲ್ಲುತ್ತೇವೆ ಎಂದು ಉಗ್ರರು ಬೆದರಿಕೆ ಹಾಕುತ್ತಿದ್ದರು. ಇಸ್ರೇಲ್ ನಿರಂತರವಾಗಿ ಗಾಜಾದಲ್ಲಿ ಹಮಾಸ್ ಸ್ಥಾನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಹಮಾಸ್ ಉಗ್ರರ ಅಡಗುತಾಣಗಳ ಮೇಲೆ ಇಸ್ರೇಲ್​ ಸೈನಿಕರು ದಾಳಿ ನಡೆಸಿ 250 ಮಂದಿಯನ್ನು ರಕ್ಷಿಸಿದ್ದಾರೆ.

ಗಾಜಾದಲ್ಲಿ ಹಮಾಸ್​ನ ಅಡಗುತಾಣಗಳ ಮೇಲೆ ದಾಳಿ ನಡೆಸಿ ಒತ್ತೆಯಾಳುಗಳನ್ನು ರಕ್ಷಿಸಿದ ಇಸ್ರೇಲ್ ಸೈನಿಕರು
ಇಸ್ರೇಲ್ ಸೇನೆImage Credit source: NDTV
Follow us
|

Updated on: Oct 13, 2023 | 12:57 PM

ಇಸ್ರೇಲ್(Israel) ಹಾಗೂ ಹಮಾಸ್(Hamas) ಉಗ್ರರ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. 250ಕ್ಕೂ ಹೆಚ್ಚಿ ಇಸ್ರೇಲಿ ಜನರನ್ನು ಹಮಾಸ್​ ಉಗ್ರರು ಒತ್ತೆಯಾಳಾಗಿರಿಸಿಕೊಂಡಿದ್ದರು. ಒಂದೊಮ್ಮೆ ಗಾಜಾದ ಮೇಲೆ ದಾಳಿ ನಡೆಸಿದರೆ ನಾವು ಒಬ್ಬೊಬ್ಬರನ್ನೇ ಕೊಲ್ಲುತ್ತೇವೆ ಎಂದು ಉಗ್ರರು ಬೆದರಿಕೆ ಹಾಕುತ್ತಿದ್ದರು. ಇಸ್ರೇಲ್ ನಿರಂತರವಾಗಿ ಗಾಜಾದಲ್ಲಿ ಹಮಾಸ್ ಸ್ಥಾನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಹಮಾಸ್ ಉಗ್ರರ ಅಡಗುತಾಣಗಳ ಮೇಲೆ ಇಸ್ರೇಲ್​ ಸೈನಿಕರು ದಾಳಿ ನಡೆಸಿ 250 ಮಂದಿಯನ್ನು ರಕ್ಷಿಸಿದ್ದಾರೆ.

60 ಹಮಾಸ್​ ಉಗ್ರರನ್ನು ಹತ್ಯೆ ಮಾಡಲಾಗಿದೆ, 26 ಉಗ್ರರನ್ನು ಜೀವಂತವಾಗಿ ಸೆರೆಹಿಡಿಯಲಾಗಿದೆ. ಹಮಾಸ್ ದಕ್ಷಿಣ ನೌಕಾ ವಿಭಾಗದ ಉಪ ಕಮಾಂಡರ್ ಮುಹಮ್ಮದ್ ಅಬು ಅಲಿಯನ್ನೂ ಜೀವಂತವಾಗಿ ಸೆರೆಹಿಡಿದಿರುವುದು ಇಸ್ರೇಲಿ ಸೇನೆ ಸಾಧಿಸಿದ ದೊಡ್ಡ ವಿಜಯವಾಗಿದೆ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿ ಸ್ರೇಲಿ ಸೈನಿಕರು ಕಟ್ಟಡಕ್ಕೆ ಪ್ರವೇಶಿಸುತ್ತಿರುವುದನ್ನು ಕಾಣಬಹುದು. ಗುಂಡುಗಳ ಸದ್ದು ಕೂಡ ಕೇಳಿಸುತ್ತದೆ. ಒಬ್ಬ ಸೈನಿಕನು ಹಿಂದಿನಿಂದ ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು ಮತ್ತು ಇನ್ನೊಬ್ಬರು ಪೋಸ್ಟ್‌ಗೆ ಗ್ರೆನೇಡ್ ಎಸೆಯುವುದನ್ನು ಕಾಣಬಹುದು. ಸೈನಿಕರು ಬಂಕರ್‌ನೊಳಗೆ ಹೋಗಿ ಒತ್ತೆಯಾಳುಗಳನ್ನು ರಕ್ಷಿಸಲು ಮತ್ತು ಅವರಿಗೆ ಯಾವುದೇ ಪ್ರಥಮ ಚಿಕಿತ್ಸೆ ಅಗತ್ಯವಿದ್ದರೆ ನೀಡುವುದಾಗಿ ಭರವಸೆ ನೀಡಿದರು.

ಮತ್ತಷ್ಟು ಓದಿ: ಗರ್ಭಿಣಿಯ ಹೊಟ್ಟೆ ಸೀಳಿತ್ತು, ಭ್ರೂಣಕ್ಕೆ ಚೂರಿಯಿಂದ ಇರಿಯಲಾಗಿತ್ತು, ಇದು ಇಸ್ರೇಲ್​ನ ಈಗಿನ ಭಯಾನಕ ಸ್ಥಿತಿ

ನಂತರ ದೃಶ್ಯಗಳಲ್ಲಿ, ಸೈನಿಕರು ಸ್ಟ್ರೆಚರ್ ಅನ್ನು ಹೊತ್ತೊಯ್ಯುತ್ತಿರುವುದನ್ನು ಕಾಣಬಹುದು. ಇಂದು ಇಸ್ರೇಲ್-ಹಮಾಸ್ ಯುದ್ಧದ ಏಳನೇ ದಿನ. ಯುದ್ಧ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಸಂಘರ್ಷ ಪ್ರಾರಂಭವಾದಾಗಿನಿಂದ ಇಸ್ರೇಲ್‌ನಲ್ಲಿ ಕನಿಷ್ಠ 1,300 ಜನರು ಮತ್ತು ಗಾಜಾ ಪಟ್ಟಿಯಲ್ಲಿ 1,500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಮಾತನಾಡಿ, ನಾವು ಯುದ್ಧ ಪ್ರಾರಂಭಿಸಿಲ್ಲ ಆದರೆ ನಮ್ಮಿಂದಲೇ ಯುದ್ಧ ಕೊನೆಗಾಣುತ್ತದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್