AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್; ಎಲ್ಲಾ ಸೇನಾ ರಜೆಗಳು ರದ್ದು; ಇರಾನ್ ಮೇಲೆ ನಡೆಯುತ್ತಾ ದೊಡ್ಡ ದಾಳಿ?

Israel rejects Trump's 15 point Gaza peace plan: ಗಾಜಾದಲ್ಲಿ ಶಾಂತಿ ಪರಿಸ್ಥಿತಿ ತರಲು ಅಮೆರಿಕ ರೂಪಿಸಿರುವ 15 ಅಂಶಗಳ ಯೋಜನೆಗೆ ಇಸ್ರೇಲ್ ಅಸಮ್ಮತಿ ವ್ಯಕ್ತಪಡಿಸಿದೆ. ಪ್ಯಾಲೆಸ್ಟೀನ್ ವಿಚಾರದಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡುವಿನ ಭಿನ್ನಾಭಿಪ್ರಾಯ ಮುಂದುವರಿದಂತಾಗಿದೆ. ಗಾಜಾದಿಂದ ತನ್ನ ಸೇನಾ ಪಡೆಗಳನ್ನು ಹಿಂಪಡೆಯಲು ಇಸ್ರೇಲ್ ನಕಾರ ತೋರಿದೆ.

ಟ್ರಂಪ್ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್; ಎಲ್ಲಾ ಸೇನಾ ರಜೆಗಳು ರದ್ದು; ಇರಾನ್ ಮೇಲೆ ನಡೆಯುತ್ತಾ ದೊಡ್ಡ ದಾಳಿ?
ಬೆಂಜಮಿನ್ ನೆತನ್ಯಾಹುImage Credit source: AP
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 09, 2026 | 6:06 PM

Share

ಟೆಲ್ ಅವಿವ್, ಆಗಸ್ಟ್ 9: ಗಾಜಾದಲ್ಲಿ ಶಾಂತಿ ನೆಲಸುವಂತೆ ಮಾಡಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರೂಪಿಸಿರುವ 15 ಅಂಶಗಳ ಯೋಜನೆಯನ್ನು (Trump’s Gaza peace plan) ಇಸ್ರೇಲ್ ತಿರಸ್ಕರಿಸಿದೆ. ಹಮಾಸ್ ಸಂಪೂರ್ಣ ಶಸ್ತ್ರ ತ್ಯಜಿಸುವವರೆಗೂ ಗಾಜಾದಿಂದ ತನ್ನ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ಹಾಗೆಯೇ, ತನ್ನ ಸೈನಿಕರ ಎಲ್ಲಾ ರಜೆಗಳನ್ನು ರದ್ದುಗೊಳಿಸಿ ತೀವ್ರ ಕಟ್ಟೆಚ್ಚರ ವಹಿಸಿದೆ. ಇದರೊಂದಿಗೆ ಪಶ್ಚಿಮ ಏಷ್ಯಾದಲ್ಲಿ (ಮಧ್ಯಪ್ರಾಚ್ಯ) ಮತ್ತೊಮ್ಮೆ ಯುದ್ಧದ ಭೀತಿ ಎದುರಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಹಾಗೂ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿರುವ ಬೆನ್ನಲ್ಲೇ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಇರಾನ್ ಮೇಲಿನ ಹೊಸ ದಾಳಿಗೆ ಯೋಜನೆ ರೂಪಿಸುತ್ತಿದ್ದಾರೆ ಎಂಬ ವರದಿಗಳು ಬಂದಿವೆ.

ಸೈನಿಕರ ರಜೆ ರದ್ದು: ಇಸ್ರೇಲ್ ರಕ್ಷಣಾ ಪಡೆಗಳು (IDF) ತಮ್ಮ ಸೈನಿಕರು ಹಾಗೂ ಅಧಿಕಾರಿಗಳ ಎಲ್ಲಾ ರಜೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿವೆ. ಯಾವುದೇ ಕ್ಷಣದಲ್ಲಾದರೂ ಎದುರಾಗಬಹುದಾದ ತುರ್ತು ಪರಿಸ್ಥಿತಿಗೆ ಸಿದ್ಧವಾಗಿರಲು ಸೇನೆಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಮೊಜ್ತಬಾ ಖಮೇನಿ ಮೃತಪಟ್ಟರೆ ಯಾರಾಗಲಿದ್ದಾರೆ ಇರಾನ್ ಸುಪ್ರೀಂ ನಾಯಕ?

ನೆತನ್ಯಾಹು ಎಚ್ಚರಿಕೆ: ಅಮೆರಿಕವು ಇರಾನ್ ಜೊತೆ ರಾಜತಾಂತ್ರಿಕ ಸಂಧಾನಕ್ಕೆ ಯತ್ನಿಸುತ್ತಿದ್ದರೂ, ಇರಾನ್‌ನ ಪರಮಾಣು ಯೋಜನೆಗಳು ಹಾಗೂ ಸಶಸ್ತ್ರ ಗುಂಪುಗಳ ಚಟುವಟಿಕೆಗಳು ತಮ್ಮ ದೇಶದ ಭದ್ರತೆಗೆ ಬೆದರಿಕೆಯಾಗಿವೆ ಎಂದು ಇಸ್ರೇಲ್ ಭಾವಿಸಿದೆ. ಇರಾನ್ ಮೇಲಿನ ತೀವ್ರ ದಾಳಿಗೆ ಇಸ್ರೇಲ್ ಸಿದ್ಧವಾಗಿದೆ ಎಂದು ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ.

ಅಮೆರಿಕದ ಜೊತೆಗಿನ ಮಾತುಕತೆ ಮತ್ತು ಭಿನ್ನಾಭಿಪ್ರಾಯ

ಅಮೆರಿಕವು ವಲಯದಲ್ಲಿ ಶಾಂತಿ ಸ್ಥಾಪಿಸಲು ಮತ್ತು ಸಂಘರ್ಷ ಶಮನಗೊಳಿಸಲು ಪ್ರಯತ್ನಿಸುತ್ತಿದ್ದರೂ, ಇಸ್ರೇಲ್ ನಾಯಕತ್ವವು ಇರಾನ್‌ಗೆ ಕಟ್ಟುನಿಟ್ಟಿನ ನಿಯಮ ವಿಧಿಸಬೇಕು ಎಂದು ಪಟ್ಟು ಹಿಡಿದಿದೆ.

ಇದನ್ನೂ ಓದಿ: ರಷ್ಯಾದ ದಾಳಿಗೆ ಕೈವ್​​ನಲ್ಲಿ ಮಗು ಸೇರಿ ನಾಲ್ವರು ಬಲಿ

ಇರಾನ್ ಹಾಗೂ ಪ್ರಾಕ್ಸಿ ಗುಂಪುಗಳ ಭೀತಿ: ಇಸ್ರೇಲಿ ಪಡೆಗಳು ಕೇವಲ ಇರಾನ್ ಮಾತ್ರವಲ್ಲದೆ, ಲೆಬನಾನ್‌ನ ಹಿಜ್ಬುಲ್ಲಾ ಸೇರಿದಂತೆ ಇತರ ಪ್ರಾದೇಶಿಕ ಸಂಘಟನೆಗಳಿಂದ ಎದುರಾಗಬಹುದಾದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯನ್ನು (Air Defence Systems) ಸಜ್ಜುಗೊಳಿಸಿವೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ