AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ದಾಳಿಯಿಂದ ತಪ್ಪಿಸಿಕೊಳ್ಳಲು ಇಸ್ರೇಲ್​​​ ‘ಅಪ್ಪ’ನ ಬಳಿಗೆ ಓಡುವುದನ್ನು ಬಿಟ್ಟು ಬೇರೆ ದಾರಿ ಇರಲಿಲ್ಲ: ಇರಾನ್ ವಿದೇಶಾಂಗ ಸಚಿವ

ಅಮೆರಿಕ, ಇರಾನ್​, ಇಸ್ರೇಲ್ ಮೂರು ರಾಷ್ಟ್ರಗಳ ನಡುವೆ ಯುದ್ಧ ವಾತಾವರಣ ಸೃಷ್ಟಿಯಾಗಿದ್ದು, ಮೂರು ರಾಷ್ಟ್ರಗಳು ದಾಳಿಯನ್ನು ನಡೆಸಿದೆ. ಇದರ ಜತೆಗೆ ಅಲ್ಲಿನ ನಾಯಕಗಳು ಹೇಳಿಕೆ ಮೂಲಕ ಕೂಡ ಹೇಳಿಕೆಯ ದಾಳಿಯನ್ನು ಕೂಡ ನಡೆಸಿದ್ದಾರೆ. ಇದೀಗ ಅಮೆರಿಕ ಅಧ್ಯಕ್ಷ ಟ್ರಂಪ್​​ ನೀಡಿದ ಹೇಳಿಕೆಗೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ, ಡೊನಾಲ್ಡ್ ಟ್ರಂಪ್ ವಿರುದ್ಧ ಕೆಂಡಕಾರುತ್ತಿದ್ದಾರೆ.

ನಮ್ಮ ದಾಳಿಯಿಂದ ತಪ್ಪಿಸಿಕೊಳ್ಳಲು ಇಸ್ರೇಲ್​​​ 'ಅಪ್ಪ'ನ ಬಳಿಗೆ ಓಡುವುದನ್ನು ಬಿಟ್ಟು ಬೇರೆ ದಾರಿ ಇರಲಿಲ್ಲ: ಇರಾನ್ ವಿದೇಶಾಂಗ ಸಚಿವ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jun 28, 2025 | 10:26 AM

Share

ಅಮೆರಿಕ, ಇರಾನ್​, ಇಸ್ರೇಲ್​​, ಈ ಮೂರು ರಾಷ್ಟ್ಟಗಳ ನಡುವೆ ಯುದ್ಧ ವಾತಾವರಣ ಸೃಷ್ಟಿಯಾಗಿದೆ. ಈಗಾಗಲೇ ಇರಾನ್​ ಮೇಲೆ ಅಮೆರಿಕ ಹಾಗೂ ಇಸ್ರೇಲ್​ ಮುಗಿಬಿದ್ದಿದೆ. ಇದರ ನಡುವೆ ಇರಾನ್​​​​​​ ತನ್ನ ಹಠ ಬಿಡದೆ, ಈ ಎರಡು ಬಲಿಷ್ಠ ರಾಷ್ಟ್ರಗಳ ವಿರುದ್ಧ ಹೋರಾಡಲು ಮುಂದಾಗಿದೆ. ಇರಾನ್ ದೇಶ ಅಮೆರಿಕ ಮತ್ತು ಇಸ್ರೇಲ್​​​ಗೆ ಶರಣಾಗಬೇಕು ಎಂದು ಹೇಳಿತ್ತು. ಇದಕ್ಕೆ ಒಪ್ಪದ ಇರಾನ್​​ ಯಾವುದೇ ಕಾರಣಕ್ಕೂ ನೀವು ಹೇಳಿದಂತೆ ಕೇಳುವುದಿಲ್ಲ ಎಂದು ಹೇಳಿದೆ. ಅಮೆರಿಕ ಕೂಡ ಇರಾನ್​​​​​ ವಾಯು ನೆಲೆಗಳ ಮೇಲೆ ದಾಳಿಯನ್ನು ನಡೆಸಿದೆ. ಇದರಿಂದ ಇರಾನ್​​ ಅಮೆರಿಕದ ಮೇಲೆ ಕೂಡ ಕೆಂಡಕಾರುತ್ತಿದ್ದಾರೆ. ಅಮೆರಿಕದ ಅಧ್ಯಕ್ಷ ಟ್ರಂಪ್ ಇರಾನ್‌ನ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರನ್ನು ಭೀಕರ ದಾಳಿಯಿಂದ ರಕ್ಷಣೆ ಮಾಡಿದ್ದೇವೆ. ಇದಕ್ಕೆ ಧನ್ಯವಾದ ಹೇಳುವ ಅವಶ್ಯಕತೆ ಇಲ್ಲ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಗೆ ಇಂದು (ಜೂ.28) ಪ್ರತಿಕ್ರಿಯೆ ನೀಡಿದ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಡೊನಾಲ್ಡ್ ಟ್ರಂಪ್ ಅವರ ನಮ್ಮ ನಾಯಕರಿಗೆ ಅಗೌರವ ಮತ್ತು ಸ್ವೀಕಾರಾರ್ಹವಲ್ಲದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

ಟ್ರಂಪ್ ಒಪ್ಪಂದವನ್ನು ಬಯಸುವುದು ನಿಜವಾಗಿದ್ದರೆ, ಅವರು ಇರಾನ್‌ನ ಸರ್ವೋಚ್ಚ ನಾಯಕ ಗ್ರ್ಯಾಂಡ್ ಅಯತೊಲ್ಲಾ ಖಮೇನಿ ಬಗ್ಗೆ ಇಂತಹ ಮಾತುಗಳನ್ನು ಹೇಳುತ್ತಿರಲಿಲ್ಲ. ನಮ್ಮ ನಾಯಕ ಲಕ್ಷಾಂತರ ಜನರ ಮನಸ್ಸಿನಲ್ಲಿದ್ದರೆ, ಅವರನ್ನು ಅವಮಾನಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಈಗಲೇ ಇಂತಹ ಹೇಳಿಕೆ ನೀಡುವುದನ್ನು ಬಿಡಬೇಕು ಎಂದು ಹೇಳಿದ್ದಾರೆ. ನಮ್ಮ ಕ್ಷಿಪಣಿ ದಾಳಿಯಿಂದ ತಪ್ಪಿಸಿಕೊಳ್ಳಲು ಇಸ್ರೇಲಿ ಆಡಳಿತಕ್ಕೆ ‘ಅಪ್ಪ’ನ ಬಳಿಗೆ ಓಡುವುದನ್ನು ಬಿಟ್ಟು ಬೇರೆ ದಾರಿ ಇರಲಿಲ್ಲ ಎಂದು ಎಕ್ಸ್​​ನಲ್ಲಿ ಟ್ವೀಟ್​ ಮಾಡಿದ್ದಾರೆ. ಈ ಭಯವನ್ನು ಇಡೀ ಜಗತ್ತಿಗೆ ತೋರಿಸಿದೆ ಇರಾನ್​​​, ಇಂತಹ ಅವಮಾನಗಳನ್ನು ಶಾಂತಿಯಿಂದ ಅಲ್ಲ. ಯುದ್ಧದಿಂದ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ವಿರುದ್ಧ ಚೀನಾ ಗೌಪ್ಯ ಮಾಹಿತಿ ನೀಡಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್

ಇದನ್ನೂ ಓದಿ
Image
ಟ್ರಂಪ್​ಗೆ ಶಾಂತಿ ಪುರಸ್ಕಾರ ಘೋಷಿಸಿ, ಈಗ ಪ್ರತಿಭಟನೆ ಮಾಡಿದ ಪಾಕಿಸ್ತಾನ
Image
ಇರಾನ್ ಮೇಲೆ ದಾಳಿ ನಡೆಸಿ ಸುಮ್ಮನಾದ ಟ್ರಂಪ್, ರಷ್ಯಾಗೆ ಹೊರಟ ಅಬ್ಬಾಸ್
Image
ಅಮೆರಿಕ-ಇರಾನ್ ನಡುವೆ ಹೆಚ್ಚಿದ ಉದ್ವಿಗ್ನತೆ, ರಷ್ಯಾದ ಮೊರೆ ಹೋದ ಇರಾನ್
Image
ಅಮೆರಿಕ ದೊಡ್ಡ ತಪ್ಪು ಮಾಡಿದೆ, ತಕ್ಕ ಶಿಕ್ಷೆ ಅನುಭವಿಸಲಿದೆ: ಖಮೇನಿ

ಕಳೆದ ವಾರ ಅಮೆರಿಕವು ಇರಾನಿನ ಮೂರು ಪರಮಾಣು ತಾಣಗಳ ಮೇಲೆ ದಾಳಿ ನಡೆಸಿತು, ಅದು ತುಂಬಾ ದೊಡ್ಡ ದಾಳಿ ಕೂಡ ಆಗಿತ್ತು. ಜೂನ್ 13 ರಂದು ಪ್ರಾರಂಭವಾದ 12 ದಿನಗಳ ಸಂಘರ್ಷದಲ್ಲಿ ಇರಾನ್‌ನ ಪರಮಾಣು ಕಾರ್ಯಕ್ರಮದ ಮೇಲೆ ಇಸ್ರೇಲ್ ಬಾಂಬ್​​ ದಾಳಿಯನ್ನು ನಡೆಸಿತ್ತು. ಇದರ ಜತೆಗೆ ಅಮೆರಿಕ ಕೂಡ ಇದಕ್ಕೆ ಕೈಜೋಡಿಸಿತ್ತು. ಟ್ರಂಪ್ ತಮ್ಮ ಟ್ರೂತ್ ಖಾತೆಯಲ್ಲಿ ಇರಾನ್ ನಾಯಕನನ್ನು ಹತ್ಯೆಯಿಂದ ರಕ್ಷಿಸಿದ್ದೇನೆ ಎಂದು ಬರೆದುಕೊಂಡಿದ್ದರು. ಆದರೆ ಇದನ್ನು ಇರಾನ್​​ ನಾಯಕರು ವಿರೋಧಿಸಿದ್ದಾರೆ. ಅಯತೊಲ್ಲಾ ಅಲಿ ಖಮೇನಿ ಎಲ್ಲಿ ಆಶ್ರಯ ಪಡೆದಿದ್ದಾರೆಂದು ನನಗೆ ನಿಖರವಾಗಿ ತಿಳಿದಿತ್ತು, ಮತ್ತು ವಿಶ್ವದ ಅತ್ಯಂತ ಶ್ರೇಷ್ಠ ಮತ್ತು ಶಕ್ತಿಶಾಲಿಯಾದ ಇಸ್ರೇಲ್ ಹಾಗೂ ಅಮೆರಿಕದ ಸಶಸ್ತ್ರ ಪಡೆಗಳು ಅವರ ಜೀವನವನ್ನು ಕೊನೆಗೊಳಿಸಲು ಬಿಡಲಿಲ್ಲ ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 am, Sat, 28 June 25

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು