AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಸುಂಕ ಏರಿಕೆ ಬೆನ್ನಲ್ಲೇ ಭಾರತದ ಬೆಂಬಲಕ್ಕೆ ನಿಂತ ಇಸ್ರೇಲ್

ಭಾರತದ ಮೇಲಿನ ಆಮದು ವಸ್ತುಗಳ ಮೇಲಿನ ಸುಂಕವನ್ನು ಅಮೆರಿಕ ಶೇ. 50ಕ್ಕೆ ಏರಿಸಿದೆ. ಇದರ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಭಾರತಕ್ಕೆ ಬೆಂಬಲಿಸಿದ್ದಾರೆ. ಇದೀಗ ನಡೆಯುತ್ತಿರುವ ಸುಂಕ ವಿವಾದದಲ್ಲಿ ಭಾರತಕ್ಕೆ ನೆತನ್ಯಾಹು ಬೆಂಬಲ ವ್ಯಕ್ತಪಡಿಸಿದ್ದಾರೆ. ನೆತನ್ಯಾಹು ಭಾರತವನ್ನು ಇಸ್ರೇಲ್ ಮತ್ತು ಅಮೆರಿಕ ಎರಡಕ್ಕೂ "ಘನ ಪಾಲುದಾರ". ಅಮೆರಿಕದ ನಡುವೆ ಇರುವ ಅಡೆತಡೆಯನ್ನು ಭಾರತ ನಿಭಾಯಿಸಬಹುದು. ಇದು ತಾತ್ಕಾಲಿಕ ಅಡಚಣೆಯಾಗಿದೆ ಎಂದು ಕರೆದಿದ್ದಾರೆ.

ಅಮೆರಿಕದ ಸುಂಕ ಏರಿಕೆ ಬೆನ್ನಲ್ಲೇ ಭಾರತದ ಬೆಂಬಲಕ್ಕೆ ನಿಂತ ಇಸ್ರೇಲ್
Benjamin Netanyahu
ಸುಷ್ಮಾ ಚಕ್ರೆ
|

Updated on: Aug 07, 2025 | 8:23 PM

Share

ನವದೆಹಲಿ, ಆಗಸ್ಟ್ 7: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭಾರತೀಯ ಸರಕುಗಳ ಮೇಲೆ ತೀವ್ರ ಸುಂಕಗಳನ್ನು ಘೋಷಿಸಿದ ನಂತರ ಭಾರತ ಮತ್ತು ಅಮೆರಿಕದ ನಡುವೆ ಹೆಚ್ಚುತ್ತಿರುವ ವ್ಯಾಪಾರ ಉದ್ವಿಗ್ನತೆಯ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಇಂದು ಭಾರತ ಮತ್ತು ಅಮೆರಿಕ ಎರಡೂ ರಾಷ್ಟ್ರಗಳು ಸಾಮಾನ್ಯ ನೆಲೆಯನ್ನು ಕಂಡುಕೊಳ್ಳಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತ ಮತ್ತು ಅಮೆರಿಕ “ಗಮನಾರ್ಹವಾದ ಸಾಮಾನ್ಯ ನೆಲೆಯನ್ನು ಹೊಂದಿವೆ” ಎಂದು ನೆತನ್ಯಾಹು ಹೇಳಿದ್ದಾರೆ. ಹಾಗೇ, ಅದಕ್ಕೆ ಎರಡೂ ದೇಶಗಳ ನಡುವಿನ ಮಾತುಕತೆಯ ಮೂಲಕ ಪರಿಹಾರ ಕೂಡ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿಎನ್‌ಎನ್-ನ್ಯೂಸ್ 18 ವರದಿಯ ಪ್ರಕಾರ, ಇದೀಗ ನಡೆಯುತ್ತಿರುವ ಸುಂಕ ವಿವಾದದಲ್ಲಿ ಭಾರತದ ನಿಲುವಿಗೆ ಬೆಂಜಮಿನ್ ನೆತನ್ಯಾಹು ಬಲವಾದ ಬೆಂಬಲ ವ್ಯಕ್ತಪಡಿಸಿದ್ದು, “ವಾಷಿಂಗ್ಟನ್ ಡಿಸಿಯಲ್ಲಿ ಭಾರತವು ಘನ ಪಾಲುದಾರ ಎಂಬ ಮೂಲಭೂತ ನಂಬಿಕೆ ಇದೆ” ಎಂದು ಹೇಳಿದ್ದಾರೆ. ಭಾರತದ ಪ್ರಾದೇಶಿಕ ಮಹತ್ವವನ್ನು ಎತ್ತಿ ತೋರಿಸಿದ ನೆತನ್ಯಾಹು, ಇಸ್ರೇಲಿ ನಾಯಕ ಭಾರತವನ್ನು “ಏಷ್ಯಾದಲ್ಲಿ ಎದ್ದು ಕಾಣುವ ದೇಶ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಟ್ರಂಪ್​ಗೆ ಸವಾಲೆಸೆದ ಪ್ರಧಾನಿ ಮೋದಿ

ಭಾರತೀಯ ಸರಕುಗಳ ಮೇಲೆ ಶೇ. 25ರಷ್ಟು ಸುಂಕ ವಿಧಿಸಿದ ಕೇವಲ ಒಂದು ವಾರದ ನಂತರ, ಟ್ರಂಪ್ ನಿನ್ನೆ (ಬುಧವಾರ) ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ. 25ರಷ್ಟು ಹೆಚ್ಚುವರಿ ಸುಂಕವನ್ನು ಘೋಷಿಸಿದ್ದರು. ಇದು ಭಾರತ ರಷ್ಯಾದ ತೈಲವನ್ನು ನಿರಂತರವಾಗಿ ಖರೀದಿಸುತ್ತಿರುವುದಕ್ಕೆ ಅಮೆರಿಕ ವಿಧಿಸುತ್ತಿರುವ “ದಂಡ” ಎಂದು ಟ್ರಂಪ್ ಕರೆದಿದ್ದಾರೆ. ಒಟ್ಟಾರೆಯಾಗಿ ಶೇ. 50ರಷ್ಟು ಸುಂಕವು ಈಗ ಒಂದು ದೇಶದ ಮೇಲೆ ವಿಧಿಸಲಾದ ಅತ್ಯಧಿಕವಾಗಿದೆ.

ಇದನ್ನೂ ಓದಿ: ಅಮೆರಿಕದ ಸರಕುಗಳ ಮೇಲೆ ಭಾರತವೂ ಶೇ.50ರಷ್ಟು ಸುಂಕ ವಿಧಿಸಬೇಕು; ಟ್ರಂಪ್ ವಿರುದ್ಧ ಶಶಿ ತರೂರ್ ಕಿಡಿ

ಇದಕ್ಕೆ ಪ್ರತಿಕ್ರಿಯೆಯಾಗಿ, ಪ್ರಧಾನಿ ನರೇಂದ್ರ ಮೋದಿ ಇಂದು ಬಲವಾದ ಸಂದೇಶವನ್ನು ನೀಡಿದ್ದರು. ಭಾರತವು ತನ್ನ ರೈತರು, ಜಾನುವಾರು ಸಾಕಣೆದಾರರು ಮತ್ತು ಮೀನುಗಾರರ ಹಿತಾಸಕ್ತಿಗಳ ಬಗ್ಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. “ಭಾರತ ತನ್ನ ರೈತರು, ಜಾನುವಾರು ಸಾಕಣೆದಾರರು ಮತ್ತು ಮೀನುಗಾರ ಸಹೋದರ ಸಹೋದರಿಯರ ಹಿತಾಸಕ್ತಿಗಳ ಬಗ್ಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಇದಕ್ಕಾಗಿ ನಾನು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ನನಗೆ ವೈಯಕ್ತಿಕವಾಗಿ ತಿಳಿದಿದೆ. ಆದರೆ ನಾನು ಅದಕ್ಕೆ ಸಿದ್ಧನಿದ್ದೇನೆ. ಭಾರತ ತನ್ನ ರೈತರೊಂದಿಗೆ ದೃಢವಾಗಿ ನಿಲ್ಲುತ್ತದೆ ಮತ್ತು ಅವರ ಕಲ್ಯಾಣಕ್ಕಾಗಿ ನಾನು ಏನು ಬೇಕಾದರೂ ಎದುರಿಸಲು ಸಿದ್ಧನಿದ್ದೇನೆ” ಎಂದು ಮೋದಿ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ