ಇರಾನ್‌ ಮೇಲೆ ಇಸ್ರೇಲ್ ಪ್ರತೀಕಾರದ ದಾಳಿ ಪ್ರಾರಂಭ; ಟೆಹ್ರಾನ್‌ನಲ್ಲಿ ಸರಣಿ ಸ್ಫೋಟ, ಸೈನಿಕರ ಸಾವು

ಇತ್ತೀಚಿನ ಇಸ್ರೇಲಿ ದಾಳಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಏಕೆಂದರೆ ಇರಾನ್ ಅಧಿಕಾರಿಗಳು ಇಸ್ರೇಲ್ ದಾಳಿಯನ್ನು ಪ್ರಾರಂಭಿಸುವುದರ ವಿರುದ್ಧ ಪದೇ ಪದೇ ಎಚ್ಚರಿಸಿದ್ದಾರೆ. ಇಸ್ರೇಲಿ ಮಿಲಿಟರಿಯು ಇರಾನ್‌ನಲ್ಲಿನ ಸೇನಾ ನೆಲೆಗಳ ಮೇಲೆ ದಾಳಿಗಳನ್ನು ಪ್ರಾರಂಭಿಸಿತು. ಇಲಾಮ್, ಖುಜೆಸ್ತಾನ್ ಮತ್ತು ಟೆಹ್ರಾನ್‌ನಲ್ಲಿ ಹಲವಾರು ಗಂಟೆಗಳ ಕಾಲ ಸುಮಾರು 20 ಬಾರಿ ದಾಳಿ ನಡೆದಿದೆ.

ಇರಾನ್‌ ಮೇಲೆ ಇಸ್ರೇಲ್ ಪ್ರತೀಕಾರದ ದಾಳಿ ಪ್ರಾರಂಭ; ಟೆಹ್ರಾನ್‌ನಲ್ಲಿ ಸರಣಿ ಸ್ಫೋಟ, ಸೈನಿಕರ ಸಾವು
ಇರಾನ್‌ ಮೇಲೆ ಇಸ್ರೇಲ್ ಪ್ರತೀಕಾರದ ದಾಳಿ
Follow us
ಸುಷ್ಮಾ ಚಕ್ರೆ
|

Updated on: Oct 26, 2024 | 4:37 PM

ಟೆಹ್ರಾನ್: ಇಂದು ಇರಾನ್ ಮೇಲೆ ನಡೆದ ದಾಳಿಗಳು ಇಸ್ರೇಲ್​ನ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡಿವೆ. ಈ ದಾಳಿಯಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸೇನೆಯು ದೃಢಪಡಿಸಿದೆ. ಇಸ್ರೇಲಿ ಸೇನೆಯು ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಘೋಷಿಸಿದೆ. ಇರಾನ್‌ನ ವಾಯು ರಕ್ಷಣಾ ಕೇಂದ್ರ ಕಚೇರಿಯು “ಇಸ್ರೇಲ್​ನ ಆಕ್ರಮಣಕಾರಿ ಕ್ರಮವನ್ನು ದೇಶದ ಸಮಗ್ರ ವಾಯು ರಕ್ಷಣಾ ವ್ಯವಸ್ಥೆಯಿಂದ ಯಶಸ್ವಿಯಾಗಿ ತಡೆಹಿಡಿಯಲಾಗಿದೆ ಮತ್ತು ಎದುರಿಸಲಾಗಿದೆ” ಎಂದು ಹೇಳಿದೆ.

ಇಸ್ರೇಲ್‌ನ ಮೇಲೆ ನಡೆದ ಟೆಹ್ರಾನ್‌ನ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇಸ್ರೇಲ್ ಇರಾನ್​ನ ಮಿಲಿಟರಿ ಗುರಿಗಳ ವಿರುದ್ಧ ದಾಳಿಗಳನ್ನು ನಡೆಸಿದೆ ಎಂದು ಹೇಳಿಕೊಂಡಿದೆ. ಟೆಹ್ರಾನ್‌ನ ದಾಳಿಯ ನಂತರ ಯುದ್ಧ ಉಲ್ಬಣಗೊಳ್ಳುವ ಆತಂಕದ ಬೆನ್ನಲ್ಲೇ ಈ ದಾಳಿ ನಡೆದಿದೆ.

ಇದನ್ನೂ ಓದಿ: ಹಮಾಸ್ ಮುಖ್ಯಸ್ಥನ ಹತ್ಯೆ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಮನೆ ಮೇಲೆ ಡ್ರೋನ್ ದಾಳಿ

ಅಕ್ಟೋಬರ್ 1ರಂದು ಇಸ್ರೇಲ್ ಮೇಲೆ ಸುಮಾರು 200 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಲಾಯಿತು. 6 ತಿಂಗಳ ಅವಧಿಯಲ್ಲಿ ಇರಾನ್ ಇಸ್ರೇಲ್​ನ ಮೇಲೆ ಎರಡನೇ ನೇರ ದಾಳಿ ನಡೆಸಿತ್ತು. ಇದೀಗ ಇಸ್ರೇಲ್ ರಕ್ಷಣಾ ಪಡೆಗಳು ಇರಾನ್‌ನಲ್ಲಿನ ಮಿಲಿಟರಿ ಗುರಿಗಳ ಮೇಲೆ ದಾಳಿಗಳನ್ನು ನಡೆಸುತ್ತಿದೆ.

ಟೆಹ್ರಾನ್‌ನಲ್ಲಿನ ದಾಳಿಗಳನ್ನು ಕ್ಯಾಂಪ್ ರಾಬಿನ್‌ನಲ್ಲಿರುವ ಇಸ್ರೇಲಿ ವಾಯುಪಡೆಯ ಭೂಗತ ಕಮಾಂಡ್ ಸೆಂಟರ್‌ನಿಂದ ಜನರಲ್ ಸ್ಟಾಫ್ ಮುಖ್ಯಸ್ಥ ಎಲ್‌ಟಿಜಿ ಹರ್ಝಿ ನೇತೃತ್ವ ವಹಿಸಿದ್ದರು. ಟೆಹ್ರಾನ್‌ನಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡ ಕಾರ್ಯಾಚರಣೆ ಕೇಂದ್ರದಲ್ಲಿದ್ದರು. ಅವರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ