ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿ

ಇಸ್ರೇಲ್(Israel)-ಪ್ಯಾಲೆಸ್ತೀನ್(Palestine) ಸಂಘರ್ಷಕ್ಕೆ ಇಲ್ಲಿಯವರೆಗೆ 1,600 ಮಂದಿ ಬಲಿಯಾಗಿದ್ದಾರೆ. ಯಾವುದೇ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯಲ್ಲಿ ನಾಗರಿಕರ ಮೇಲೆ ದಾಳಿ ನಡೆದರೆ ಹಮಾಸ್ ಭಯೋತ್ಪಾದಕರು ಒತ್ತೆಯಾಳಾಗಿರಿಸಿಕೊಂಡಿರುವ ಇಸ್ರೇಲಿ ನಾಗರಿಕರನ್ನು ಒಬ್ಬೊಬ್ಬರನ್ನಾಗಿಯೇ ಕೊಲ್ಲುತ್ತೇವೆ ಎಂದು ಹಮಾಸ್ ಉಗ್ರರು ಬೆದರಿಕೆ ಹಾಕಿದ್ದಾರೆ.

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿ
ಯುದ್ಧImage Credit source: India Today
Follow us
|

Updated on: Oct 10, 2023 | 10:07 AM

ಇಸ್ರೇಲ್(Israel)-ಪ್ಯಾಲೆಸ್ತೀನ್(Palestine) ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಯಾವುದೇ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯಲ್ಲಿ ನಾಗರಿಕರ ಮೇಲೆ ದಾಳಿ ನಡೆದರೆ ಹಮಾಸ್ ಭಯೋತ್ಪಾದಕರು ಒತ್ತೆಯಾಳಾಗಿರಿಸಿಕೊಂಡಿರುವ ಇಸ್ರೇಲಿ ನಾಗರಿಕರನ್ನು ಒಬ್ಬೊಬ್ಬರನ್ನಾಗಿಯೇ ಕೊಲ್ಲುತ್ತೇವೆ ಎಂದು ಹಮಾಸ್ ಉಗ್ರರು ಬೆದರಿಕೆ ಹಾಕಿದ್ದಾರೆ.

ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, 143 ಮಕ್ಕಳು ಮತ್ತು 105 ಮಹಿಳೆಯರು ಸೇರಿದಂತೆ 704 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ಕು ದಿನಗಳ ಅವಧಿಯಲ್ಲಿ ದಾಳಿಯಲ್ಲಿ 4,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದಲ್ಲದೆ, ಹಮಾಸ್ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಕನಿಷ್ಠ 900 ಜನರು ಸಾವನ್ನಪ್ಪಿದ್ದಾರೆ ಮತ್ತು 2,600 ಜನರು ಗಾಯಗೊಂಡಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹಮಾಸ್ ಭಯೋತ್ಪಾದಕ ಗುಂಪಿನ ಅಡಗುತಾಣಗಳನ್ನು ನಾಶಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಮತ್ತಷ್ಟು ಓದಿ: ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಹಮಾಸ್ ಬೆದರಿಕೆ

ಇಸ್ರೇಲ್‌ನ ನಿರಂತರ ದಾಳಿಗಳು ಮುಂದುವರೆದಿದೆ, ಗಾಜಾದ 187,500 ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು 687 ಜನರು ಸಾವನ್ನಪ್ಪಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬೈಡನ್, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಬ್ರಿಟನ್ ನಾಯಕರು ಇಸ್ರೇಲ್​ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ನಾವು ಯುದ್ಧವನ್ನು ಪ್ರಾರಂಭಿಸಿಲ್ಲ ಆದರೆ ಅದನ್ನು ನಾವೇ ಕೊನೆಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ. ಹಮಾಸ್​ ಅನ್ನು ಐಸಿಸ್ ಉಗ್ರರಿಗೆ ಹೋಲಿಸಿರುವ ನೇತನ್ಯಾಹು , ಅವರ ವಿರುದ್ಧ ಜನರು ಒಗ್ಗೂಡಿ ಸೋಲಿಸಬೇಕೆಂದು ಕರೆ ನೀಡಿದರು.

ಅಲ್ ಜಜೀರಾ ವರದಿಯ ಪ್ರಕಾರ, ಗಾಜಾ ಎನ್‌ಕ್ಲೇವ್‌ನ ಪಶ್ಚಿಮ ಭಾಗದಲ್ಲಿರುವ ವಸತಿ ಕಟ್ಟಡದ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಇಬ್ಬರು ಪತ್ರಕರ್ತರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ. ಟರ್ಕಿಯ ಅನಡೋಲು ಏಜೆನ್ಸಿ ಇಬ್ಬರು ಪತ್ರಕರ್ತರನ್ನು ಸಯೀದ್ ಅಲ್-ತವೀಲ್ ಮತ್ತು ಮೊಹಮ್ಮದ್ ಸೊಬ್ ಎಂದು ಗುರುತಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್