Gaza Violence: ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ಇಸ್ರೇಲ್​ಗೆ ಇದೆ: ಅಮೆರಿಕ ಅಧ್ಯಕ್ಷ ಜೊ ಬೈಡನ್

Gaza violence: ಸೋಮವಾರ ತಡರಾತ್ರಿ ಹಿಂಸಾಚಾರ ಹಠಾತ್ತನೆ ಸ್ಫೋಟಗೊಂಡಾಗಿನಿಂದ ಗಾಜಾದಲ್ಲಿ 60 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದ ಜನರು ಮತ್ತು ಇಸ್ರೇಲ್‌ನಲ್ಲಿ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ.

Gaza Violence: ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ಇಸ್ರೇಲ್​ಗೆ ಇದೆ: ಅಮೆರಿಕ ಅಧ್ಯಕ್ಷ ಜೊ ಬೈಡನ್
ಅಮೆರಿಕ ಅಧ್ಯಕ್ಷ ಜೋ ಬೈಡೆನ್ (ಸಂಗ್ರಹ ಚಿತ್ರ)
Follow us
ರಶ್ಮಿ ಕಲ್ಲಕಟ್ಟ
|

Updated on: May 13, 2021 | 12:47 PM

ವಾಷಿಂಗ್ಟನ್: ಹಮಾಸ್ ಆಡಳಿತದ ಗಾಜಾ ಪಟ್ಟಿಯಲ್ಲಿ ಇಸ್ರೇಲಿ ಮಿಲಿಟರಿ ಮತ್ತು ಪ್ಯಾಲೆಸ್ತೀನ್ ರಾಕೆಟ್ ಪಡೆಗಳ ನಡುವೆ ತೀವ್ರ ಘರ್ಷಣೆಯು 2014 ರ ಯುದ್ಧದ ನಂತರ ಈ ಪ್ರದೇಶವನ್ನು ಸೆಳೆದುಕೊಳ್ಳುವ ಅತ್ಯಂತ ಗಂಭೀರವಾದ ಹೋರಾಟವಾಗಿದೆ. ಇದು ಶೀಘ್ರದಲ್ಲೇ ಮುಗಿಯಲಿದೆ ಎಂಬುದು ನನ್ನ ನಿರೀಕ್ಷೆ ಮತ್ತು ಭರವಸೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಆದರೆ ತಮ್ಮ ಪ್ರದೇಶಕ್ಕೆ ಸಾವಿರಾರು ರಾಕೆಟ್‌ಗಳು ಹಾರಿದಾಗ ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಎಂದಿದ್ದಾರೆ ಬೈಡನ್. ಅಮೆರಿಕ ಈ ಪ್ರದೇಶಕ್ಕೆ ರಾಯಭಾರಿಯನ್ನು ಕಳುಹಿಸಿದೆ. ಇಸ್ರೇಲ್​ನ ವಾಯುದಾಳಿಗಳು ಮತ್ತು ಪ್ಯಾಲೇಸ್ತೀನಿಯನ್ ರಾಕೆಟ್ ದಾಳಿಯಿಂದಾಗಿ ಸಾವಿನ ಸಂಖ್ಯೆ ಏರಿದ್ದು ಈಜಿಪ್ಟ್ ಮತ್ತು ಕತಾರ್ ಮಧ್ಯಸ್ಥಿಗೆ ಸಹಾಯ ಮಾಡಬೇಕು ಎಂದು ಕೋರಿದ್ದವು. ಸೋಮವಾರ ತಡರಾತ್ರಿ ಹಿಂಸಾಚಾರ ಹಠಾತ್ತನೆ ಸ್ಫೋಟಗೊಂಡಾಗಿನಿಂದ ಗಾಜಾದಲ್ಲಿ 60 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದ ಜನರು ಮತ್ತು ಇಸ್ರೇಲ್‌ನಲ್ಲಿ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ.

ಇಸ್ರೇಲ್ ನ ವಾಣಿಜ್ಯ ಕೇಂದ್ರವಾದ ಮೆಟ್ರೋಪಾಲಿಟನ್ ಟೆಲ್ ಅವೀವ್ ಮೇಲೆ   ರಾಕೆಟ್ ದಾಳಿ ಬುಧವಾರ ಸಂಜೆವರೆಗೂ ಮುಂದುವರಿದಿತ್ತು. ದಕ್ಷಿಣಭಾಗದಲ್ಲಿ ಕ್ಷಿಪಣಿ ದಾಳಿ ನಡೆದಿದ್ದು ಸೈರನ್‌ಗಳು ಉತ್ತರದಲ್ಲಿಯೂ ಕೇಳಿಬಂದವು. ಹಮಾಸ್ ತನ್ನ ಆಕ್ರಮಣಶೀಲತೆಗೆ ಭಾರಿ ಬೆಲೆ ತೆರಲಿದೆ ಎಂದು ನೆತನ್ಯಾಹು ಎಚ್ಚರಿಸಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ಬುಧವಾರ ಕತಾರಿ ವಿದೇಶಾಂಗ ಸಚಿವ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅಲ್-ಥಾನಿ ಅವರೊಂದಿಗೆ ಮಾತನಾಡಿದ್ದಾರೆ. ಅದೇ ವೇಳೆ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರು ನೆತನ್ಯಾಹು ಅವರೊಂದಿಗೆ ಮಾತನಾಡಿದ ನಂತರ ಪ್ಯಾಲೇಸ್ತೀನಿಯನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು ಈಗ ಘರ್ಷಣೆಯ ಪ್ರಮಾಣವನ್ನು ಕಡಿಮೆ ಮಾಡುವುದು ಬಹಳ ಮುಖ್ಯ ಎಂದು ಹೇಳಿದರು.

ರಾತ್ರಿ ಪ್ರಕಟವಾದ ಚಿತ್ರಗಳನ್ನು ನೋಡುವಾಗ ನೋವನ್ನುಂಟುಮಾಡುತ್ತವೆ. ಯಾವುದೇ ನಾಗರಿಕ ಜೀವವನ್ನು ಕಳೆದುಕೊಳ್ಳುವುದು ದುರಂತ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಬುಧವಾರ ಹೇಳಿದ್ದಾರೆ.

ಇಸ್ರೇಲಿ ಮತ್ತು ಪ್ಯಾಲೇಸ್ಟಿನಿಯನ್ ನಾಯಕರನ್ನು ಭೇಟಿ ಮಾಡಲು ತಕ್ಷಣ ಈ ಪ್ರದೇಶಕ್ಕೆ ಹೋಗಬೇಕೆಂದು ನಾನು ಉಪ ಸಹಾಯಕ ಕಾರ್ಯದರ್ಶಿ ಹ್ಯಾಡಿ ಅಮರ್ ಅವರಿಗೆ ಹೇಳಿದ್ದೇನೆ ಎಂದಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮವನ್ನು ಮಹತ್ವದ ತಿರುವು ತರುವಲ್ಲಿ ಈಜಿಪ್ಟಿನ ಪ್ರಯತ್ನಗಳು ವಿಫಲವಾಗಿವೆ ಎಂದು ಹಲವಾರು ಇಸ್ರೇಲಿ ಮತ್ತು ಅರಬ್ ಮಾಧ್ಯಮಗಳು ವರದಿ ಮಾಡಿವೆ.

ಬುಧವಾರ ನಡೆದ ಹಮಾಸ್ ಮಿಲಿಟರಿ ಕಮಾಂಡರ್ಗ​ಳನ್ನು ಹತ್ಯೆಗೆ ಪ್ರತಿಕ್ರಿಯೆಯಾಗಿ ರಾತ್ರಿ ಹೊತ್ತಲ್ಲಿ 1,500 ಕ್ಕೂ ಹೆಚ್ಚು ರಾಕೆಟ್ ದಾಳಿಯನ್ನು ಇಸ್ರೇಲ್ ನಡೆಸಿದೆ. ಇಸ್ರೇಲಿ ದಾಳಿಗಳಲ್ಲಿ 550 ಕ್ಕೂ ಹೆಚ್ಚು ಸರ್ಕಾರಿ ಮತ್ತು ವಸತಿ ಕಟ್ಟಡಗಳನ್ನು ಗುರಿಯಾಗಿಸಲಾಗಿದೆ ಎಂದು ಹಮಾಸ್ ತಿಳಿಸಿದೆ.

ಇದನ್ನೂ ಓದಿ: ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ರಾಕೆಟ್ ದಾಳಿ: ಕೇರಳ ಮೂಲದ ಮಹಿಳೆ ಸಾವು

(Israel has a right to defend itself when thousands of rockets flying into territory says US president Joe Biden)

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್