AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಕದನ: ಹಮಾಸ್ ಕುರಿತು ಉಲ್ಲೇಖಿಸದ ವಿಶ್ವಸಂಸ್ಥೆ ನಿರ್ಣಯ, ಮತದಾನದಿಂದ ದೂರವುಳಿದ ಭಾರತ

ನಿರ್ಣಯದ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದವು, ಅದರ ವಿರುದ್ಧ 14 ರಾಷ್ಟ್ರಗಳು ಮತ ಚಲಾಯಿಸಿದರೆ, 45 ದೇಶಗಳು ಮತದಾನದಿಂದ ದೂರ ಉಳಿದವು. ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ಮತದಾನದಿಂದ ದೂರ ಉಳಿದಿವೆ.

ಇಸ್ರೇಲ್ ಕದನ: ಹಮಾಸ್ ಕುರಿತು ಉಲ್ಲೇಖಿಸದ ವಿಶ್ವಸಂಸ್ಥೆ ನಿರ್ಣಯ, ಮತದಾನದಿಂದ ದೂರವುಳಿದ ಭಾರತ
ವಿಶ್ವಸಂಸ್ಥೆಯಲ್ಲಿ ಭಾರತದ ಉಪ ಖಾಯಂ ಪ್ರತಿನಿಧಿ ಯೋಜನಾ ಪಟೇಲ್Image Credit source: UNGA
ಗಣಪತಿ ಶರ್ಮಾ
|

Updated on: Oct 28, 2023 | 10:15 AM

Share

ನವದೆಹಲಿ, ಅಕ್ಟೋಬರ್ 28: ಇಸ್ರೇಲ್-ಹಮಾಸ್ ಸಂಘರ್ಷ (Israel Hamas war) ಕೊನೆಗೊಳಿಸಿ ತಕ್ಷಣ ಮಾನವೀಯ ನೆಲೆಯಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ನಿರ್ಣಯದ (UN Resolution) ಮೇಲಿನ ಮತದಾನದಿಂದ ಭಾರತ ದೂರ ಉಳಿದಿದೆ. ಜೋರ್ಡಾನ್ ದೇಶವು ರಚಿಸಿದ ನಿರ್ಣಯವು ಗಾಜಾ ಪಟ್ಟಿಯಲ್ಲಿ ಅಡೆತಡೆಯಿಲ್ಲದ ಮಾನವೀಯ ಪ್ರವೇಶಕ್ಕೆ ಕರೆ ನೀಡಿದೆ. ಆದರೆ ಹಮಾಸ್ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ.

ಈ ಮಧ್ಯೆ, ನಿರ್ಣಯದಲ್ಲಿ ಹಮಾಸ್‌ನಿಂದ ಭಯೋತ್ಪಾದಕ ದಾಳಿಗಳನ್ನು ಖಂಡಿಸುವ ಪ್ಯಾರಾಗ್ರಾಫ್ ಅನ್ನು ಸೇರಿಸುವ ತಿದ್ದುಪಡಿಯನ್ನು ಕೆನಡಾ ಪ್ರಸ್ತಾಪಿಸಿದೆ. ಇತರ 87 ರಾಷ್ಟ್ರಗಳೊಂದಿಗೆ ಭಾರತವು ಕೆನಡಾದ ಪ್ರಸ್ತಾವಿತ ತಿದ್ದುಪಡಿಯ ಪರವಾಗಿ ಮತ ಚಲಾಯಿಸಿತು. ಆದರೆ ಮೂರನೇ ಎರಡರಷ್ಟು ಬಹುಮತ ಇಲ್ಲದ ಕಾರಣ ಅದನ್ನು ಅಂಗೀಕರಿಸಲಾಗಲಿಲ್ಲ.

ಕೊನೆಯದಾಗಿ ‘ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ಜವಾಬ್ದಾರಿಗಳನ್ನು ಎತ್ತಿಹಿಡಿಯುವುದು’ ಎಂಬ ಶೀರ್ಷಿಕೆಯ ಜೋರ್ಡಾನ್ ಮಂಡಿಸಿದ ಕರಡು ನಿರ್ಣಯವನ್ನು ವಿಶ್ವಸಂಸ್ಥೆಯಲ್ಲಿ ಅಂಗೀಕರಿಸಲಾಯಿತು, ಅದರ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದವು, ಅದರ ವಿರುದ್ಧ 14 ರಾಷ್ಟ್ರಗಳು ಮತ ಚಲಾಯಿಸಿದರೆ, 45 ದೇಶಗಳು ಮತದಾನದಿಂದ ದೂರ ಉಳಿದವು. ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ಮತದಾನದಿಂದ ದೂರ ಉಳಿದಿವೆ.

ಹಮಾಸ್ ಕ್ರೌರ್ಯ ಉಲ್ಲೇಖಿಸದ್ದಕ್ಕೆ ಅಮೆರಿಕ ರಾಯಭಾರಿ ವಿರೋಧ

ಹಮಾಸ್ ಮತ್ತು ಒತ್ತೆಯಾಳು ಎಂಬ ಎರಡು ಪ್ರಮುಖ ಪದಗಳು ನಿರ್ಣಯದಿಂದ ಕಾಣೆಯಾಗಿವೆ ಎಂದು ವಿಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್ ಮತದಾನದ ಮೊದಲು ಹೇಳಿದರು. ಅಲ್ಲದೆ, ನಿರ್ಣಯವನ್ನು ವಿರೋಧಿಸಿದರು.

ನಾವು ಗಮನಿಸಿದಂತೆ, ನಮ್ಮ ಮುಂದಿರುವ ನಿಲುವಳಿಯಲ್ಲಿ ಎರಡು ಪ್ರಮುಖ ಪದಗಳು ಕಾಣೆಯಾಗಿವೆ. ಮೊದಲನೆಯದು ಹಮಾಸ್. ಈ ನಿರ್ಣಯವು ಅಕ್ಟೋಬರ್ 7 ರ ಭಯೋತ್ಪಾದಕ ದಾಳಿಯ ಅಪರಾಧಿಗಳನ್ನು ಹೆಸರಿಸಲು ವಿಫಲವಾಗಿದೆ. ಇದು ಅತಿರೇಕವಾಗಿದೆ ಎಂದು ಲಿಂಡಾ ಥಾಮಸ್ ಹೇಳಿದರು.

ಇದನ್ನೂ ಓದಿ: Qatar Court Verdict: ಹೀಗಿರುತ್ತದೆ ಕತಾರ್​​​ನಲ್ಲಿ ಮರಣದಂಡನೆ ಶಿಕ್ಷೆ

ಈ ನಿರ್ಣಯವು ಮುಗ್ಧ ಜನರ ಬಗ್ಗೆ ಯಾವುದೇ ಉಲ್ಲೇಖವನ್ನು ನೀಡುವುದಿಲ್ಲ. ಇಲ್ಲಿ ಸೇರಿರುವ ದೇಶಗಳ ಅನೇಕ ನಾಗರಿಕರು ಸೇರಿದಂತೆ, ಅನೇಕರು ಇಂದು ಹಮಾಸ್ ಮತ್ತು ಇತರ ಭಯೋತ್ಪಾದಕ ಗುಂಪುಗಳಿಂದ ಒತ್ತೆಯಾಳುಗಳಾಗಿದ್ದಾರೆ ಎಂದು ಲಿಂಡಾ ಹೇಳಿದರು. ಇವು ಗಂಭೀರ ಲೋಪವಾಗಿದೆ. ಅವರು ಹಮಾಸ್‌ನ ಕ್ರೌರ್ಯಕ್ಕೆ ರಕ್ಷಣೆ ನೀಡುತ್ತಾರೆ ಮತ್ತು ಅಧಿಕಾರ ನೀಡುತ್ತಾರೆ ಎಂದು ಅವರು ಹೇಳಿದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್