AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್-ಇರಾನ್ ಉದ್ವಿಗ್ನತೆ; ಪ್ರಧಾನಿ ಮೋದಿಗೆ ಕರೆ ಮಾಡಿದ ಪಿಎಂ ಬೆಂಜಮಿನ್ ನೆತನ್ಯಾಹು

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಇದಕ್ಕೆ ಅರಬ್ ರಾಷ್ಟ್ರಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇರಾನ್ ಜೊತೆಗಿನ ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಈ ವೇಳೆ ಎರಡೂ ದೇಶಗಳ ನಡುವಿನ ದಾಳಿಯ ಬಗ್ಗೆ ಪ್ರಧಾನಿ ಮೋದಿ ಭಾರತದ ಕಳವಳಗಳನ್ನು ಹಂಚಿಕೊಂಡಿದ್ದಾರೆ.

ಇಸ್ರೇಲ್-ಇರಾನ್ ಉದ್ವಿಗ್ನತೆ; ಪ್ರಧಾನಿ ಮೋದಿಗೆ ಕರೆ ಮಾಡಿದ ಪಿಎಂ ಬೆಂಜಮಿನ್ ನೆತನ್ಯಾಹು
Modi With Netanyahu
ಸುಷ್ಮಾ ಚಕ್ರೆ
|

Updated on:Jun 13, 2025 | 9:15 PM

Share

ನವದೆಹಲಿ, ಜೂನ್ 13: ಇಸ್ರೇಲ್ (Israel) ಮತ್ತು ಇರಾನ್ (Iran) ದೇಶಗಳ ನಡುವೆ ಮತ್ತೆ ದಾಳಿ ಶುರುವಾಗಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಅವರಿಂದ ದೂರವಾಣಿ ಕರೆ ಬಂದಿದೆ. ಈ ಬಗ್ಗೆ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಿಯೊಂದಿಗಿನ ತಮ್ಮ ಸಂವಾದವನ್ನು ದೃಢಪಡಿಸಿದ್ದಾರೆ.

“ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಬಂದಿದೆ. ಅವರು ಇಸ್ರೇಲ್-ಇರಾನ್ ಪರಿಸ್ಥಿತಿಯ ಬಗ್ಗೆ ನನಗೆ ವಿವರಿಸಿದ್ದಾರೆ. ನಾನು ಭಾರತದ ಕಳವಳಗಳನ್ನು ಹಂಚಿಕೊಂಡಿದ್ದೇನೆ. ಆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒತ್ತಿ ಹೇಳಿದ್ದೇನೆ” ಎಂದು ಮೋದಿ ಎಕ್ಸ್​​ನಲ್ಲಿನ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಇರಾನ್ ಮೇಲೆ ಇಸ್ರೇಲ್ ಹಠಾತ್ ದಾಳಿ: ಪರಮಾಣು ನೆಲೆಗಳೇ ಗುರಿ

ಇಸ್ರೇಲ್ ಇರಾನ್ ಮೇಲೆ ದಾಳಿ:

ಇಂದು (ಶುಕ್ರವಾರ) ಇಸ್ರೇಲ್ ಇರಾನ್‌ನ ಪರಮಾಣು ಮೂಲಸೌಕರ್ಯ, ಕ್ಷಿಪಣಿ ವ್ಯವಸ್ಥೆಗಳು ಮತ್ತು ಮಿಲಿಟರಿ ಕಮಾಂಡ್‌ನ ನಿರ್ಣಾಯಕ ಘಟಕಗಳನ್ನು ಗುರಿಯಾಗಿಸಲು “ಆಪರೇಷನ್ ರೈಸಿಂಗ್ ಲಯನ್” ಅನ್ನು ಪ್ರಾರಂಭಿಸಿತು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಈ ಕಾರ್ಯಾಚರಣೆಯನ್ನು ಅತ್ಯಂತ ಯಶಸ್ವಿ ಆರಂಭಿಕ ದಾಳಿ ಎಂದು ಬಣ್ಣಿಸಿದ್ದಾರೆ.

ಇಸ್ರೇಲ್ ದಾಳಿ ನಡೆದ ಕೆಲವು ಗಂಟೆಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಪರಮಾಣು ಒಪ್ಪಂದ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದಾರೆ ಮತ್ತು ಮಿಲಿಟರಿ ಕ್ರಮದ ಸಾಧ್ಯತೆಯ ಬಗ್ಗೆ ಎಚ್ಚರಿಸಿದ್ದಾರೆ. “ನಾನು ಇರಾನ್‌ಗೆ ಒಪ್ಪಂದ ಮಾಡಿಕೊಳ್ಳಲು ಇರುವ ಅವಕಾಶದ ಬಗ್ಗೆ ಹೇಳಿದ್ದೇನೆ. ಈ ಮೂಲಕ ಇನ್ನಷ್ಟು ಹತ್ಯಾಕಾಂಡವನ್ನು ನಿಲ್ಲಿಸಬಹುದು ಎಂದು ಸೂಚಿಸಿದ್ದೇನೆ” ಎಂದು ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:58 pm, Fri, 13 June 25

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ