AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Israel-Iran Conflict: ಇಸ್ರೇಲ್ ದಾಳಿಗೆ ಪ್ರತೀಕಾರ; 2 ಇಸ್ರೇಲಿ F-35 ಜೆಟ್‌ಗಳ ಧ್ವಂಸ

ಶುಕ್ರವಾರ ಇರಾನ್ ಮೇಲೆ ಇಸ್ರೇಲ್ ಭಾರೀ ವೈಮಾನಿಕ ದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರ ತೀರಿಸಿಕೊಂಡಿರುವ ಇರಾನ್ ಇಸ್ರೇಲ್​ನ ಎರಡು ಎಫ್-35 ಜೆಟ್​​ಗಳನ್ನು ಹೊಡೆದುರುಳಿಸಿದೆ ಎಂದು ಇರಾನ್ ಹೇಳಿಕೊಂಡಿದೆ. ಇಂದು ಇಸ್ರೇಲ್ ಒಳಗೆ ನುಗ್ಗಿರುವ ಇರಾನ್ ಸೇನೆ ಕ್ಷಿಪಣಿ ದಾಳಿಯನ್ನು ಆರಂಭಿಸಿದೆ. ಇಸ್ರೇಲಿ ತಾಣಗಳನ್ನು ಗುರಿಯಾಗಿಸಿಕೊಂಡು ಇರಾನ್ 100ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಹಾರಿಸಿತು. ಅವುಗಳಲ್ಲಿ ಹೆಚ್ಚಿನವು ಇಸ್ರೇಲ್‌ನ ವಾಯು ರಕ್ಷಣಾ ವ್ಯವಸ್ಥೆಗಳಿಂದ ತಡೆಹಿಡಿಯಲ್ಪಟ್ಟವು.

Israel-Iran Conflict: ಇಸ್ರೇಲ್ ದಾಳಿಗೆ ಪ್ರತೀಕಾರ; 2 ಇಸ್ರೇಲಿ F-35 ಜೆಟ್‌ಗಳ ಧ್ವಂಸ
Iran Attack
ಸುಷ್ಮಾ ಚಕ್ರೆ
|

Updated on:Jun 14, 2025 | 12:56 PM

Share

ಟೆಲ್ ಅವಿವ್, ಜೂನ್ 14: ಶುಕ್ರವಾರ (ಜೂನ್ 13) ಇರಾನ್ (Iran) ಮೇಲೆ ಇಸ್ರೇಲ್ ವೈಮಾನಿಕ ದಾಳಿ (Israel Air Strike) ನಡೆಸಿ ಸುಮಾರು 80 ಜನರನ್ನು ಕೊಂದಿತ್ತು. ಈ ದಾಳಿಯಲ್ಲಿ 400ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು. ಈ ದಾಳಿಗೆ ಅರಬ್ ರಾಷ್ಟ್ರಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇಸ್ರೇಲ್​ನ ದಾಳಿಗೆ ಪ್ರತೀಕಾರ ತೀರಿಸಿಕೊಂಡಿರುವ ಇರಾನ್ ಇಂದು ಇಸ್ರೇಲ್ ಒಳಗೆ ನುಗ್ಗಿದೆ. ಇಸ್ರೇಲ್ ರಾಜಧಾನಿ ಟೆಲ್ ಅವಿವ್​ನಲ್ಲಿ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇದರಲ್ಲಿ 3 ನಾಗರಿಕರು ಮೃತಪಟ್ಟಿದ್ದಾರೆ.

ಶುಕ್ರವಾರ ನಡೆದ ಮಾರಕ ಇಸ್ರೇಲಿ ದಾಳಿಗೆ ಪ್ರತೀಕಾರವಾಗಿ ಎರಡು ಇಸ್ರೇಲಿ F-35 ಸ್ಟೆಲ್ತ್ ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿರುವುದಾಗಿ ಇರಾನ್ ಹೇಳಿಕೊಂಡಿದೆ. ಈ ದಾಳಿಯಲ್ಲಿ ಹಲವಾರು ಉನ್ನತ ಇರಾನಿನ ಮಿಲಿಟರಿ ಕಮಾಂಡರ್‌ಗಳು, ಪರಮಾಣು ವಿಜ್ಞಾನಿಗಳು ಮತ್ತು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇರಾನ್‌ನ ವಾಯು ರಕ್ಷಣಾ ಇಲಾಖೆ ನೇರ ದಾಳಿ ನಡೆಸಿರುವುದಆಗಿ ಹೇಳಿಕೊಂಡಿದೆ.

ಇದನ್ನೂ ಓದಿ
Image
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
Image
ಇರಾನ್ ಮೇಲೆ ದಾಳಿ; ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು
Image
ಇಸ್ರೇಲ್ ಹಠಾತ್ ದಾಳಿಗೆ ಬೆಚ್ಚಿಬಿದ್ದ ಇರಾನ್: ಪರಮಾಣು ನೆಲೆಗಳೇ ಗುರಿ
Image
ರಾತ್ರೋರಾತ್ರಿ ಉಕ್ರೇನ್ ಮೇಲೆ 479 ಡ್ರೋನ್ ದಾಳಿ ನಡೆಸಿದ ರಷ್ಯಾ

ಇದನ್ನೂ ಓದಿ: ಇಸ್ರೇಲ್​ನಿಂದ ವೈಮಾನಿಕ ದಾಳಿ; ಇರಾನ್​ನ ಮೇಜರ್ ಜನರಲ್​ಗಳು, ಪರಮಾಣು ವಿಜ್ಞಾನಿಗಳು ಸೇರಿ 78 ಜನ ಸಾವು, 329 ಮಂದಿಗೆ ಗಾಯ

ಇರಾನ್‌ನ ಸೇನಾ ಸಾರ್ವಜನಿಕ ಸಂಪರ್ಕ ಕಚೇರಿ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ, ದೇಶದ ವಾಯು ರಕ್ಷಣಾ ಘಟಕಗಳು ಎರಡು ಇಸ್ರೇಲಿ ಫೈಟರ್ ಜೆಟ್‌ಗಳನ್ನು ಮತ್ತು ಬಹು ಡ್ರೋನ್‌ಗಳನ್ನು ಯಶಸ್ವಿಯಾಗಿ ಗುರಿಯಾಗಿಸಿ ನಾಶಪಡಿಸಿವೆ ಎಂದು ದೃಢಪಡಿಸಲಾಗಿದೆ. ಯುನೈಟೆಡ್ ಸ್ಟೇಟ್ಸ್ ಅಭಿವೃದ್ಧಿಪಡಿಸಿದ ಮತ್ತು ಇಸ್ರೇಲ್ ಬಳಸುತ್ತಿರುವ F-35 ಸ್ಟೆಲ್ತ್ ಫೈಟರ್ ಅನ್ನು ವಿಶ್ವದ ಅತ್ಯಂತ ಮುಂದುವರಿದ ಐದನೇ ತಲೆಮಾರಿನ ಯುದ್ಧ ವಿಮಾನಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಅಂತಹ ಜೆಟ್ ಅನ್ನು ಹೊಡೆದುರುಳಿಸುವುದು ಇರಾನ್ ಮಿಲಿಟರಿ ಸಾಮರ್ಥ್ಯದ ಗಮನಾರ್ಹ ಪ್ರದರ್ಶನವೆಂದು ಪರಿಗಣಿಸಲಾಗಿದೆ. ಇರಾನ್‌ನ ಹೇಳಿಕೆ ನಿಜವಾದರೆ ಅದು ಯುದ್ಧದಲ್ಲಿ F-35 ಅನ್ನು ಹೊಡೆದುರುಳಿಸಿದ ಮೊದಲ ರಾಷ್ಟ್ರವಾಗಲಿದೆ.

ಇದನ್ನೂ ಓದಿ: ಇರಾನ್ – ಇಸ್ರೇಲ್ ಯುದ್ಧದಿಂದ ಪಾಕಿಸ್ತಾನಕ್ಕೆ ಹೆಚ್ಚಾದ ಟೆನ್ಶನ್! ಕಾರಣ ಇಲ್ಲಿದೆ

ಭಾರತದಲ್ಲಿನ ಇರಾನಿನ ರಾಯಭಾರ ಕಚೇರಿಯು ತನ್ನ ಅಧಿಕೃತ ಎಕ್ಸ್ (ಹಿಂದಿನ ಟ್ವಿಟರ್) ಹ್ಯಾಂಡಲ್‌ನಲ್ಲಿ ಈ ಕುರಿತು ಹೇಳಿಕೆಯನ್ನು ಹಂಚಿಕೊಂಡಿದ್ದು, “ಇರಾನ್‌ನ ವಾಯು ರಕ್ಷಣಾ ಪಡೆ ಎರಡು ಇಸ್ರೇಲಿ F-35 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿತು ಮತ್ತು ಹಲವಾರು ಶತ್ರು ಡ್ರೋನ್‌ಗಳನ್ನು ತಡೆಹಿಡಿಯಿತು” ಎಂದು ಪೋಸ್ಟ್ ಮಾಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 12:53 pm, Sat, 14 June 25

Follow Us
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ