ನೀರು ಬೇಕಿದ್ದರೆ ನಮ್ಮ ಷರತ್ತಿಗೆ ಒಪ್ಪಿ ಎಂದು ಹಮಾಸ್​ಗೆ ಎಚ್ಚರಿಕೆ ಕೊಟ್ಟ ಇಸ್ರೇಲ್

|

Updated on: Oct 12, 2023 | 3:13 PM

ನೀರು ಬೇಕಿದ್ದರೆ ನಮ್ಮ ಷರತ್ತಿಗೆ ಒಪ್ಪಿ ಎಂದು ಹಮಾಸ್ ಉಗ್ರರಿಗೆ ಇಸ್ರೇಲ್ ಎಚ್ಚರಿಕೆ ನೀಡಿದೆ. ಗಾಜಾದಲ್ಲಿ ಒತ್ತೆಯಾಳಾಗಿರಿಸಿಕೊಂಡಿರುವವರನ್ನು ಬಿಡುಗಡೆ ಮಾಡುವವರೆಗೂ ನೀರು ಸೇರಿದಂತೆ ಯಾವ ಮೂಲಭೂತ ಸೌಕರ್ಯಗಳೂ ನಿಮಗೆ ಸಿಗುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ವಿದ್ಯುತ್ ಕೂಡ ಇರುವುದಿಲ್ಲ, ನೀರು ಬಿಡುವುದಿಲ್ಲ, ಅಪಹರಣಕ್ಕೊಳಗಾದ ಇಸ್ರೇಲಿಯನ್ನರು ವಾಪಸ್ ಬರುವವರೆಗೂ ಯಾವ ಮೂಲಭೂತ ಸೌಕರ್ಯಗಳೂ ದೊರೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

ನೀರು ಬೇಕಿದ್ದರೆ ನಮ್ಮ ಷರತ್ತಿಗೆ ಒಪ್ಪಿ ಎಂದು ಹಮಾಸ್​ಗೆ ಎಚ್ಚರಿಕೆ ಕೊಟ್ಟ ಇಸ್ರೇಲ್
ಇಸ್ರೇಲ್
Image Credit source: NDTV
Follow us on

ನೀರು ಬೇಕಿದ್ದರೆ ನಮ್ಮ ಷರತ್ತಿಗೆ ಒಪ್ಪಿ ಎಂದು ಹಮಾಸ್ ಉಗ್ರರಿಗೆ ಇಸ್ರೇಲ್ ಎಚ್ಚರಿಕೆ ನೀಡಿದೆ. ಗಾಜಾದಲ್ಲಿ ಒತ್ತೆಯಾಳಾಗಿರಿಸಿಕೊಂಡಿರುವವರನ್ನು ಬಿಡುಗಡೆ ಮಾಡುವವರೆಗೂ ನೀರು ಸೇರಿದಂತೆ ಯಾವ ಮೂಲಭೂತ ಸೌಕರ್ಯಗಳೂ ನಿಮಗೆ ಸಿಗುವುದಿಲ್ಲ ಎಂದು ಇಸ್ರೇಲ್ ಹೇಳಿದೆ.
ವಿದ್ಯುತ್ ಕೂಡ ಇರುವುದಿಲ್ಲ, ನೀರು ಬಿಡುವುದಿಲ್ಲ, ಅಪಹರಣಕ್ಕೊಳಗಾದ ಇಸ್ರೇಲಿಯನ್ನರು ವಾಪಸ್ ಬರುವವರೆಗೂ ಯಾವ ಮೂಲಭೂತ ಸೌಕರ್ಯಗಳೂ ದೊರೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

ಶನಿವಾರದಂದು ಹಮಾಸ್ ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ 150 ಮಂದಿ ಇಸ್ರೇಲಿಗಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ. ಇಸ್ರೇಲ್​ ಸುತ್ತಮುತ್ತಲ ಪ್ರದೇಶಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮಂದಿಯನ್ನು ಹಮಾಸ್ ಉಗ್ರರು ಕೊಂದಿದ್ದಾರೆ. ದಿಗ್ಬಂಧನಕ್ಕೊಳಗಾದ ಗಾಜಾ ಪಟ್ಟಿಯಲ್ಲಿ ಇಸ್ರೇಲ್​ ಹಮಾಸ್ ಗುಂಪಿನ ವಿರುದ್ಧ ಕಾರ್ಯಾಚರಣೆ ಕೈಗೊಂಡು 1,200 ಮಂದಿಯನ್ನು ಕೊಂದಿದೆ.

ಇಸ್ರೇಲ್(Israel) ಹಮಾಸ್ ಉಗ್ರರ ವಾಸದಲ್ಲಿದ್ದ ಗಾಜಾ ಗಡಿಯನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗಿದೆ. ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ಸಂಘರ್ಷದಲ್ಲಿ ಇದುವರೆಗೆ 3 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ಸೇನೆ ಮತ್ತು ಉಗ್ರ ಸಂಘಟನೆ ಹಮಾಸ್ ನಡುವಿನ ಸಂಘರ್ಷ ಮುಂದುವರಿದಿದೆ. ಅಕ್ಟೋಬರ್ 7 ರಂದು ಹಮಾಸ್ ದಾಳಿಯ ನಂತರ, ಇಸ್ರೇಲಿ ಸೇನೆಯು ನಿರಂತರವಾಗಿ ಗಾಜಾ ಗಡಿಯಲ್ಲಿ ಬಾಂಬ್ ದಾಳಿ ನಡೆಸುತ್ತಿದೆ. ಏತನ್ಮಧ್ಯೆ, ಇಸ್ರೇಲಿ ಸೇನೆಯು ಗಾಜಾ ಗಡಿ ಪ್ರದೇಶಗಳನ್ನು ಹಮಾಸ್‌ನಿಂದ ಹಿಂಪಡೆದಿದೆ ಎಂದು ಮಾಧ್ಯಮ ವರದಿಗಳಲ್ಲಿ ಹೇಳಲಾಗುತ್ತಿದೆ.

ಮತ್ತಷ್ಟು ಓದಿ: ಹಮಾಸ್​ ಉಗ್ರರ ವಶದಿಂದ ಗಾಜಾ ಗಡಿಯನ್ನು ಹಿಂಪಡೆದ ಇಸ್ರೇಲ್​, ಸಂಘರ್ಷದಲ್ಲಿ ಇಲ್ಲಿಯವರೆಗೆ 3 ಸಾವಿರಕ್ಕೂ ಅಧಿಕ ಮಂದಿ ಸಾವು

ಇಸ್ರೇಲ್ ಮೇಲಿನ ದಾಳಿಯ ಸಮಯದಲ್ಲಿ, ಹಮಾಸ್ ಉಗ್ರಗಾಮಿಗಳು ಗಡಿ ಬೇಲಿಯ ಕೆಲವು ಭಾಗಗಳನ್ನು ಕಿತ್ತುಹಾಕಿದ್ದರು. ಆದರೆ, ಇಸ್ರೇಲ್ ರಕ್ಷಣಾ ಪಡೆ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಅವರು ಬೇಲಿಯಿಂದ ದೇಶದೊಳಗೆ ಒಬ್ಬ ಹಮಾಸ್ ಉಗ್ರನೂ ಪ್ರವೇಶಿಸಿಲ್ಲ ಎಂದು ಹೇಳಿದ್ದಾರೆ. ಈ ಯುದ್ಧದಲ್ಲಿ ಎರಡೂ ಕಡೆಯಿಂದ ಸಾಯುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇಲ್ಲಿಯವರೆಗೆ, ಈ ಹೋರಾಟದಲ್ಲಿ 3000 ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಅಕ್ಟೋಬರ್ 10 ರಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹಮಾಸ್​ಗೆ ಎಚ್ಚರಿಕೆ ನೀಡಿದ್ದರು. ಇಸ್ರೇಲ್ ಮೇಲೆ ದಾಳಿ ನಡೆಸುವ ಮೂಲಕ ಹಮಾಸ್ ಉಗ್ರರು ದೊಡ್ಡ ತಪ್ಪು ಮಾಡಿದ್ದಾರೆ. ಹಮಾಸ್ ಹಾಗೂ ಇತರೆ ಇಸ್ರೇಲ್​ನ ಶತ್ರುಗಳು ಜೀವಮಾನಪೂರ್ತಿ ನೆನಪಿಸಿಕೊಳ್ಳುವಂತಹ ಬೆಲೆಯನ್ನು ತೆರಬೇಕಾಗುತ್ತದೆ. ನಾವು ಯುದ್ಧವನ್ನು ಪ್ರಾರಂಭಿಸಿಲ್ಲ ಆದರೆ ಅಂತ್ಯ ನಮ್ಮ ಕೈಯಿಂದಲೇ ಆಗುತ್ತದೆ ಎಂದು ನೇತನ್ಯಾಹು ಹೇಳಿದ್ದರು. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರು ನೇತನ್ಯಾಹು ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಇಸ್ರೇಲ್​ನ ಪ್ರಸ್ತುತ ಸ್ಥಿತಿ ಬಗ್ಗೆ ಮಾಹಿತಿ ಪಡೆದರು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ