Israel-Iran War: ಮುಯ್ಯಿಗೆ ಮುಯ್ಯಿ, ಇಸ್ರೇಲ್​ನಿಂದ ಇರಾನ್​ ಮೇಲೆ ಕ್ಷಿಪಣಿ ದಾಳಿ

ಇಸ್ರೇಲ್ ಶುಕ್ರವಾರ ಇರಾನ್ ಮೇಲೆ ಕ್ಷಿಪಣಿಗಳಿಂದ ದಾಳಿ ಮಾಡಿದೆ. ಇಸ್ರೇಲಿ ಕ್ಷಿಪಣಿಗಳು ಇರಾನ್‌ಗೆ ಬಂದು ಅಪ್ಪಳಿಸಿದೆ ಎಂದು ಯುಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಷ್ಟು ಆಸ್ತಿ ಪಾಸ್ತಿ ನಷ್ಟವಾಗಿದೆ ಎನ್ನುವ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ, ಆದರೆ ಇರಾನ್​ ದಾಳಿಗೆ ಇಸ್ರೇಲ್ ಪ್ರತೀಕಾರ ತೀರಿಸಿಕೊಂಡಂತಾಗಿದೆ.

Israel-Iran War: ಮುಯ್ಯಿಗೆ ಮುಯ್ಯಿ, ಇಸ್ರೇಲ್​ನಿಂದ ಇರಾನ್​ ಮೇಲೆ ಕ್ಷಿಪಣಿ ದಾಳಿ
Follow us
|

Updated on: Apr 19, 2024 | 8:13 AM

ಇಸ್ರೇಲ್​(Israel) ಇರಾನ್​(Iran) ಮೇಲೆ ಕ್ಷಿಪಣಿ ದಾಳಿ ನಡೆಸಿದೆ, ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷ ನಡೆಯುತ್ತಿದೆ. ಭಾನುವಾರ ಮುಂಜಾನೆ ಇರಾನ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಮೂಲಕ ಇಸ್ರೇಲ್ ಮೇಲೆ ದಾಳಿ ಮಾಡಿತ್ತು. ಅಂದಿನಿಂದ ಇಸ್ರೇಲ್ ನೇರವಾಗಿ ಇರಾನ್ ಮೇಲೆ ದಾಳಿ ಮಾಡಬಹುದು ಎನ್ನುವ ನಿರೀಕ್ಷೆ ಇತ್ತು ಅದು ಇಂದು ನಿಜವಾಗಿದೆ.

ಇಸ್ರೇಲ್​ ಕೂಡ ಇರಾನ್ ಮೇಲೆ ದಾಳಿ ನಡೆಸಿ ಸೇಡು ತೀರಿಸಿಕೊಂಡಿದೆ. ಇದೇ ವೇಳೆ ಇರಾನ್, ಸಿರಿಯಾ ಮತ್ತು ಇರಾಕ್‌ನಲ್ಲಿ ಸ್ಫೋಟದ ಸದ್ದು ಕೇಳಿ ಬಂದಿದೆ. ಜೆರುಸಲೆಮ್ ಪೋಸ್ಟ್ ವರದಿಯ ಪ್ರಕಾರ, ಶುಕ್ರವಾರ ಬೆಳಿಗ್ಗೆ ಮಧ್ಯ ಇರಾನ್‌ನ ಇಸ್ಫಹಾನ್, ದಕ್ಷಿಣ ಸಿರಿಯಾದ ಅಸ್-ಸುವೈದಾ ಗವರ್ನರೇಟ್ ಮತ್ತು ಬಾಗ್ದಾದ್ ಪ್ರದೇಶದಲ್ಲಿ ಮತ್ತು ಇರಾಕ್‌ನ ಬಾಬಿಲ್ ಗವರ್ನರೇಟ್‌ನಲ್ಲಿ ಸ್ಫೋಟದ ಸದ್ದು ಕೇಳಿಸಿತು.

ಇರಾನ್ ದಾಳಿಯ ನಂತರ, ಅಮೆರಿಕ ಮತ್ತು ಬ್ರಿಟನ್ ಗುರುವಾರ ಇರಾನ್ ಮೇಲೆ ಕೆಲವು ನಿರ್ಬಂಧಗಳನ್ನು ವಿಧಿಸಿವೆ. ಸಿರಿಯಾದಲ್ಲಿರುವ ಇರಾನ್ ರಾಯಭಾರಿ ಕಚೇರಿ ಮೇಲೆ ಶಂಕಿತ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ ನಂತರ ಪರಿಸ್ಥಿತಿ ಹದಗೆಟ್ಟಿದೆ. ಇರಾನ್ ಇತ್ತೀಚೆಗೆ ಇಸ್ರೇಲ್ ಮೇಲೆ ಡಜನ್ ಗಟ್ಟಲೆ ಡ್ರೋನ್ ಮತ್ತು ಕ್ಷಿಪಣಿಗಳಿಂದ ದಾಳಿ ನಡೆಸಿತ್ತು.

ಮತ್ತಷ್ಟು ಓದಿ: Israel Iran War: ಇಸ್ರೇಲ್​ ಮೇಲೆ ಇರಾನ್​ನಿಂದ ಕ್ಷಿಪಣಿ ದಾಳಿ

ಇದೀಗ ಇರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿರುವ ಸುದ್ದಿ ಹೊರಬೀಳುತ್ತಿದೆ. ಇಸ್ರೇಲಿ ಕ್ಷಿಪಣಿಗಳು ಇರಾನ್‌ನ ಪರಮಾಣು ಸ್ಥಾವರಗಳನ್ನು ಗುರಿಯಾಗಿಸಿಕೊಂಡಿವೆ ಎಂದು ಕೆಲವು ಮಾಧ್ಯಮ ವರದಿಗಳು ಹೇಳುತ್ತಿವೆ.

ಇರಾನ್ ದಾಳಿ ನಡೆಸಿತ್ತು

ಇಸ್ರೇಲ್​ ಮೇಲೆ ಇರಾನ್ ಕ್ಷಿಪಣಿ ಹಾಗೂ ಡ್ರೋನ್​ ದಾಳಿ ನಡೆಸಿದೆ. ಕಿಲ್ಲರ್ ಡ್ರೋನ್​ಗಳು, ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಕ್ರೂಸ್​ ಕ್ಷಿಪಣಿಗಳು ಸೇರಿದಂತೆ ಇರಾನ್ 200ಕ್ಕೂ ಹೆಚ್ಚು ಬಗೆಯ ಡ್ರೋನ್​ ದಾಳಿಗಳನ್ನು ನಡೆಸಿದೆ. ಸಿರಿಯಾದ ರಾಜಧಾಮಿ ಡಮಾಸ್ಕಸ್​ನಲ್ಲಿರುವ ತನ್ನ ರಾಯಭಾರ ಕಚೇರಿ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ಪ್ರತಿಯಾಗಿ ಇರಾನ್ ಈ ಕ್ರಮ ಕೈಗೊಂಡಿದೆ. ಇರಾನ್ ಸೇನೆಯು ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ಇಸ್ರೇಲ್ ಮೇಲೆ ದಾಳಿ ಮಾಡಿತ್ತು.

ಇರಾನ್ ಇಸ್ರೇಲ್ ಮೇಲೆ 100ಕ್ಕೂಹೆಚ್ಚು ಡ್ರೋನ್​ಗಳನ್ನು ಹಾರಿಸಿದೆ. ಇರಾನ್ ದಾಳಿಯ ನಂತರ ಇಸ್ರೇಲ್ ರಕ್ಷಣಾ ಪಡೆ ತೀವ್ರ ಕಟ್ಟೆಚ್ಚರವಹಿಸಿದೆ. ಇಸ್ರೇಲಿ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲೇ ಡ್ರೋನ್ ಮತ್ತು ಕ್ಷಿಪಣಿದಾಳಿಗಳನ್ನು ತಡೆಹಿಡಿಯಲಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ