AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಸರ್ವೋಚ್ಚ ನಾಯಕ ಯಾರೇ ಆಗಲಿ ಜೀವಂತ ಬಿಡುವುದಿಲ್ಲ” : ಇರಾನ್​​​ಗೆ ಎಚ್ಚರಿಕೆ ನೀಡಿದ ಇಸ್ರೇಲ್

ಇರಾನ್ ಮತ್ತು ಇಸ್ರೇಲ್ ಸಂಘರ್ಷ ತೀವ್ರಗೊಂಡಿದ್ದು, ಇಸ್ರೇಲ್ ಹೊಸ ಸುಪ್ರೀಂ ಲೀಡರ್ ಹಾಗೂ ಅವರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವವರನ್ನು ಹತ್ಯೆ ಮಾಡುವ ಎಚ್ಚರಿಕೆ ನೀಡಿದೆ. ಇರಾನ್‌ನ ಪರಮಾಣು ಕಾರ್ಯಕ್ರಮಗಳು ಮತ್ತು ಬೆಂಬಲಿತ ಸಂಘಟನೆಗಳ ದಾಳಿಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿಯನ್ನು ಹೆಚ್ಚಿಸಿದೆ. ಇಸ್ರೇಲ್‌ನ ಈ ಕಠಿಣ ನಿಲುವು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ.

ಸರ್ವೋಚ್ಚ ನಾಯಕ ಯಾರೇ ಆಗಲಿ ಜೀವಂತ ಬಿಡುವುದಿಲ್ಲ : ಇರಾನ್​​​ಗೆ ಎಚ್ಚರಿಕೆ ನೀಡಿದ ಇಸ್ರೇಲ್
ಸಾಂದರ್ಭಿಕ ಚಿತ್ರ Image Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on: Mar 08, 2026 | 6:19 PM

Share

ಟೆಹ್ರಾನ್, ಮಾ.8: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಈಗ ಅಂತಿಮ ಹಂತಕ್ಕೆ ತಲುಪಿದಂತಿದೆ. ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ (Supreme Leader) ಯಾರೇ ಆಗಲಿ, ಅವರನ್ನು ಹುಡುಕಿ ಹುಡುಕಿ ಹತ್ಯೆ ಮಾಡುವುದಾಗಿ ಇಸ್ರೇಲ್ ಅತ್ಯಂತ ಖಡಕ್ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೆ, ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗುವವರನ್ನೂ ಬಿಡುವುದಿಲ್ಲ ಎಂದು ಇಸ್ರೇಲ್ ಗುಡುಗಿದೆ.

ಇರಾನ್‌ನಲ್ಲಿ ಸುಪ್ರೀಂ ಲೀಡರ್ ಹುದ್ದೆಗೆ ಯಾರೇ ಆಯ್ಕೆಯಾದರೂ ಅವರನ್ನು ಇಸ್ರೇಲ್ ಸುಮ್ಮನೆ ಬಿಡುವುದಿಲ್ಲ. ಇಸ್ರೇಲ್ ರಕ್ಷಣಾ ಪಡೆಗಳು ಅವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಿವೆ ಎಂಬ ಸಂದೇಶ ರವಾನೆಯಾಗಿದೆ. ಕೇವಲ ನಾಯಕನನ್ನಷ್ಟೇ ಅಲ್ಲ, ಇರಾನ್‌ನ ಅತ್ಯುನ್ನತ ಮಂಡಳಿಯಲ್ಲಿ ಸುಪ್ರೀಂ ಲೀಡರ್ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ಸದಸ್ಯರನ್ನೂ ಇಸ್ರೇಲ್ ಹೊಡೆದು ಹಾಕುವುದಾಗಿ ಎಚ್ಚರಿಸಿದೆ.

ಇದನ್ನೂ ಓದಿ: ಟ್ರಂಪ್ ಮಗನ ಜತೆಗೆ ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಮದುವೆ ಫಿಕ್ಸ್​​​? ಫೋಟೋ ವೈರಲ್

ಇತ್ತೀಚಿನ ವರ್ಷಗಳಲ್ಲಿ ಇರಾನ್ ಬೆಂಬಲಿತ ಸಂಘಟನೆಗಳ ದಾಳಿ ಮತ್ತು ಇರಾನ್‌ನ ಪರಮಾಣು ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಇಸ್ರೇಲ್ ಈ ಕಠಿಣ ನಿರ್ಧಾರಕ್ಕೆ ಬಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ. “ಯಾರೇ ಲೀಡರ್ ಆಗಲಿ, ನಾವು ಅವರನ್ನು ಬಿಡುವುದಿಲ್ಲ. ಹುಡುಕಿ ಹುಡುಕಿ ಹೊಡೆಯುತ್ತೇವೆ” ಎಂಬ ಇಸ್ರೇಲ್‌ನ ಮಾತುಗಳು ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿವೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ